ಕಲಬುರಗಿಯಲ್ಲಿ ಅಮಾನುಷ ಕೃತ್ಯ: ಕಬ್ಬಿನ ಗದ್ದೆಯಲ್ಲಿ 15 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ
ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಅಮಾನುಷ ಘಟನೆ ಕಲಬುರಗಿ ಜಿಲ್ಲೆಯ ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯ ಕೊರಳ್ಳಿ ಗ್ರಾಮದ ಹೊರವಲಯದಲ್ಲಿ ನಿನ್ನೆ ಮಂಗಳವಾರ ಸಂಜೆ ನಡೆದಿದೆ.
Published: 02nd November 2022 08:54 AM | Last Updated: 02nd November 2022 02:21 PM | A+A A-

ಸಾಂದರ್ಭಿಕ ಚಿತ್ರ
ಕಲಬುರಗಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಅಮಾನುಷ ಘಟನೆ ಕಲಬುರಗಿ ಜಿಲ್ಲೆಯ ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯ ಕೊರಳ್ಳಿ ಗ್ರಾಮದ ಹೊರವಲಯದಲ್ಲಿ ನಿನ್ನೆ ಮಂಗಳವಾರ ಸಂಜೆ ನಡೆದಿದೆ.
ಅಫಜಲಪುರ ತಾಲೂಕಿನ 15 ವರ್ಷದ ಬಾಲಕಿ ಕೊರಳ್ಳ ಗ್ರಾಮದ ಸಂಬಂಧಿಕರ ಮನೆಯಲ್ಲಿದ್ದುಕೊಂಡು ಶಾಲೆಗೆ ಹೋಗುತ್ತಿದ್ದಳು ಎಂದು ಆಳಂದ ಡಿಎಸ್ಪಿ ರವೀಂದ್ರ ಶಿರೋರ್ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ. ದೀಪಾವಳಿಯನ್ನು ತನ್ನ ಮನೆಯಲ್ಲಿ ಆಚರಿಸಿದ ನಂತರ ಮಂಗಳವಾರ ಸಂಬಂಧಿಕರ ಮನೆಗೆ ಹಿಂತಿರುಗಿದ್ದಳು.
ಸಾಯಂಕಾಲ ಹೊತ್ತು ಬಹಿರ್ದೆಸೆಗೆಂದು ಗದ್ದೆಯ ಕಡೆಗೆ ಹೋಗಿದ್ದ ವೇಳೆ ದುಷ್ಕರ್ಮಿಗಳು ಆಕೆಯನ್ನು ಎಳೆದುಕೊಂಡು ಹೋಗಿ ಅತ್ಯಾಚಾರವೆಸಗಿ ಕೊಲೆ ಮಾಡಿರಬಹುದು ಎಂದು ಹೇಳಲಾಗುತ್ತಿದೆ. ಗ್ರಾಮದ ಹೊರವಲಯದಲ್ಲಿರುವ ಕಬ್ಬಿನ ಗದ್ದೆಯಲ್ಲಿ ಆಕೆಯ ಶವ ಪತ್ತೆಯಾಗಿದ್ದು, ಆಕೆಯ ಕೈಕಾಲು ಕಟ್ಟಿ ಅತ್ಯಾಚಾರವೆಸಗಿ ಬಳಿಕ ಅಪರಿಚಿತ ಆರೋಪಿಗಳು ಕತ್ತು ಹಿಸುಕಿ ಕೊಲೆಗೈದಿರಬಹುದು ಎಂದು ಹೇಳಲಾಗುತ್ತಿದೆ.
ಪೊಲೀಸರು ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ಆರಂಭಿಸಿದ್ದಾರೆ ಎಂದು ಶಿರೂರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಕಲಬುರಗಿ ಎಸ್ಪಿ ಇಶಾ ಪಂತ್, ಹೆಚ್ಚುವರಿ ಎಸ್ಪಿ ಪ್ರಸನ್ನ ದೇಸಾಯಿ ಭೇಟಿ ನೀಡಿದ್ದಾರೆ.