ಡಿಕೆ ಶಿವಕುಮಾರ್ ಮತ್ತೆ ಇಡಿ ನೋಟಿಸ್, ನವೆಂಬರ್ 7 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಜಾರಿ ನಿರ್ದೇಶನಾಲಯ ಶುಕ್ರವಾರ ಮತ್ತೆ ನೋಟಿಸ್ ಜಾರಿ ಮಾಡಿದೆ.
ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಜಾರಿ ನಿರ್ದೇಶನಾಲಯ ಶುಕ್ರವಾರ ಮತ್ತೆ ನೋಟಿಸ್ ಜಾರಿ ಮಾಡಿದೆ.

ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ರಾಜ್ಯ ಪ್ರವೇಶಿಸಿದ್ದ ವೇಳೆ ಡಿಕೆ ಶಿವಕುಮಾರ್ ಅವರಿಗೆ ನೋಟಿಸ್ ನೀಡಿದ್ದ ಇಡಿ, ಈಗ ಮತ್ತೆ ನೋಟಿಸ್ ನೀಡಿದ್ದು, ನವೆಂಬರ್ 7ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

ಕಾಂಗ್ರೆಸ್ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನವೆಂಬರ್ 6 ರಂದು ಬೆಂಗಳೂರಿಗೆ ಆಗಮಿಸುತ್ತಿದ್ದು, ಅವರಿಗೆ ಅದ್ಧೂರಿ ಸ್ವಾಗತ ನೀಡಲು ಭರ್ಜರಿ ಸಿದ್ಧತೆ ನಡೆಸುತ್ತಿದ್ದ ಕೆಪಿಸಿಸಿ ಅಧ್ಯಕ್ಷರಿಗೆ ಈಗ ಇಡಿ ನೋಟಿಸ್ ತೀವ್ರ ಇಕ್ಕಟ್ಟಿಗೆ ಸಿಲುಕಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com