ಆರ್ಥಿಕ ಉತ್ತೇಜನ, ಉದ್ಯೋಗ, ಭವಿಷ್ಯದ ತಂತ್ರಜ್ಞಾನದ ಉದ್ದೇಶದಿಂದ ಹೂಡಿಕೆ: TNIE ಸಂದರ್ಶನದಲ್ಲಿ ಸಿಎಂ ಬೊಮ್ಮಾಯಿ

ಆರು ವರ್ಷಗಳ ನಂತರ ಜಾಗತಿಕ ಹೂಡಿಕೆದಾರರ ಸಮಾವೇಶ (GIM) ನಡೆಯುತ್ತಿದ್ದು, 2022ರ ಆವೃತ್ತಿಯು ಜಾಗತಿಕ ಆರ್ಥಿಕ ಹಿಂಜರಿತದ ಪರಿಸ್ಥಿತಿಯ ನಡುವೆ ಕರ್ನಾಟಕದ ಆರ್ಥಿಕ ಪರಿಸ್ಥಿತಿ ಭರವಸೆಯಲ್ಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ
Updated on

ಬೆಂಗಳೂರು: ಆರು ವರ್ಷಗಳ ನಂತರ ಜಾಗತಿಕ ಹೂಡಿಕೆದಾರರ ಸಮಾವೇಶ (GIM) ನಡೆಯುತ್ತಿದ್ದು, 2022ರ ಆವೃತ್ತಿಯು ಜಾಗತಿಕ ಆರ್ಥಿಕ ಹಿಂಜರಿತದ ಪರಿಸ್ಥಿತಿಯ ನಡುವೆ ಕರ್ನಾಟಕದ ಆರ್ಥಿಕ ಪರಿಸ್ಥಿತಿ ಭರವಸೆಯಲ್ಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. (CM Basavaraja Bommai)

GIM-2022 ಸಮಾವೇಶದ ಹಿಂದಿನ ಮುಖ್ಯ ರೂವಾರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಮಾವೇಶದ ಆರಂಭ ದಿನವಾದ ನಿನ್ನೆ  ಬೆಂಗಳೂರಿನ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಕಚೇರಿಗೆ ಭೇಟಿ ನೀಡಿದ್ದರು. ಅವರ ಆಲೋಚನೆಗಳು, ಉದ್ದೇಶಗಳು ಮತ್ತು ಅವರ ದೃಷ್ಟಿಕೋನವನ್ನು ತೆರೆದಿಟ್ಟರು. 

ಕಚೇರಿಯಲ್ಲಿ ಪತ್ರಕರ್ತರೊಂದಿಗೆ ನಡೆಸಿದ ಸಂವಾದದಲ್ಲಿ, ರಾಜ್ಯದಲ್ಲಿ ಹೂಡಿಕೆಗಳು ಆರ್ಥಿಕ ಚಟುವಟಿಕೆಗಳನ್ನು ಉತ್ತೇಜಿಸುವುದು, ಉದ್ಯೋಗವನ್ನು ಸೃಷ್ಟಿಸುವುದು ಮತ್ತು ತಂತ್ರಜ್ಞಾನಗಳಲ್ಲಿ ನಾಯಕತ್ವವನ್ನು ಕಾಪಾಡಿಕೊಳ್ಳುವ ಗುರಿಯನ್ನು ಹೊಂದಿವೆ.

ಹಲವಾರು ದೇಶಗಳು ಆರ್ಥಿಕ ಹಿಂಜರಿತವನ್ನು ಇಂದು ಎದುರಿಸುತ್ತಿರುವಾಗ, ಭಾರತ ಅದರಲ್ಲೂ ನಿರ್ದಿಷ್ಟವಾಗಿ ಕರ್ನಾಟಕ, ವಿಶ್ವದಾದ್ಯಂತ ಹೂಡಿಕೆದಾರರನ್ನು ಹೂಡಿಕೆ ಮಾಡಲು ಆಕರ್ಷಿಸುತ್ತಿದೆ. ರಾಜ್ಯದ ನಾಯಕರು ರಾಜ್ಯದ ಭವಿಷ್ಯದ ಬಗ್ಗೆ ಉತ್ಸುಕರಾಗಿದ್ದಾರೆ ಎಂದು ಹೇಳದ್ದು ಮುಖ್ಯಮಂತ್ರಿಗಳ ಜೊತೆಗೆ ನಡೆಸಿದ ಸಂಪೂರ್ಣ ಸಂದರ್ಶನ ಇದೇ ಭಾನುವಾರ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯಲ್ಲಿ (TNIE) ಪ್ರಕಟವಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com