ಬಾಬರಿ ಮಸೀದಿ ತೀರ್ಪು ವಿರೋಧಿಸಿ ಪ್ರತಿಭಟನೆ: ಯುವಕನ ವಿರುದ್ಧದ ವಿಚಾರಣೆ ರದ್ಧುಗೊಳಿಸಿದ ಹೈಕೋರ್ಟ್

ಮಂಗಳೂರು ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಸುಪ್ರೀಂಕೋರ್ಟ್ ತೀರ್ಪಿನ ವಿರುದ್ಧ ಘೋಷಣೆ ಕೂಗುತ್ತ ಪ್ರತಿಭಟಿಸಿದ ಆರೋಪದಲ್ಲಿ ತನ್ನ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದು ಕೋರಿ 25 ವರ್ಷದ ಆರೋಪಿ ಸಫ್ವಾನ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೆ ನಟರಾಜನ್ ಅವರ ನೇತೃತ್ವದ ಏಕಸದಸ್ಯ ಪೀಠವು ಮಾನ್ಯ ಮಾಡಿದೆ.
ಕರ್ನಾಟಕ ಹೈಕೋರ್ಟ್
ಕರ್ನಾಟಕ ಹೈಕೋರ್ಟ್

ಬೆಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಆವರಣದೊಳಗೆ ಅಯೋಧ್ಯೆ-ಬಾಬರಿ ಮಸೀದಿ ಪ್ರಕರಣದ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಘೋಷಣೆಗಳನ್ನು ಕೂಗುವ ಮೂಲಕ ಧರ್ಮದ ಆಧಾರದ ಮೇಲೆ ಎರಡು ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸಿದ ಆರೋಪದ ಮೇಲೆ ಯುವಕನ ವಿರುದ್ಧ ದಾಖಲಿಸಿದ್ದ ಕ್ರಿಮಿನಲ್ ಮೊಕದ್ದಮೆಯನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. .

ಮಂಗಳೂರು ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಸುಪ್ರೀಂಕೋರ್ಟ್ ತೀರ್ಪಿನ ವಿರುದ್ಧ ಘೋಷಣೆ ಕೂಗುತ್ತ ಪ್ರತಿಭಟಿಸಿದ ಆರೋಪದಲ್ಲಿ ತನ್ನ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದು ಕೋರಿ 25 ವರ್ಷದ ಆರೋಪಿ ಸಫ್ವಾನ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೆ ನಟರಾಜನ್ ಅವರ ನೇತೃತ್ವದ ಏಕಸದಸ್ಯ ಪೀಠವು ಮಾನ್ಯ ಮಾಡಿದೆ.

ಮಂಗಳೂರು ವಿವಿ ಬಳಿ ನೆಲೆಸಿರುವ ಸ್ಥಳೀಯ ನಿವಾಸಿ ಅರ್ಜಿದಾರ ಪ್ರಕರಣದ ಇತರ ಆರೋಪಿಗಳಾಗಿರುವ ಕ್ಯಾಂಪಸ್ ಫ್ರಂಟ್‌ ಆಫ್‌ ಇಂಡಿಯಾದ (ಸಿಎಫ್‌ಐ) ಸದಸ್ಯರೊಂದಿಗೆ ಬ್ಯಾನರ್ ಹಿಡಿದು ವಿಶ್ವವಿದ್ಯಾಲಯದ ಕ್ಯಾಂಪಸ್‌ಗೆ ತೆರಳಿ, ಅಯೋಧ್ಯಾ-ಬಾಬ್ರಿ ಮಸೀದಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ವಿರುದ್ಧ ಪ್ರತಿಭಟನೆ ನಡೆಸಿದ್ದರು.

ಇದು ಧರ್ಮದ ಆಧಾರದ ಮೇಲೆ ಎರಡು ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುತ್ತದೆಯೇ ಹೊರತು, ಬೇರೇನೂ ಅಲ್ಲ. ಮಂಗಳೂರು ಭಾಗದಲ್ಲಿ ಸೌಹಾರ್ದತೆಗೆ ಧಕ್ಕೆ ತರುವಂತಹ ಕೃತ್ಯವಾಗಿದ್ದು, ಇದನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ. ಅರ್ಜಿದಾರರ ಕೃತ್ಯಕ್ಕೆ ಪುರಾವೆಗಳೂ ಲಭ್ಯವಿದ್ದು, ಇದು ಐಪಿಸಿ ಸೆಕ್ಷನ್ 153-ಎ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಅಯೋಧ್ಯಾ-ಬಾಬ್ರಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ 2019ರಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪು ವಿರೋಧಿಸಿ ಮಂಗಳೂರಿನಲ್ಲಿ ಪಿಎಫ್‌ಐ ಹಾಗೂ ಸಿಎಫ್‌ಐ ಸಂಘಟನೆಗಳ ಸದಸ್ಯರು ಪ್ರತಿಭಟನೆ ನಡೆಸಿದ್ದರು. ಆ ಗುಂಪಿನಲ್ಲಿ ಸೇರಿಕೊಂಡು ಸಿಎಫ್‌ಐ ಬ್ಯಾನರ್ ಹಿಡಿದು ಘೋಷಣೆ ಕೂಗಿದ ಆರೋಪ ಅರ್ಜಿದಾರರ ಮೇಲಿದೆ. ಈ ಸಂಬಂಧ ಕೋಣಾಜೆ ಪೊಲೀಸರು ಅರ್ಜಿದಾರರೂ ಸೇರಿ ಪ್ರತಿಭಟನಾ ನಿರತ ಗುಂಪಿನ ಸದಸ್ಯರ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದರು. ಪ್ರಕರಣದಲ್ಲಿ ಅರ್ಜಿದಾರ ಸಫ್ವಾನ್‌ 11ನೇ ಆರೋಪಿಯಾಗಿದ್ದಾರೆ..

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com