79 ವರ್ಷದ ವ್ಯಕ್ತಿಯನ್ನು ಹನಿ ಟ್ರ್ಯಾಪ್ ಮಾಡುತ್ತಿದ್ದ ದಾವಣಗೆರೆಯ 32 ವರ್ಷದ ಮಹಿಳೆ ಬಂಧನ

ದಾವಣಗೆರೆ ಜಿಲ್ಲೆಯಲ್ಲಿ ಹನಿಟ್ರ್ಯಾಪ್ ಮಾಡಿ 15 ಲಕ್ಷ ರೂಪಾಯಿ ಸುಲಿಗೆಗೆ ಯತ್ನಿಸಿದ ಆರೋಪದ ಮೇಲೆ 32 ವರ್ಷದ ವಿವಾಹಿತ ಮಹಿಳೆಯನ್ನು ಬಂಧಿಸಿರುವುದಾಗಿ ಪೊಲೀಸರು ಬುಧವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ದಾವಣಗೆರೆ: ಜಿಲ್ಲೆಯಲ್ಲಿ ಹನಿಟ್ರ್ಯಾಪ್ ಮಾಡಿ 15 ಲಕ್ಷ ರೂಪಾಯಿ ಸುಲಿಗೆಗೆ ಯತ್ನಿಸಿದ ಆರೋಪದ ಮೇಲೆ 32 ವರ್ಷದ ವಿವಾಹಿತ ಮಹಿಳೆಯನ್ನು ಬಂಧಿಸಿರುವುದಾಗಿ ಪೊಲೀಸರು ಬುಧವಾರ ತಿಳಿಸಿದ್ದಾರೆ.

ಬಂಧಿತ ಮಹಿಳೆಯನ್ನು ಸರಸ್ವತಿನಗರದ ನಿವಾಸಿ ಯಶೋದಾ ಎಂದು ಗುರುತಿಸಲಾಗಿದೆ. 79 ವರ್ಷದ ಚಿದಾನಂದಪ್ಪ ಎಂಬುವವರು ನೀಡಿದ ದೂರಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಿದಾನಂದಪ್ಪಗೆ ಪರಿಚಯವಾದ ಮಹಿಳೆ ಆತನೊಂದಿಗೆ ಸ್ನೇಹ ಬೆಳೆಸಿದ್ದಳು. 86,000 ರೂಪಾಯಿ ಕೈ ಸಾಲ ಪಡೆದು ಹೆಚ್ಚಿನ ಹಣ ಕೇಳುತ್ತಿದ್ದಳು.

ಚಿದಾನಂದಪ್ಪ ತನ್ನ ಹಣವನ್ನು ಮರಳಿ ಕೇಳಿದಾಗ ಯಶೋದಾ ಆತನನ್ನು ತನ್ನ ನಿವಾಸಕ್ಕೆ ಕರೆದು ಡ್ರಗ್ಸ್ ಮಿಶ್ರಿತ ಜ್ಯೂಸ್ ನೀಡಿದ್ದಾಳೆ. ಅದನ್ನು ಸೇವಿಸಿ ಆತ ಪ್ರಜ್ಞಾಹೀನನಾಗುತ್ತಿದ್ದಂತೆ, ಆತನ ಬಟ್ಟೆ ಬಿಚ್ಚಿ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದಾಳೆ. ನಂತರ ಆರೋಪಿಯು 15 ಲಕ್ಷ ರೂ.ಗೆ ಬೇಡಿಕೆಯಿಟ್ಟು, ಅದು ವಿಫಲವಾದರೆ ವಿಡಿಯೋವನ್ನು ಆತನ ಹೆಂಡತಿ ಮತ್ತು ಮಕ್ಕಳಿಗೆ ತೋರಿಸುವುದಾಗಿ ಬೆದರಿಕೆ ಹಾಕಿದ್ದಾಳೆ.

ನಂತರ ಸಂತ್ರಸ್ತ ಪೊಲೀಸರಿಗೆ ದೂರು ನೀಡಿದ್ದರು. ಈ ಸಂಬಂಧ ಮುಂದಿನ ತನಿಖೆ ನಡೆಯುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com