ಹಿಂದೂ ಅಶ್ಲೀಲ ಪದ ಹೇಳಿಕೆ: ಸತೀಶ್ ಜಾರಕಿಹೊಳಿ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲು

ಹಿಂದೂ ಅಶ್ಲಿಲ ಪದವಾಗಿದೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿ ತೀವ್ರ ವಿರೋಧಕ್ಕೆ ಗುರಿಯಾಗಿರುವ ಶಾಸಕ ಸತೀಶ್ ಜಾರಕಿಹೊಳಿ ವಿರುದ್ಧ ಬೆಂಗಳೂರಿನ ಮೆಟ್ರೊಪಾಲಿಟನ್ ಕೋರ್ಟ್​ನಲ್ಲಿ ದೂರು ದಾಖಲಿಸಲಾಗಿದೆ.
ಸತೀಶ್ ಜಾರಕಿಹೊಳಿ
ಸತೀಶ್ ಜಾರಕಿಹೊಳಿ

ಬೆಂಗಳೂರು: ಹಿಂದೂ ಅಶ್ಲಿಲ ಪದವಾಗಿದೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿ ತೀವ್ರ ವಿರೋಧಕ್ಕೆ ಗುರಿಯಾಗಿರುವ ಶಾಸಕ ಸತೀಶ್ ಜಾರಕಿಹೊಳಿ ವಿರುದ್ಧ ಬೆಂಗಳೂರಿನ ಮೆಟ್ರೊಪಾಲಿಟನ್ ಕೋರ್ಟ್​ನಲ್ಲಿ ದೂರು ದಾಖಲಿಸಲಾಗಿದೆ.

ವಕೀಲ ದಿಲೀಪ್ ಕುಮಾರ್ ಬೆಂಗಳೂರಿನ 8ನೇ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಕೋರ್ಟ್​ನಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ.

ಐಪಿಸಿ ಸೆಕ್ಷನ್‌ 153 ಮತ್ತು 500ರ ಅಡಿ ಕ್ರಮಕ್ಕೆ ಕೋರಿ ಅರ್ಜಿ ಸಲ್ಲಿಸಲಾಗಿದೆ. ಅರ್ಜಿ ಮಾನ್ಯ ಮಾಡಿರುವ ಪೀಠ ಈ ವಿಷಯಕ್ಕೆ ಸಂಬಂಧಿಸಿದ ವಿಚಾರಣೆಯನ್ನ ನವೆಂಬರ್ 18ಕ್ಕೆ ಮುಂದೂಡಿದೆ. ಇದೇ ವೇಳೆ ಅರ್ಜಿದಾರರ ಪರ ವಕೀಲ ಧರ್ಮಪಾಲ್ ಹಾಜರಾಗಿದ್ದರು.

ಈ ನಡುವೆ ತಮ್ಮ ಹೇಳಿಕೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಸತೀಶ್​ ಜಾರಕಿಹೊಳಿ, ನಾನು ಮಾತನಾಡಿದ ಆ ಒಂದು ಮಾತು ವಿವಾದಕ್ಕೀಡಾಗಿದೆ. ಅಲ್ಲದೇ, ಅದನ್ನು ತಿರುಚಿ ಅಪಪ್ರಚಾರಗೊಳಿಸಲಾಗುತ್ತಿದೆ. ಆ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೇ ವಿಷಾದ ವ್ಯಕ್ತಪಡಿಸುತ್ತೇನೆ. ನನ್ನ ಹೇಳಿಕೆಯನ್ನು ಹಿಂಪಡೆಯುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com