ವ್ಯಾಜ್ಯಗಳ ಪರಿಹಾರಕ್ಕಾಗಿ ಮಧ್ಯಸ್ಥಿಕೆ ಕೇಂದ್ರ ಸ್ಥಾಪನೆಗೆ ಸರ್ಕಾರ ಸಿದ್ಧ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ವ್ಯಾಜ್ಯಗಳ ಶೀಘ್ರ ಪರಿಹಾರಕ್ಕಾಗಿ ಮಧ್ಯಸ್ಥಿಕೆ ಕೇಂದ್ರ ಸ್ಥಾಪನೆ ಸೇರಿದಂತೆ ಇತರೆ ಪೂರಕ ವ್ಯವಸ್ಥೆಗಳನ್ನು ಪೂರೈಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂದು ತಿಳಿಸಿದರು.
Published: 05th November 2022 10:50 PM | Last Updated: 05th November 2022 10:50 PM | A+A A-

ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ವ್ಯಾಜ್ಯಗಳ ಶೀಘ್ರ ಪರಿಹಾರಕ್ಕಾಗಿ ಮಧ್ಯಸ್ಥಿಕೆ ಕೇಂದ್ರ ಸ್ಥಾಪನೆ ಸೇರಿದಂತೆ ಇತರೆ ಪೂರಕ ವ್ಯವಸ್ಥೆಗಳನ್ನು ಪೂರೈಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂದು ತಿಳಿಸಿದರು.
ಅವರು ಇಂದು ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ವಕೀಲ ಸಂಘ, ಲೋಕೋಪಯೋಗಿ ಇಲಾಖೆ ಹಾಗೂ ಕಟ್ಟಡ ಸಮಿತಿ ವತಿಯಿಂದ ಆಯೋಜಿಸಿದ್ದ ವಕೀಲರ ಭವನದ 5, 6 ಮತ್ತು 7 ನೇ ಮಹಡಿಯನ್ನು ಉದ್ಘಾಟಿಸಿದರು. ನಮ್ಮ ಸಮಾಜದಲ್ಲಿ ಬಹಳಷ್ಟು ವ್ಯಾಜ್ಯಗಳಿವೆ. ಇಲ್ಲಿ ನ್ಯಾಯ ದೊರೆಯುವ ವ್ಯವಸ್ಥೆಯಲ್ಲಿಯೂ ಬದಲಾವಣೆ ಆಗಬೇಕಿದೆ. ಇದಕ್ಕಾಗಿ ಲೋಕ ಅದಾಲತ್ ಗಳು ಹಾಗೂ ಮಧ್ಯಸ್ಥಿಕೆಯಿಂದ ವ್ಯಾಜ್ಯಗಳನ್ನು ಪರಿಹರಿಸಲಾಗುತ್ತಿದೆ. ಎಂದು ತಿಳಿಸಿದರು.
ಮುಂದಿನ ಬಜೆಟ್ ನಲ್ಲಿ ಬೆಂಗಳೂರು ಲಾಯರ್ಸ್ ಚೇಂಬರ್ಸ್ ಸ್ಥಾಪಿಸಲು ಅನುದಾನ:
ಬೆಂಗಳೂರು ವಕಿಲರ ಸಂಘ ಅತ್ಯಂತ ಮಹತ್ವದಾಗಿ, ವಕೀಲರ ಸಂಘ ಉತ್ತಮ ಕೆಲಸ ಮಾಡುತ್ತಿದೆ. ನ್ಯಾಯಾಧೀಶರ ಹುದ್ದೆಗಳನ್ನು ಶೀಘ್ರದಲ್ಲಿ ತುಂಬಲು ಕ್ರಮ ಕೈಗೊಳ್ಳಲಾಗುವುದು.ಬೆಂಗಳೂರಿಗೆ ಲಾಯರ್ಸ್ ಚೆಂಬರ್ಸ್ ಮಾಡಲು ಮುಂದಿನ ಬಜೆಟ್ ನಲ್ಲಿ ಅನುದಾನ ಒದಗಿಸಲು ಘೋಷಣೆ ಮಾಡಲಾಗುವುದು ಎಂದರು.
ವಕೀಲರಿಗೆ ಬಿಡಿಎ ಪ್ಲಾಟ್ ಗಳನ್ನು ಖರೀದಿಸಲು ಶೇ.10 ರಷ್ಟು ರಿಯಾಯಿತಿ:
ವಕೀಲರ ವಿಮೆ ಯೋಜನೆಯಡಿ ವಕೀಲರ ಹಿತದೃಷ್ಟಿಯಿಂದ ನೀಡಲಾಗಿರುವ ಅನುದಾನ ಸದುಪಯೋಗವಾಗಲು ಬೆಂಗಳೂರು ವಕೀಲ ಸಂಘ ಗಮನಹರಿಸಬೇಕು ಕಾನೂನು ರಕ್ಷಣಾ ಕಾಯ್ದೆಯನ್ನು ಡಿಸೆಂಬರ್ ನಲ್ಲಿ ಬೆಳಗಾವಿ ಅಧಿವೇಶನದಲ್ಲಿ ಮಂಡನೆ ಮಾಡಿ ಅನುಮೋದನೆ ಪಡೆಯಲಾಗುವುದು. ಬೆಂಗಳೂರಿನಲ್ಲಿ ಬಿಡಿಎ ಪ್ಲಾಟ್ ಗಳನ್ನು ಖರೀದಿಸಲು ವಕಿಲರಿಗೆ ಶೇ 10% ರಿಯಾಯಿತಿ ನೀಡಲಾಗುವುದು ಎಂದರು.
ಗುಜರಾತ್ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಅರವಿಂದ ಕುಮಾರ್, ರಾಜ್ಯ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಳೆ, ಕಟ್ಟಡ ಸಮಿತಿ ಅಧ್ಯಕ್ಷ ಬಿ.ವಿ.ಆಚಾರ್ಯ, ಉಪಾಧ್ಯಕ್ಷ ಕೆ.ಎನ್.ಪುಟ್ಟೇ ಗೌಡ, ವಕೀಲರ ಸಂಘದ ಕಾರ್ಯದರ್ಶಿ ಟಿ.ಜಿ.ರವಿ, ಲೋಕೋಪಯೋಗಿ ಇಲಾಖೆ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಕೃಷ್ಣಾ ರೆಡ್ಡಿ,ಮೊದಲಾದವರು ಉಪಸ್ಥಿತರಿದ್ದರು.