ಶಾಲಾ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ 10 ನಿಮಿಷ ಧ್ಯಾನ ಕಡ್ಡಾಯ: ಸಚಿವ ಬಿ.ಸಿ.ನಾಗೇಶ್ ಸೂಚನೆ
ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಶಾಲಾ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಧ್ಯಾನ ಮಾಡುವ ಸಂಬಂಧ ಆದೇಶ ಹೊರಡಿಸಲು ಸೂಚನೆ ನೀಡಿದ್ದಾರೆ.
Published: 03rd November 2022 02:10 PM | Last Updated: 05th November 2022 12:24 PM | A+A A-

ಬಿ.ಸಿ ನಾಗೇಶ್
ಬೆಂಗಳೂರು: ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಹೆಚ್ಚಿಸಲು, ಆರೋಗ್ಯ ವೃದ್ಧಿ, ಒತ್ತಡ ಮುಕ್ತವಾಗಿಸಲು ಶಿಕ್ಷಣ ಇಲಾಖೆ ಧ್ಯಾನದ ಮೊರೆ ಹೋಗಿದೆ. ಇನ್ನು ಮುಂದೆ ಶಾಲಾ-ಕಾಲೇಜುಗಳಲ್ಲಿ 10 ನಿಮಿಷ ವಿದ್ಯಾರ್ಥಿಗಳಿಗೆ ಧ್ಯಾನ ಮಾಡಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.
ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಶಾಲಾ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಧ್ಯಾನ ಮಾಡುವ ಸಂಬಂಧ ಆದೇಶ ಹೊರಡಿಸಲು ಸೂಚನೆ ನೀಡಿದ್ದಾರೆ. ನಿತ್ಯ ಶಾಲಾ-ಕಾಲೇಜುಗಳಲ್ಲಿ 10 ನಿಮಿಷ ವಿದ್ಯಾರ್ಥಿಗಳು ಕಡ್ಡಾಯವಾಗಿ ಧ್ಯಾನ ಮಾಡಬೇಕು. ಇದಕ್ಕಾಗಿ ಸಮಯ ನಿಗದಿ ಮಾಡುವಂತೆ ಸೂಚನೆ ನೀಡಿದ್ದಾರೆ.
ಈ ಪತ್ರವನ್ನು ಉಲ್ಲೇಖಿಸಿ ತಮ್ಮ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರಿಗೆ ಟಿಪ್ಪಣಿ ನೀಡಿರುವ ಸಚಿವರು ರಾಜ್ಯ ಎಲ್ಲ ಶಾಲೆ, ಪಿಯು ಕಾಲೇಜುಗಳಲ್ಲಿ ನಿತ್ಯ 10 ನಿಮಿಷ ಮಕ್ಕಳು ಧ್ಯಾನದಲ್ಲಿ ತೊಡಗಲು ಸಮಯ ನಿಗದಿಪಡಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ಬಿ.ಸಿ. ನಾಗೇಶ್ ಅವರು ಪತ್ರದ ಮೇಲೆ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಆದೇಶ ಹೊರಡಿಸಲಿದ್ದು, ಶೀಘ್ರವೇ ಶಾಲಾ-ಕಾಲೇಜುಗಳಲ್ಲಿ ಧ್ಯಾನದ ಮಾಡುವ ಆದೇಶ ಅಧಿಕೃತವಾಗಲಿದೆ.