ಶಿವಮೊಗ್ಗ: ಸಾಹಿತಿ ಪ್ರೊ. ಭಗವಾನ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ
ಧಾರ್ಮಿಕ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ಕೃತಿ ರಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಎಂಎಫ್‌ಸಿ ನ್ಯಾಯಾಲಯ ಸಾಹಿತಿ ಕೆ.ಎಸ್. ಭಗವಾನ್ ವಿರುದ್ಧ ಬುಧವಾರ ಜಾಮೀನು ರಹಿತ ವಾರಂಟ್ ಹೊರಡಿಸಿದೆ.
Published: 03rd November 2022 08:48 AM | Last Updated: 03rd November 2022 08:48 AM | A+A A-

ಕೆ.ಎಸ್. ಭಗವಾನ್
ಸಾಗರ: ಧಾರ್ಮಿಕ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ಕೃತಿ ರಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಎಂಎಫ್‌ಸಿ ನ್ಯಾಯಾಲಯ ಸಾಹಿತಿ ಕೆ.ಎಸ್. ಭಗವಾನ್ ವಿರುದ್ಧ ಬುಧವಾರ ಜಾಮೀನು ರಹಿತ ವಾರಂಟ್ ಹೊರಡಿಸಿದೆ.
ಭಗವಾನ್ ಅವರು ತಮ್ಮ ‘ರಾಮ ಮಂದಿರ ಏಕೆ ಬೇಡ’ ಕೃತಿಯಲ್ಲಿ ಹಿಂದೂ ಧರ್ಮೀಯರ ಭಾವನೆಗೆ ಧಕ್ಕೆ ತರುವ ಸಂಗತಿಗಳನ್ನು ನಿರೂಪಿಸಿದ್ದಾರೆ ಎಂದು ಆರೋಪಿಸಿ ಮಹಾಬಲೇಶ್ವರ ಎಂಬುವವರು ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.
ಕೋರ್ಟ್ಗೆ ಹಾಜರಾಗದ ಸಾಹಿತಿ ಭಗವಾನ್ ಬಂಧನಕ್ಕೆ ಜಾಮೀನು ರಹಿತ ವಾರೆಂಟ್ ಮಾಡಿ ಸಾಗರ ಕೋರ್ಟ್ ಆದೇಶ ಮಾಡಿದೆ. ಈ ಪ್ರಕರಣದ ಕುರಿತು ದೀರ್ಘಕಾಲದ ವಿಚಾರಣೆ ನಡೆಸಿದ ನ್ಯಾಯಾಲಯ ಭಗವಾನ್ ವಿರುದ್ಧ ಐಪಿಸಿ ಸೆಕ್ಷನ್ 295(ಎ) ಅಡಿಯಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ಸಂಬಂಧ ಕ್ರಿಮಿನಲ್ ಪ್ರಕರಣ ದಾಖಲು ಮಾಡಿತ್ತು.
ಪ್ರಕರಣದ ವಿಚಾರಣೆಗೆ ಇಂದು ಭಗವಾನ್ ಖುದ್ದು ನ್ಯಾಯಾಲಯಕ್ಕೆ ಹಾಜರಾಗಬೇಕೆಂದು ಮೈಸೂರು ಎಸ್ಪಿ ಅವರ ಮೂಲಕ ಸಮನ್ಸ್ ಜಾರಿ ಮಾಡಿತ್ತು. ಸಮನ್ಸ್ ಜಾರಿ ಮಾಡಿದ್ದರೂ ಸಹ ಇಂದು ಸಾಹಿತಿ ಭಗವಾನ್ ಅವರು ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ.