ಇನ್ವೆಸ್ಟ್​ ಕರ್ನಾಟಕ 2022ಕ್ಕೆ ಪ್ರಧಾನಿ ಮೋದಿ ಇಂದು ಚಾಲನೆ; 5 ಲಕ್ಷ ರೂ. ಕೋಟಿ ಹೂಡಿಕೆ ನಿರೀಕ್ಷೆ

ಬೆಂಗಳೂರಿನಲ್ಲಿ ನ.2ರಿಂದ ನ. 4ರವರೆಗೆ ನಡೆಯಲಿರುವ ಇನ್ವೆಸ್ಟ್​ ಕರ್ನಾಟಕ-2022 ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ಬೆಳಿಗ್ಗೆ ಚಾಲನೆ ನೀಡಲಿದ್ದಾರೆ.
ಪ್ರಧಾನಿ ಮೋದಿ
ಪ್ರಧಾನಿ ಮೋದಿ

ಬೆಂಗಳೂರು: ಬೆಂಗಳೂರಿನಲ್ಲಿ ನ.2ರಿಂದ ನ. 4ರವರೆಗೆ ನಡೆಯಲಿರುವ ಇನ್ವೆಸ್ಟ್​ ಕರ್ನಾಟಕ-2022 ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ಬೆಳಿಗ್ಗೆ ಚಾಲನೆ ನೀಡಲಿದ್ದಾರೆ.

ಇಂದು ಬೆಳಿಗ್ಗೆ 10.30ಕ್ಕೆ ವರ್ಚುವಲ್ ಮೂಲಕ ಪ್ರಧಾನಿ ಮೋದಿಯವರು ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಚಾಲನೆ ನೀಡಲಿದ್ದಾರೆ. ಸಮಾವೇಶದಲ್ಲಿ ರಾಜ್ಯವು ರೂ.5 ಲಕ್ಷ ಕೋಟಿ ಹೂಡಿಕೆಯ ನಿರೀಕ್ಷೆಗಳನ್ನು ಇಟ್ಟುಕೊಂಡಿದೆ.

ಸಮಾವೇಶಕ್ಕೆ ಚಾಲನೆ ನೀಡುವ ಕುರಿತು ಮಾಹಿತಿ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಇಂದು ಬೆಳಿಗ್ಗೆ 10.30ಕ್ಕೆ ಇನ್ವೆಸ್ಟ್ ಕರ್ನಾಟಕ 2022ಕ್ಕೆ ಚಾಲನೆ ನೀಡಲಿದ್ದೇನೆ. ಇದು ಜಾಗತಿಕ ಹೂಡಿಕೆದಾರರ ಸಭೆಯಾಗಿದ್ದು, ಕರ್ನಾಟಕದ ಸಂಭಾವ್ಯ ಕೊಡುಗೆಗಳನ್ನು ಪ್ರದರ್ಶಿಸುತ್ತದೆ. ಸ್ಟಾರ್ಟ್‌ಅಪ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕರ್ನಾಟಕದ ದಾಪುಗಾಲು ಜಾಗತಿಕ ಗಮನವನ್ನು ಸೆಳೆಯಲಿದೆ ಎಂದು ಹೇಳಿದ್ದಾರೆ.

ಸಮಾವೇಶದಲ್ಲಿ ಕರ್ನಾಟಕದ ರಾಜ್ಯಪಾಲರು, ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ಸಚಿವರಾದ ಪಿಯೂಶ್‌ ಗೋಯೆಲ್‌, ಪ್ರಲ್ಹಾದ್‌ ಜೋಶಿ, ಸ್ಮೃತಿ ಇರಾನಿ, ರಾಜೀವ್‌ ಚಂದ್ರಶೇಖರ್‌, ಶೋಭಾ ಕರಂದ್ಲಾಜೆ, ಎ. ನಾರಾಯಣಸ್ವಾಮಿ ಹಾಗೂ ಖ್ಯಾತ ಉದ್ಯಮಿಗಳು ಸಮ್ಮೇಳನದಲ್ಲಿ ಭಾಗಿಯಾಗಲಿದ್ದಾರೆ.

ನವೆಂಬರ್ 4ರಂದು ಜಾಗತಿಕ ಹೂಡಿಕೆದಾರರ ಸಮಾವೇಶದ ಸಮಾರೋಪ ನಡೆಯಲಿದ್ದು, ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭಾಗವಹಿಸಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com