ಬೆಂಗಳೂರಿನ ಖಾಸಗಿ ಶಾಲೆಯೊಂದರಲ್ಲಿ ಬಾಲಕಿ ಸಾವು, ತನಿಖೆ ಪ್ರಗತಿಯಲ್ಲಿ

ಬೆಂಗಳೂರಿನ ಖಾಸಗಿ ಶಾಲೆಯೊಂದರಲ್ಲಿ 9 ವರ್ಷದ ಬಾಲಕಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಪ್ರಗತಿಯಲ್ಲಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಬೆಂಗಳೂರಿನ ಖಾಸಗಿ ಶಾಲೆಯೊಂದರಲ್ಲಿ 9 ವರ್ಷದ ಬಾಲಕಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಪ್ರಗತಿಯಲ್ಲಿದೆ. ಈ ಮಧ್ಯೆ ಶಾಲೆಯಲ್ಲಿ ಶಿಕ್ಷಕರು ಕೊಟ್ಟ ಏಟಿನಿಂದ ಬಾಲಕಿ ಸಾವನ್ನಪ್ಪಿರುವುದಾಗಿ ಅವರ ಪೋಷಕರು ಆರೋಪಿಸಿದ್ದಾರೆ. ಇದು ಸಹಜ ಸಾವು ಎಂದು ಶಾಲೆ ಹೇಳಿದೆ. 

ಜಾಲಹಳ್ಳಿಯ ಗಂಗಮ್ಮನಗುಡಿ ಆರ್ ಡಿ ಇಂಟರ್ ನ್ಯಾಷನಲ್ ಸ್ಕೂಲ್ ನ 4ನೇ ತರಗತಿ ವಿದ್ಯಾರ್ಥಿ ನಿಶಿತಾ ಶುಕ್ರವಾರ ಶಾಲಾ ಕೊಠಡಿಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದಳು. ನಂತರ ಆಕೆಯನ್ನು ಎಂಎಸ್ ರಾಮಯ್ಯ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು, ತದನಂತರ ಆಕೆ ಸಾವನ್ನಪ್ಪಿದ್ದರು. 

ಹೃದಯ ಸಮಸ್ಯೆಯಿಂದ ಆಕೆ ಕುಸಿದು ಸಾವನ್ನಪ್ಪಿರಬಹುದು ಎಂದು ವೈದ್ಯರು ಹೇಳಿದ್ದಾರೆಯ ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಾಯುತ್ತಿರುವುದಾಗಿ ಶಾಲೆಯ ಸಮನ್ವಯಾಧಿಕಾರಿ ಆರ್. ಸಲೀಂ ಹೇಳಿದರು. ಈ ಪ್ರಕರಣದ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಗಂಗಮ್ಮನ ಗುಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.  ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಯಾರನ್ನೂ ಕಸ್ಟಡಿಗೆ ತೆಗೆದುಕೊಂಡಿಲ್ಲ ಎಂದು ಡಿಸಿಪಿ ವಿನಾಯಕ್ ಪಾಟೀಲ್ ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com