ಪುನೀತ್ ಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ: ಬೆಂಗಳೂರಿಗೆ ಆಗಮಿಸಿದ ಸೂಪರ್ ಸ್ಟಾರ್ ರಜನಿಕಾಂತ್ 

ಪವರ್ ಸ್ಟಾರ್ ಡಾ. ಪುನೀತ್ ರಾಜ್ ಕುಮಾರ್ ಅವರಿಗೆ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಇಂದು ಸಂಜೆ ನಡೆಯುವ ಕಾರ್ಯಕ್ರಮದಲ್ಲಿ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.
ರಜನಿಕಾಂತ್ ಗೆ ಹೆಚ್ ಎಎಲ್ ವಿಮಾನ ನಿಲ್ದಾಣದಲ್ಲಿ ಸ್ವಾಗತ
ರಜನಿಕಾಂತ್ ಗೆ ಹೆಚ್ ಎಎಲ್ ವಿಮಾನ ನಿಲ್ದಾಣದಲ್ಲಿ ಸ್ವಾಗತ

ಬೆಂಗಳೂರು: ಪವರ್ ಸ್ಟಾರ್ ಡಾ. ಪುನೀತ್ ರಾಜ್ ಕುಮಾರ್ ಅವರಿಗೆ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಇಂದು ಸಂಜೆ ನಡೆಯುವ ಕಾರ್ಯಕ್ರಮದಲ್ಲಿ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಈ  ಸಮಾರಂಭದಲ್ಲಿ   ಗೌರವಾನ್ವಿತ ಅತಿಥಿಯಾಗಿ ಪಾಲ್ಗೊಳ್ಳಲು ಸೂಪರ್ ಸ್ಟಾರ್ ರಜನಿಕಾಂತ್ ಬೆಂಗಳೂರಿಗೆ ಆಗಮಿಸಿದರು. 

ಹೆಚ್ ಎಎಲ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ರಜನಿಕಾಂತ್ ಅವರನ್ನು ಸಚಿವರಾದ ಡಾ. ಕೆ. ಸುಧಾಕರ್ ಮತ್ತು, ಮುನಿರತ್ನ ಅವರು ಆತ್ಮೀಯವಾಗಿ ಬರಮಾಡಿಕೊಂಡರು. ಕಾರ್ಯಕ್ರಮ ಆರಂಭವಾಗುವವರೆಗೂ  ಐಟಿಸಿ ಗಾರ್ಡೆನಿಯಾ ಹೋಟೆಲ್ ನಲ್ಲಿ ರಜನಿಕಾಂತ್ ವಾಸ್ತವ್ಯ ಹೂಡಲಿದ್ದಾರೆ. ತೆಗುಲಿನ ಜ್ಯೂನಿಯರ್ ಎನ್ ಟಿಆರ್ ಕೂಡಾ ಕೆಲವೇ ಗಂಟೆಗಳಲ್ಲಿ ಬೆಂಗಳೂರಿಗೆ ಆಗಮಿಸಲಿದ್ದಾರೆ. 

ಇನ್ನೂ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭಕ್ಕಾಗಿ ವಿಧಾನಸೌಧ ಮೆಟ್ಟಿಲುಗಳ ಮೇಲೆ ಭವ್ಯ ವೇದಿಕೆ ಹಾಕಲಾಗಿದ್ದು, 22-25 ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ವೇದಿಕೆ ಮೇಲೆ ಪುನೀತ್ ರಾಜ್ ಕುಮಾರ್ ಅವರ ಕುಟುಂಬಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ. ಸಂಜೆ 4 ರಿಂದ 5 ಗಂಟೆಯವರೆಗೂ ಸಂಗೀತ ಕಾರ್ಯಕ್ರಮವಿರಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡಿ, ಮಾತನಾಡಲಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com