ಮಂಡ್ಯ: ಕೆಆರ್ ಎಸ್ ಬೃಂದಾವನದಲ್ಲಿ ಚಿರತೆ ಪ್ರತ್ಯಕ್ಷ! ಪ್ರವಾಸಿಗರಲ್ಲಿ ಆತಂಕ

ಶ್ರೀರಂಗಪಟ್ಟಣ ತಾಲೂಕಿನ ಕೆ. ಆರ್. ಬೃಂದಾವನದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಪ್ರವಾಸಿಗರಲ್ಲಿ ನಡುಕು ಹುಟ್ಟಿಸಿದೆ. ಭಾನುವಾರ ಸಂಜೆ 6 ಗಂಟೆ ಸಮಯದಲ್ಲಿ ಬೃಂದಾವನದ ಮೀನುಗಾರಿಕೆ ಇಲಾಖೆಯ ಅಕ್ಟೇರಿಯಂ ಬಳಿಯ ರಾಯಲ್ ಆರ್ಕಿಡ್ ಹೋಟೆಲ್ ಕಡೆ ಚಿರತೆ ಹೋಗುತ್ತಿರುವುದು ಭದ್ರತಾ ಸಿಬ್ಬಂದಿಯ ಗಮನಕ್ಕೆ ಬಂದಿದೆ.
ಕೆಆರ್ ಎಸ್ ಬೃಂದಾವನ, ಚಿರತೆ
ಕೆಆರ್ ಎಸ್ ಬೃಂದಾವನ, ಚಿರತೆ

ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನ ಕೆ. ಆರ್. ಬೃಂದಾವನದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಪ್ರವಾಸಿಗರಲ್ಲಿ ನಡುಕು ಹುಟ್ಟಿಸಿದೆ. ಭಾನುವಾರ ಸಂಜೆ 6 ಗಂಟೆ ಸಮಯದಲ್ಲಿ ಬೃಂದಾವನದ ಮೀನುಗಾರಿಕೆ ಇಲಾಖೆಯ ಅಕ್ಟೇರಿಯಂ ಬಳಿಯ ರಾಯಲ್ ಆರ್ಕಿಡ್ ಹೋಟೆಲ್ ಕಡೆ ಚಿರತೆ ಹೋಗುತ್ತಿರುವುದು ಭದ್ರತಾ ಸಿಬ್ಬಂದಿಯ ಗಮನಕ್ಕೆ ಬಂದಿದೆ.

ತಕ್ಷಣ ಜಾಗೃತರಾದ ಭದ್ರತಾ ಸಿಬ್ಬಂದಿ ಪ್ರವಾಸಿಗರನ್ನು ಬೃಂದಾವನದಿಂದ ಹೊರಗೆಕಳುಹಿಸಿರುವುದಾಗಿ ವರದಿಯಾಗಿದೆ. ಸದ್ಯ ಬಂದಾವನಕ್ಕೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

15 ದಿನಗಳ ಅಂತರದಲ್ಲಿ ಕೆಆರ್ ಎಸ್ ಬೃಂದಾವನದಲ್ಲಿ ಮೂರು ಬಾರಿ ಚಿರತೆ ಕಾಣಿಸಿಕೊಂಡಿದೆ. ಎರಡು ಕಡೆ ಬೋನ್ ಇರಿಸಿದ್ದರೂ ಅದು ಬೋನಿಗೆ ಬಿದ್ದಿಲ್ಲ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಚಿರತೆ ವಿಚಾರ ಗೊತ್ತಾಗುತ್ತಿದ್ದಂತೆಯೇ ಪ್ರವಾಸಿಗರು ಬೃಂದಾವನದಿಂದ ಹೊರಗೆ ಓಡಿ ಹೋಗಿದ್ದು, ಬೃಂದಾವನ ಬಂದ್ ಮಾಡದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com