ಮುರುಘಾ ಶ್ರೀಗಳ ವಿರುದ್ಧ ಹೇಳಿಕೆ ನೀಡಲು ಸಂತ್ರಸ್ತೆಗೆ ಪ್ರಚೋದನೆ: ಇಬ್ಬರ ಬಂಧನ

ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಎರಡನೇ ಪೋಕ್ಸೊ ಪ್ರಕರಣ ದಾಖಲಿಸಲು ಸಂತ್ರಸ್ತರೊಬ್ಬರ ಮೇಲೆ ಪ್ರಭಾವ ಬೀರಿದ ಆರೋಪದ ಮೇಲೆ ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಹಾಗೂ ಅಥಣಿಯ ಶಿಕ್ಷಕ ಬಸವರಾಜೇಂದ್ರ ಅವರನ್ನು ಜಿಲ್ಲಾ ಪೊಲೀಸರು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ.
ಶಿವಮೂರ್ತಿ ಮುರುಘಾ ಶರಣರು
ಶಿವಮೂರ್ತಿ ಮುರುಘಾ ಶರಣರು

ಚಿತ್ರದುರ್ಗ: ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಎರಡನೇ ಪೋಕ್ಸೊ ಪ್ರಕರಣ ದಾಖಲಿಸಲು ಸಂತ್ರಸ್ತರೊಬ್ಬರ ಮೇಲೆ ಪ್ರಭಾವ ಬೀರಿದ ಆರೋಪದ ಮೇಲೆ ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಹಾಗೂ ಅಥಣಿಯ ಶಿಕ್ಷಕ ಬಸವರಾಜೇಂದ್ರ ಅವರನ್ನು ಜಿಲ್ಲಾ ಪೊಲೀಸರು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ.

ಮುರುಘಾ ಸ್ವಾಮೀಜಿ ವಿರುದ್ಧ ದೂರು ನೀಡುವಂತೆ ಸಂತ್ರಸ್ತ ಬಾಲಕಿಗೆ ಶಿಕ್ಷಕ ಬಸವರಾಜೇಂದ್ರ ಎಂಬಾತ ಪ್ರಚೋಜನೆ ನೀಡಿದ ಆಡಿಯೋವೊಂದು ವಾರಗ್ ಆಗಿತ್ತು. ಈ ಸಂಬಂಧ ತನಿಖೆ ಕೈಗೊಂಡ ಪೊಲೀಸರು ಎಸ್'ಜೆಎಂ ವಿದ್ಯಪೀಠದಲ್ಲಿ ಶಿಕ್ಷಕನಾಗಿ ಕಾರ್ಯನಿರ್ವಹಿಸಿದ್ದ ಅಥಣಿ ಮೂಲದ ಬಸವರಾಜೇಂದ್ರನನ್ನು ಬಂಧನಕ್ಕೊಳಪಡಿಸಿದ್ದಾರೆ.

ಆಡಿಯೋ ಕ್ಲಿಪ್‌ನಲ್ಲಿ, ಬಸವರಾಜೇಂದ್ರ ಅಪ್ರಾಪ್ತ ಸಂತ್ರಸ್ತೆಗೆ ಕರೆ ಮಾಡಿ ಪ್ರಕರಣ ದಾಖಲಿಸುವಂತೆ ಮನವಿ ಮಾಡಿದ್ದು, ಆಕೆ ಆರಂಭದಲ್ಲಿ ನಿರಾಕರಿಸಿದ್ದಾಳೆ. ಆದರೆ, ನಂತರ ಪ್ರಕರಣ ದಾಖಲಿಸಿದ್ದಾಳೆ. ಆಕೆ ನೀಡಿದ ದೂರಿನ ಆಧಾರದ ಮೇರೆಗೆ ಎರಡನೇ ಪೋಕ್ಸೋ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com