ಬಜೆಟ್ನಲ್ಲಿ ಘೋಷಿಸಿದ ಶೇ. 95ರಷ್ಟು ಯೋಜನೆಗಳಿಗೆ ಆದೇಶ ಹೊರಡಿಸಲಾಗಿದೆ- ಸಿಎಂ ಬೊಮ್ಮಾಯಿ
ರಾಜ್ಯ ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ಉದ್ದೇಶದಲ್ಲಿದ್ದಾರೆ. ತಮ್ಮ ಸರ್ಕಾರದ ವಿರುದ್ಧ ವಿಪಕ್ಷಗಳ ನಿರಂತರ ವಾಗ್ದಾಳಿಯಿಂದ ವಿಚಲಿತರಾಗದ ಸಿಎಂ, ಬಜೆಟ್ ಪ್ರಸ್ತಾವನೆ ಅನುಷ್ಠಾನಗೊಳಿಸುವತ್ತ ಗಮನಹರಿಸುತ್ತಿದ್ದಾರೆ.
Published: 06th November 2022 09:52 AM | Last Updated: 30th January 2023 04:46 PM | A+A A-

ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ಉದ್ದೇಶದಲ್ಲಿದ್ದಾರೆ. ತಮ್ಮ ಸರ್ಕಾರದ ವಿರುದ್ಧ ವಿಪಕ್ಷಗಳ ನಿರಂತರ ವಾಗ್ದಾಳಿಯಿಂದ ವಿಚಲಿತರಾಗದ ಸಿಎಂ, ಬಜೆಟ್ ಪ್ರಸ್ತಾವನೆ ಅನುಷ್ಠಾನಗೊಳಿಸುವತ್ತ ಗಮನಹರಿಸುತ್ತಿದ್ದಾರೆ.
ಬಜೆಟ್ನಲ್ಲಿ ಘೋಷಿಸಲಾದ ಸುಮಾರು ಶೇ. 95 ರಷ್ಟು ಯೋಜನೆಗಳಿಗೆ ನಾವು ಈಗಾಗಲೇ ಆದೇಶ ಹೊರಡಿಸಿದ್ದೇವೆ. ತಕ್ಷಣವೇ ಅತ್ಯಗತ್ಯವಾದ ಹೆಚ್ಚಿನ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದೇವೆ. ಈ ತಿಂಗಳು ಮತ್ತು ಮುಂದಿನ ತಿಂಗಳು ಕೆಲವು ಯೋಜನೆಗಳನ್ನು ಪ್ರಾರಂಭಿಸುತ್ತೇವೆ. ನನ್ನ ಬಜೆಟ್ ಪ್ರಸ್ತಾವನೆಗಳು ಅನುಷ್ಠಾನಗೊಂಡು ಜನರಿಗೆ ತಲುಪಬೇಕು ಎಂದು ಬಯಸುವುದಾಗಿ ತಿಳಿಸಿದರು.
9.82 ಲಕ್ಷ ಕೋಟಿ ರೂ. ಹೂಡಿಕೆಯೊಂದಿಗೆ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಜಾಗತಿಕ ಕತ್ತಲೆ ರಾಜ್ಯದ ಮೇಲೆ ಪರಿಣಾಮ ಬೀರುವುದಿಲ್ಲ, ಬದಲಾಗಿ ಅವಕಾಶವನ್ನು ನೀಡುತ್ತಿದೆ. ಹೂಡಿಕೆಗಳು ಉದ್ಯೋಗ ಸೃಷ್ಟಿಗೆ ಹೆಚ್ಚಿನ ಉತ್ತೇಜನ ನೀಡುತ್ತವೆ. ಉದ್ಯೋಗವನ್ನು ಸೃಷ್ಟಿಸುವ ಹೂಡಿಕೆಗಳು ನಮ್ಮ ಆದ್ಯತೆಯಾಗಿದೆ ಎಂದು ಅವರು ಹೇಳಿದರು.
ಯೋಜನೆಗಳ ಅನುಷ್ಠಾನ ತ್ವರಿತಗೊಳಿಸಲು ಮತ್ತು ಒಪ್ಪಂದಗಳು ದೀರ್ಘಕಾಲ ಉಳಿಯಲು ಸಿಎಂ ಬಯಸಿದರು. ನಮಗೆ ಒಂದು ನಿರ್ದಿಷ್ಟ ಸಮಾಯಾವಕಾಶವಿದೆ. ಇದಕ್ಕಾಗಿ ಒಂದು ನಿರ್ದಿಷ್ಟ ಯೋಜನೆ ಇದೆ. ನಾನು ವೈಯಕ್ತಿಕವಾಗಿ ಎಲ್ಲವನ್ನೂ ಮೇಲ್ವಿಚಾರಣೆ ಮಾಡುತ್ತೇನೆ ಎಂದು ಅವರು ಹೇಳಿದರು. ರಾಜಕೀಯವಾಗಿ ವಿಧಾನಸಭೆ ಚುನಾವಣೆಯು ಅವರ ನಾಯಕತ್ವದ ನಿಜವಾದ ಪರೀಕ್ಷೆಯಾಗಿದೆ ಎಂದು ಬೊಮ್ಮಾಯಿ ಹೇಳಿದರು.