ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿ ಕುಡಿಯುವ ನೀರು ವ್ಯವಸ್ಥೆ ಜಾರಿಗೆ ಸರ್ಕಾರ ಮುಂದು!

ನಗರ ಸ್ಥಳೀಯ ಸಂಸ್ಥೆಗಳು, ಪಟ್ಟಣ ಪಂಚಾಯಿತಿಗಳು, ಪಟ್ಟಣ ಪುರಸಭೆಗಳು ಮತ್ತು ನಗರ ಪಾಲಿಕೆಗಳು ಸೇರಿದಂತೆ ಎಲ್ಲಾ 224 ಕ್ಷೇತ್ರಗಳಲ್ಲಿರುವ ಮನೆಗಳಿಗೆ ಸುರಕ್ಷಿತ ಕುಡಿಯುವ ನೀರು ಒದಗಿಸಲು ರಾಜ್ಯ ಸರ್ಕಾರ ಯೋಜನೆ ರೂಪಿಸಿದ್ದು, ಶೀಘ್ರದಲ್ಲೇ ಈ ಕುರಿತು ಅಧಿಕೃತ ಮಾಹಿತಿಗಳು ಹೊರ ಬೀಳಲಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳು, ಪಟ್ಟಣ ಪಂಚಾಯಿತಿಗಳು, ಪಟ್ಟಣ ಪುರಸಭೆಗಳು ಮತ್ತು ನಗರ ಪಾಲಿಕೆಗಳು ಸೇರಿದಂತೆ ಎಲ್ಲಾ 224 ಕ್ಷೇತ್ರಗಳಲ್ಲಿರುವ ಮನೆಗಳಿಗೆ ಸುರಕ್ಷಿತ ಕುಡಿಯುವ ನೀರು ಒದಗಿಸಲು ರಾಜ್ಯ ಸರ್ಕಾರ ಯೋಜನೆ ರೂಪಿಸಿದ್ದು, ಶೀಘ್ರದಲ್ಲೇ ಈ ಕುರಿತು ಅಧಿಕೃತ ಮಾಹಿತಿಗಳು ಹೊರ ಬೀಳಲಿದೆ.

ನವೆಂಬರ್ 11 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಯೋಜನೆಯನ್ನು ಉದ್ಘಾಟಿಸಲಿದ್ದಾರೆಂದು ಹೇಳಲಾಗುತ್ತಿದೆ.

ರಾಜ್ಯ ವಿಧಾನಸಭಾ ಚುನಾವಣೆಗೆ ಆರು ತಿಂಗಳುಗಳು ಬಾಕಿಯಿದ್ದು, ಮನೆಗಳಿಗೆ ಸುರಕ್ಷಿತ ಕುಡಿಯುವ ನೀರಿಗಾಗಿ ಜನರಿಂದ ಭಾರಿ ಬೇಡಿಕೆಯಿರುವುದರಿಂದ ಚುನಾವಣೆ ವೇಳೆ ಇದು ಆಡಳಿತಾರೂಢ ಬಿಜೆಪಿಗೆ ಗೇಮ್ ಚೇಂಜರ್ ಆಗಿ ಕೆಲಸ ಮಾಡಲಿದೆ ಎಂದು ಹೇಳಲಾಗುತ್ತಿದೆ.

ಈ ಸಂಬಂಧ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಅವರನ್ನು ಸಂಪರ್ಕಿಸಲಾಗಿದ್ದು, ಪುನರುಜ್ಜೀನನ ಮತ್ತು ನಗರ ಪರಿವರ್ತನೆಗಾಗಿ ಅಮೃತ್ 2-ಅಟಲ್ ಮಿಷನ್ ಮೂಲಕ ಹಣವನ್ನು ಒದಗಿಸಲಾಗುತ್ತಿದೆ. ಯೋಜನಾ ವೆಚ್ಚ ಸುಮಾರು 7,300 ಕೋಟಿ ರೂ. ಆಗಲಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು , ''ಎಲ್ಲಾ ಮನೆಗಳಿಗೆ, ಅದರಲ್ಲೂ ಸಣ್ಣ ಪ್ರದೇಶಗಳಲ್ಲಿ, ಸುರಕ್ಷಿತ ಕುಡಿಯುವ ನೀರನ್ನು ಪೂರೈಸಲು ಇದೂವರೆಗೆ ಯಾವ ಪ್ರಧಾನಿಯೂ ಮುಂದೆ ಬಂದಿರಲಿಲ್ಲ. ಆದರೆ, ಆ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ ಎಂದು ಹೇಳಿದರು.

 ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮಾತನಾಡಿ. ಈ ಯೋಜನೆಯು ಗುತ್ತಿಗೆದಾರರು ಮತ್ತು ಅಧಿಕಾರಶಾಹಿಗಳಿಗೆ ಮಾತ್ರ ಪ್ರಯೋಜನವನ್ನು ನೀಡುತ್ತದೆ ಎಂದು ತಿಳಿಸಿದ್ದಾರೆ.

ಈ ಮಹತ್ವಾಕಾಂಕ್ಷೆಯ ಯೋಜನೆ ಕಾಗದದಲ್ಲಿ ಮಾತ್ರ ಉಳಿಯಲಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಕೋವಿಡ್‌ನಿಂದ ಸಾವನ್ನಪ್ಪಿದವರ ಕುಟುಂಬಸ್ಥರಿಗೆ ರೂ.1 ಲಕ್ಷ ರೂಪಾಯಿ ನೀಡುವುದಾಗಿ ಭರವಸೆ ನೀಡಿದ್ದರು. ಎಷ್ಟು ಜನರಿಗೆ ಆ ಪರಿಹಾರ ಸಿಕ್ಕಿದೆ ಎಂಬುದನ್ನು ಪರಿಶೀಲಿಸಿ ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com