ಅರಣ್ಯ ಸಂರಕ್ಷಣೆಗಾಗಿ ಎಲ್ಲರೂ ಸರ್ಕಾರದೊಂದಿಗೆ ಕೈಜೋಡಿಸಬೇಕು: ಕರ್ನಾಟಕದ ಅರಣ್ಯಾಧಿಕಾರಿ

ಹಲವು ಯೋಜನೆಗಳಿಂದ ಅರಣ್ಯಗಳ ಮೇಲೆ ಹೆಚ್ಚಿನ ಒತ್ತಡವಿದ್ದು, ಅರಣ್ಯ ಇಲಾಖೆಯಿಂದ ಮಾತ್ರ ಅವುಗಳನ್ನು ಸಂರಕ್ಷಿಸಲು ಸಾಧ್ಯವಿಲ್ಲ. ಹೀಗಾಗಿ, ಅರಣ್ಯಗಳ ಸಂರಕ್ಷಣೆ ಮತ್ತು ರಕ್ಷಣೆಗೆ ಎಲ್ಲರೂ ಕೈಜೋಡಿಸಬೇಕು ಎಂದು ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕುಮಾರ್ ಪುಷ್ಕರ್ ಹೇಳಿದರು.
ಪೈರೋಜ್
ಪೈರೋಜ್

ಬೆಂಗಳೂರು: ಹಲವು ಯೋಜನೆಗಳಿಂದ ಅರಣ್ಯಗಳ ಮೇಲೆ ಹೆಚ್ಚಿನ ಒತ್ತಡವಿದ್ದು, ಅರಣ್ಯ ಇಲಾಖೆಯಿಂದ ಮಾತ್ರ ಅವುಗಳನ್ನು ಸಂರಕ್ಷಿಸಲು ಸಾಧ್ಯವಿಲ್ಲ. ಹೀಗಾಗಿ, ಅರಣ್ಯಗಳ ಸಂರಕ್ಷಣೆ ಮತ್ತು ರಕ್ಷಣೆಗೆ ಎಲ್ಲರೂ ಕೈಜೋಡಿಸಬೇಕು ಎಂದು ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕುಮಾರ್ ಪುಷ್ಕರ್ ಹೇಳಿದರು.

ಕರ್ನಾಟಕ ಅರಣ್ಯ ಇಲಾಖೆ ಆಯೋಜಿಸಿದ್ದ 2022ರ ಕ್ರಿಕೆಟರ್ಸ್‌ ಫಾರ್‌ ವೈಲ್ಡ್‌ಲೈಫ್‌ ಕನ್ಸರ್ವೇಷನ್‌ ಸಂಸ್ಥೆ ನೀಡುವ ವನ್ಯಜೀವಿ ಸೇವಾ ಪ್ರಶಸ್ತಿ ವಿತರಿಸುವ ಸಂದರ್ಭದಲ್ಲಿ ಮಾತನಾಡಿದ ಅವರು, ಎನ್‌ಜಿಒಗಳು, ಸಂರಕ್ಷಣಾಕಾರರು ಮತ್ತು ಸೆಲೆಬ್ರಿಟಿಗಳು ಅರಣ್ಯ ಸಂರಕ್ಷಣೆ ಮತ್ತು ರಕ್ಷಣೆಯಲ್ಲಿ ಸರ್ಕಾರದೊಂದಿಗೆ ತೊಡಗಿಕೊಳ್ಳಬೇಕು ಎಂದು ಹೇಳಿದರು.

ಬಿಳಿಗಿರಿ ರಂಗನಾಥಸ್ವಾಮಿ ದೇವಾಲಯ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅರಣ್ಯ ವೀಕ್ಷಕರಾಗಿ ಕೆಲಸ ಮಾಡುವ ಫೈರೋಜ್‌, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮರಿಯಮ್ಮ ಟ್ರಸ್ಟ್‌ನಲ್ಲಿ ಕೆಲಸ ಮಾಡುವ ವನ್ಯಜೀವಿ ಸಂರಕ್ಷಕರಾದ ಸುನೀತಾ ಧೈರ್ಯಂ, ಅಖಿಲೇಶ್ ಚಿಪ್ಲಿ (ಶಿವಮೊಗ್ಗ) ಮತ್ತು ಕರ್ನಲ್ ಸಿಎಂ ಮುತ್ತಣ್ಣ (ಕೊಡಗು) ಅವರನ್ನು ಭಾರತೀಯ ಮಾಜಿ ಕ್ರಿಕೆಟಿಗ ಮತ್ತು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ನಿರ್ದೇಶಕ ವಿವಿಎಸ್ ಲಕ್ಷ್ಮಣ್ ನಗರದಲ್ಲಿ ಶನಿವಾರ ಸನ್ಮಾನಿಸಿದರು.

ಪ್ರಶಸ್ತಿ ಪುರಸ್ಕೃತರನ್ನು ಸಂರಕ್ಷಣಾಧಿಕಾರಿಗಳು ಸೇರಿದಂತೆ ಅರಣ್ಯ ಇಲಾಖೆಯ ಪ್ಯಾನೆಲಿಸ್ಟ್‌ಗಳ ತಂಡ ಅವರ ಕೆಲಸದ ಆಧಾರದ ಮೇಲೆ ಆಯ್ಕೆ ಮಾಡುತ್ತದೆ.

ಹವಾಮಾನ ಬದಲಾವಣೆ ಬಗ್ಗೆ ಕಳವಳ ವ್ಯಕ್ತಪಡಿಸಿದ ಲಕ್ಷ್ಮಣ್ ಅವರು, ಈ ಪರಿಣಾಮಗಳನ್ನು ತಗ್ಗಿಸಲು ಕಾಡುಗಳನ್ನು ರಕ್ಷಿಸುವ ಅಗತ್ಯವಿದೆ ಎಂದರು. ಸವಾಲುಗಳು ಹಲವಾರವೆ. ಆದರೆ, ಉತ್ತರ ಫಲಿತಾಂಶಕ್ಕಾಗಿ ಅವುಗಳನ್ನು ಜಯಿಸಬೇಕಾಗಿದೆ. ಕ್ರೀಡೆಯಲ್ಲಿ ಯುವಕರನ್ನು ಪ್ರೋತ್ಸಾಹಿಸಲು ವೇದಿಕೆಯನ್ನು ಬಳಸಿಕೊಳ್ಳಬೇಕು ಎಂದ ಅವರು, ಗುಣಮಟ್ಟದ ಶಿಕ್ಷಣದ ಅಗತ್ಯವನ್ನು ಸಹ ಒತ್ತಿ ಹೇಳಿದರು.

ಭಾರತದ ಮಾಜಿ ಕ್ರಿಕೆಟಿಗರಾದ ಸಂದೀಪ್ ಪಾಟೀಲ್, ಯೂಸುಫ್ ಪಠಾಣ್ ಮತ್ತು ಹರ್ಭಜನ್ ಸಿಂಗ್ ಅವರು ಅರಣ್ಯ ರಕ್ಷಕರನ್ನು ಪ್ರೇರೇಪಿಸಲು ಈ ಪ್ರಶಸ್ತಿಯನ್ನು ಹುಟ್ಟು ಹಾಕಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com