ಸ್ವಾಮೀಜಿಗಳ ಬಳಿ ಹೆಣ್ಣು ಮಕ್ಕಳು ಹೋಗಲಾರದಂತ ಸ್ಥಿತಿ ನಿರ್ಮಾಣ: ಮುರುಘಾ ಸ್ವಾಮೀಜಿ ವಿರುದ್ಧ ಶಾಮನೂರು ಸಿಡಿಮಿಡಿ

ಸ್ವಾಮೀಜಿಯೊಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದಿಂದಾಗಿ ಹೆಣ್ಣುಮಕ್ಕಳು ಸ್ವಾಮಿಗಳ ಬಳಿ ಹೋಗಲಾರದಂತ ಸ್ಥಿತಿ ನಿರ್ಮಾಣವಾಗಿದೆ ಎಂದು ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಬೇಸರ ವ್ಯಕ್ತ ಪಡಿಸಿದ್ದಾರೆ.
ಶ್ಯಾಮನೂರು ಶಿವಶಂಕರಪ್ಪ
ಶ್ಯಾಮನೂರು ಶಿವಶಂಕರಪ್ಪ

ಚಿತ್ರದುರ್ಗ: ಸ್ವಾಮೀಜಿಯೊಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದಿಂದಾಗಿ ಹೆಣ್ಣುಮಕ್ಕಳು ಸ್ವಾಮಿಗಳ ಬಳಿ ಹೋಗಲಾರದಂತ ಸ್ಥಿತಿ ನಿರ್ಮಾಣವಾಗಿದೆ ಎಂದು ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಬೇಸರ ವ್ಯಕ್ತ ಪಡಿಸಿದ್ದಾರೆ.

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಎದುರಿಸುತ್ತಿರುವ ಮುರುಘಾಮಠದ ಶಿವಮೂರ್ತಿ ಮುರುಘಾ ಶರಣನ ಬಗ್ಗೆ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿರುವ ಆರೋಪಪಟ್ಟಿ ಬಹಿರಂಗವಾದ ಬಳಿಕ ಲಿಂಗಾಯತ-ವೀರಶೈವ ಸಮಾಜದ ಮುಖಂಡರು ಸಿಟ್ಟಿಗೆದ್ದು ಪ್ರತಿಕ್ರಿಯಿಸುತ್ತಿದ್ದಾರೆ.

ಹೊಸದುರ್ಗ ತಾಲ್ಲೂಕಿನ ಸಾಣೇಹಳ್ಳಿಯಲ್ಲಿ ನಡೆದ ನಾಟಕೋತ್ಸವ  ಸಮಾರಂಭದಲ್ಲಿ ಮಾತನಾಡಿದ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ, ‘ಹೆಣ್ಣು ಮಕ್ಕಳು ಸ್ವಾಮೀಜಿ ಬಳಿ ಹೋಗದಂತಹ ಸ್ಥಿತಿ ನಿರ್ಮಾಣವಾಗಿದೆ. ಇಂತಹ ಪರಿಸ್ಥಿತಿ ಬರಬಾರದು. ನಮ್ಮ ಹೆಣ್ಣು ಮಕ್ಕಳು ಕೂಡ ಎಚ್ಚರವಾಗಿ ಇರಬೇಕು. ಪ್ರಕರಣದ ಬಗ್ಗೆ ವೀರಶೈವ ಮಹಾಸಭಾ ಸೂಕ್ತ ತೀರ್ಮಾನ ಮಾಡುತ್ತದೆ’ ಎಂದರು.

ಸರ್ಕಾರದಿಂದ ಸಹಾಯ ಬೇಕೆಂದು ಕೇಳುವುದು ನಾಚಿಕೆಗೇಡು. ನಮ್ಮ ಹೆಣ್ಣು ಮಕ್ಕಳು ಸಹ ಎಚ್ಚರವಾಗಿರಬೇಕು. ನಮ್ಮೆಲ್ಲರ ಒಗ್ಗಟ್ಟಿನಲ್ಲಿ ಶಕ್ತಿಯಿದೆ ಎಂಬುದು ವೀರಶೈವರು ಅರಿಯಬೇಕು. ಒಳಪಂಗಡ ಬೇಧ ಮರೆತು ವೀರಶೈವರು ಒಂದಾಗಬೇಕು. ಇವತ್ತಿನ ಸಮಾರಂಭದಲ್ಲಿ ಎಲ್ಲರೂ ಸರ್ಕಾರದ ಸಹಾಯ ಕೇಳುತ್ತಿದ್ದಾರೆ. ಸರ್ಕಾರದಿಂದ ಸಹಾಯ ಬೇಕೆಂದು ಕೇಳುವುದು ನಾಚಿಕೆಗೇಡು. ಸ್ವಾಭಿಮಾನದಿಂದ ನಾವು ಇರಬೇಕು ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com