ಪ್ರತಿ ದಿನ ಒಂದು ತಾಸು ಹೆಚ್ಚಿಗೆ ಕೆಲಸ ಮಾಡಿ: ಸರ್ಕಾರಿ ನೌಕರರಿಗೆ ಸಿಎಂ ಬೊಮ್ಮಾಯಿ ಕರೆ

ಪ್ರತಿ ದಿನ ಒಂದು ತಾಸು ಹೆಚ್ಚಿಗೆ   ಕೆಲಸ ಮಾಡಿ  ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರಿ ನೌಕರರಿಗೆ ಕರೆ ನೀಡಿದ್ದಾರೆ. 
ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಪ್ರತಿ ದಿನ ಒಂದು ತಾಸು ಹೆಚ್ಚಿಗೆ ಕೆಲಸ ಮಾಡಿ  ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರಿ ನೌಕರರಿಗೆ ಕರೆ ನೀಡಿದ್ದಾರೆ. 

ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ 7 ನೇ ವೇತನ ಆಯೋಗ ರಚನೆ ಮಾಡಿರುವುದಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಕೆಳಹಂತದವರೆಗೆ ಈ ಕೆಲಸವಾಗಬೇಕು. ಪ್ರಾಮಾಣಿಕತೆ, ನಿಷ್ಠೆ ಹಾಗು ಕರ್ತವ್ಯ ಪ್ರಜ್ಞೆಯಿಂದ  ಕೆಲಸ ಮಾಡಿ. ಬಡವರಿಗೆ, ಜನಪರವಾದ ಕೆಲಸ ಮಾಡಿದರೆ ಕರ್ನಾಟಕ ಅಭಿವೃದ್ಧಿಯಾಗುತ್ತದೆ. ನವ ಕರ್ನಾಟಕ ದಿಂದ ನವ ಭಾರತ ನಿರ್ಮಿಸೋಣ ಎಂದರು. ದೇಶದ 5 ಟ್ರಿಲಿಯನ್ ಡಾಲರ್ ಆರ್ಥಿಕತೆಗೆ ಕನಸಿಗೆ ಕರ್ನಾಟಕ ಒಂದು ಟ್ರಿಲಿಯನ್ ಡಾಲರ್ ಕೊಡುಗೆ ನೀಡಬೇಕು ಎಂದರು. 

ವರ್ಷದಿಂದ ವರ್ಷಕ್ಕೆ ಹಣದುಬ್ಬರ ಹೆಚ್ಚಾಗುತ್ತದೆ. ಸರ್ಕಾರಿ ನೌಕರರಾಗಿ ಸೇವೆಗೆ ಸೇರಿದ ಸಂದರ್ಭಕ್ಕೂ ಈಗಿನ   ಸಂದರ್ಭಕ್ಕೂ ವ್ಯತ್ಯಾಸ ವಿರುತ್ತದೆ. ಸಮಯ ಮತ್ತು ಹಣ ಎರಡೂ ಬಹಳ ಮುಖ್ಯ. ಸರಿಯಾದ ಸಮಯದಲ್ಲಿ ಸರಿಯಾದ ಸಂಪಾದನೆಯಾದರೆ ಬದುಕಿಗೆ ಪ್ರೇರಣೆ. ಅದಕ್ಕಾಗಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಅತ್ಯಂತ ಪ್ರಾಮಾಣಿಕ, ನಿಷ್ಠಾವಂತ ಅಧಿಕಾಯಾಗಿದ್ದ ಡಾ. ಸುಧಾಕರ್ ರಾವ್ ದಕ್ಷತೆಯಿಂದ ಕೆಲಸ ಮಾಡಿದವರು. ಪ್ರಭಾವಕ್ಕೆ ಮಣಿಯದವರು.  ನ್ಯಾಯಸಮ್ಮತವಾದ 7 ನೇ ವೇತನ ಆಯೋಗದ ವರದಿ ಬರಲಿ ಎಂದು ಶುದ್ಧಹಸ್ತ, ಶುದ್ಧ ಅಂತ:ಕರಣವುಳ್ಳ ಸುಧಾಕರ್ ರಾವ್ ಅವರ ಆಯ್ಕೆ ಆಗಿದೆ ಎಂದರು. ಇದಕ್ಕೆ ನೌಕರರ ಸಹಕಾರ ಕೂಡ ಅಗತ್ಯ ಎಂದು ಅವರು ಹೇಳಿದರು. 

ವಿಶೇಷವಾಗಿ ಕೋವಿಡ್ ಸಂದರ್ಭದಲ್ಲಿ ಆರೋಗ್ಯ, ಪೊಲೀಸ್, ಗ್ರಾಮೀಣಾಭಿವೃದ್ಧಿ, ಕಂದಾಯ ಇಲಾಖೆಗಳು ಉತ್ತಮವಾಗಿ ಕಾರ್ಯನಿರ್ವಹಿಸಿವೆ. ಕಂದಾಯ, ಲೋಕೋಪಯೋಗಿ, ಅಗ್ನಿಶಾಮಕ ಇಲಾಖೆ ಸೇರಿದಂತೆ ಬಹುತೇಕ ಎಲ್ಲಾ ಇಲಾಖೆಗಳು ಉತ್ತಮವಾಗಿ ಕಾರ್ಯನಿರ್ವಹಿಸಿವೆ. ನಾನು ಮುಖ್ಯ ಮಂತ್ರಿಯಾದ ಸಂದರ್ಭದಲ್ಲಿ ಐದು ಸಾವಿರ ಕೋಟಿ ಆದಾಯ ಸಂಗ್ರಹ ಕೊರತೆ ಇತ್ತು. ಇದನ್ನು ಭರ್ತಿ ಮಾಡುವಂತೆ ಸೂಚಿಸಿದಾಗ ತೆರಿಗೆ ಇಲಾಖೆ ಅಧಿಕಾರಿಗಳು ಇದಕ್ಕೆ ಸ್ಪಂದಿಸಿ ಆ ಮೊತ್ತವನ್ನು ತುಂಬಿದ್ದಷ್ಟೇ ಅಲ್ಲದೆ, ಆ ವರ್ಷದ ಗುರಿಗಿಂತಲೂ 13 ಸಾವಿರ ಕೋಟಿ ರೂ.ಗಳ ಹೆಚ್ಚಿನ ಆದಾಯ ಸಂಗ್ರಹ ಮಾಡಿದರು ಎಂದರು. 

ಜನಸ್ಪಂದನೆಯ ಕೆಲಸವಾಗಬೇಕು:  ಕಾರ್ಯಾಂಗ ಜನಸ್ಪಂದನೆಯ ಕೆಲಸ ಮಾಡಿದಾಗ ಸರ್ಕಾರಕ್ಕೆ, ವ್ಯವಸ್ಥೆಗೆ ಒಳ್ಳೆಯ ಹೆಸರು ಬರುತ್ತದೆ. ಜನಸಂಖ್ಯೆ ಹೆಚ್ಚಿದ್ದು, ಎಲ್ಲರ ಅಶೋತ್ತರಗಳೂ ಹೆಚ್ಚಾಗಿವೆ. ಯುವಕರು, ವಿದ್ಯಾವಂತರ  ನೌಕರರ ಜೀವನದ ಗುಣಮಟ್ಟವೂ ಉತ್ತಮಗೊಳ್ಳಬೇಕು. ಅವರು ಚೆನ್ನಾಗಿದ್ದರೆ ಸಂತೋಷದಿಂದಿದ್ದರೆ ಸರ್ಕಾರದ ಕೆಲಸಗಳು ಉತ್ತಮವಾಗಿ ಆಗುತ್ತದೆ ಎಂದರು.

ವ್ಯವಸ್ಥೆಯಲ್ಲಿ ವೇತನ, ಸೌಲತ್ತು, ಪಿಂಚಣಿಯನ್ನು ಕಾಲಕಾಲಕ್ಕೆ ಪರಿಷ್ಕರಣೆ ಮಾಡಬೇಕು. ಇದು ಮೊದಲಿನಿಂದಲೂ ಬಂದಿದೆ. ಒಂದು ವೇತನ ಆಯೋಗಕ್ಕೂ ಮತ್ತೊಂದು ವೇತನ ಆಯೋಗದ ನಡುವೆ 5 ವರ್ಷಗಳ ಅಂತರವಿರಬೇಕು. ಆದರೆ  ಬಹಳ ಸಾರಿ ಹಾಗಾಗುವುದಿಲ್ಲ. 6-7 ವರ್ಷ ತೆಗೆದುಕೊಂಡಿರುವ ಉದಾಹರಣೆ ಇದೆ. ನಮ್ಮ ಸರ್ಕಾರ ಕೋವಿಡ್ ಹಾಗೂ ಪ್ರವಾಹದ ಹಿನ್ನೆಲೆಯಲ್ಲಿ, ತಮ್ಮ ಜೀವದ ಹಂಗನ್ನು ತೊರೆದು ಸರ್ಕಾರಕ್ಕೆ ಸಹಾಯಕವಾಗಿ ನಿಂತು ಜನರ ಸೇವೆಯನ್ನು ಅತ್ಯುತ್ತಮವಾಗಿ ಮಾಡಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com