ಸಂಸತ್​ ಆವರಣದಲ್ಲಿ ಕೆಂಪೇಗೌಡ ಪುತ್ಥಳಿ ನಿರ್ಮಾಣಕ್ಕೆ ಮಾಜಿ ಪ್ರಧಾನಿ ದೇವೇಗೌಡ ಆಗ್ರಹ: ಪ್ರಧಾನಿ ಮೋದಿಗೆ ಪತ್ರ

ಸಂಸತ್​ ಭವನದ ಆವರಣದಲ್ಲಿ ನಾಡಪ್ರಭು ಕೆಂಪೇಗೌಡರ ಕಂಚಿನ ಪುತ್ಥಳಿ ಸ್ಥಾಪಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡ ಮನವಿ ಮಾಡಿದ್ದಾರೆ.
ಪ್ರಧಾನಿ ಮೋದಿ ಮತ್ತು ಎಚ್ ಡಿ ದೇವೇಗೌಡ
ಪ್ರಧಾನಿ ಮೋದಿ ಮತ್ತು ಎಚ್ ಡಿ ದೇವೇಗೌಡ

ಬೆಂಗಳೂರು: ಸಂಸತ್​ ಭವನದ ಆವರಣದಲ್ಲಿ ನಾಡಪ್ರಭು ಕೆಂಪೇಗೌಡರ ಕಂಚಿನ ಪುತ್ಥಳಿ ಸ್ಥಾಪಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡ ಮನವಿ ಮಾಡಿದ್ದಾರೆ.

ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್​​​ನಲ್ಲಿ ಕೆಂಪೇಗೌಡರ 108 ಅಡಿಯ ಪ್ರತಿಮೆ (Kempegowda statue) ನಿರ್ಮಾಣವಾಗಿದ್ದು, ನವೆಂಬರ್​ 11 ರಂದು ಉದ್ಘಾಟನೆಯಾಗಲಿದೆ. ಇದರ ಬೆನ್ನಲ್ಲೇ ಸಂಸತ್​ ಭವನದ ಆವರಣದಲ್ಲಿ ಕೆಂಪೇಗೌಡರ ಕಂಚಿನ ಪುತ್ಥಳಿ ಸ್ಥಾಪಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮನವಿ ಮಾಡಿಕೊಂಡಿದ್ದಾರೆ. 

ಈ ಕುರಿತು ಪತ್ರವೊಂದನ್ನು ಬರೆದಿರುವ ಅವರು, 'ಕೆಂಪೇಗೌಡರು 16ನೇ ಶತಮಾನದಲ್ಲಿ ಬೆಂಗಳೂರು ನಗರವನ್ನು ಸ್ಥಾಪಿಸಿದರು. ಶತಮಾನಗಳ ಹಿಂದೆ ಅವರು ಬಿತ್ತಿದ ಬೀಜಗಳು ಇಂದು ಜಾಗತಿಕವಾಗಿ ಪ್ರಸಿದ್ಧವಾದ ಮಹಾನಗರವಾಗಿ ಅರಳಿವೆ. ಅದು ನಾವೆಲ್ಲರೂ ಹೆಮ್ಮೆಪಡುತ್ತೇವೆ. ಸಂಸತ್​ ಭವನದ ಆವರಣದಲ್ಲಿ ಕೆಂಪೇಗೌಡರ ಕಂಚಿನ ಪುತ್ಥಳಿ ಸ್ಥಾಪಿಸುವಂತೆ ದೇವೇಗೌಡ ಅವರು ಮನವಿ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com