ಪಿಎಸ್ಐ ನೇಮಕಾತಿ ಅಕ್ರಮ: ಪ್ರಮುಖ ಆರೋಪಿ ಅಮೃತ್ ಪೌಲ್ ಮತ್ತು ಶಾಂತಕುಮಾರ್ ಮನೆಯಲ್ಲಿ ಇಡಿ ಶೋಧ

545 ಪಿಎಸ್ಐ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಹಿನ್ನೆಲೆಯಲ್ಲಿ ಹಗರಣದ ಪ್ರಮುಖ ಆರೋಪಿಗಳಾದ ಎಡಿಜಿಪಿ ಅಮೃತ್ ಪೌಲ್ ಮತ್ತು ಡಿವೈಎಸ್ ಪಿ ಶಾಂತಕುಮಾರ್ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.
ಅಮೃತ್ ಪೌಲ್
ಅಮೃತ್ ಪೌಲ್

ಬೆಂಗಳೂರು: 545 ಪಿಎಸ್ಐ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಹಿನ್ನೆಲೆಯಲ್ಲಿ ಹಗರಣದ ಪ್ರಮುಖ ಆರೋಪಿಗಳಾದ ಎಡಿಜಿಪಿ ಅಮೃತ್ ಪೌಲ್ ಮತ್ತು ಡಿವೈಎಸ್ ಪಿ ಶಾಂತಕುಮಾರ್ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. 

ಬೆಂಗಳೂರಿನ ಸಹಕಾರನಗರದಲ್ಲಿರುವ ಅಮೃತ್ ಪೌಲ್ ಅವರ ನಿವಾಸದ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ. ಒಟ್ಟು 11 ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಪಿಎಸ್ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ಕಳೆದ ಜುಲೈ 4ರಂದು ಅಮೃತ್ ಪೌಲ್ ರನ್ನು ಬಂಧಿಸಿದ್ದರು. 545 ಪಿಎಸ್‌ಐ ಹುದ್ದೆಗಳ ಡೀಲ್ ನಡೆದಾಗ ಅಮೃತ್ ಪೌಲ್ ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದರು. ಡಿವೈಎಸ್‌ಪಿ ಹಾಗೂ ಎಫ್‌ಡಿಎಯೊಂದಿಗೆ ಸೇರಿ ಅಮೃತ್ ಪೌಲ್ ಡೀಲ್ ಮಾಡಿಸಿದ್ದಾರೆ ಎಂಬ ಆರೋಪವಿದೆ. 

ಎಡಿಜಿಪಿ ಅಮೃತ್ ಪೌಲ್ ಹಾಗೂ ಆರೋಪಿ ಶಾಂತಕುಮಾರ್ ನಡುವೆ 1.36 ಕೋಟಿ ರೂಪಾಯಿ ಹಣ ವರ್ಗಾವಣೆ ಆಗಿದೆ. ಇನ್ನು ಮೊಬೈಲ್ ದತ್ತಾಂಶವನ್ನು ಅಳಿಸಿ ಹಾಕಲಾಗಿದೆ ಎಂದು ಸಿಐಡಿ ಆರೋಪಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೃತ್ ಪೌಲ್ ಸತತ ಮೂರು ಬಾರಿ ವಿಚಾರಣೆ ಎದುರಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com