ಕೈದಿಗಳು ಆರೋಗ್ಯ ಯೋಜನೆಯ ಪ್ರಯೋಜನಗಳನ್ನು ಪಡೆಯಬೇಕು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ

ಕಾರಾಗೃಹಗಳಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯನ್ನು ಹೆಚ್ಚು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಆಯುಕ್ತ ಡಿ.ರಂದೀಪ್ ಅವರು ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ.
ಗುರುವಾರ ಬೆಂಗಳೂರು ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ದೀಪ್ ರಂದೀಪ್.
ಗುರುವಾರ ಬೆಂಗಳೂರು ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ದೀಪ್ ರಂದೀಪ್.

ಬೆಂಗಳೂರು: ಕಾರಾಗೃಹಗಳಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯನ್ನು ಹೆಚ್ಚು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಆಯುಕ್ತ ಡಿ.ರಂದೀಪ್ ಅವರು ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ.

ಬೆಂಗಳೂರು ಕೇಂದ್ರ ಕಾರಾಗೃಹಕ್ಕೆ ಗುರುವಾರ ಭೇಟಿ ನೀಡಿದ ಆಯುಕ್ತರು, ಪ್ರಸ್ತುತ ಆರೋಗ್ಯ ವ್ಯವಸ್ಥೆಯನ್ನು ಆಧುನೀಕರಣಗೊಳಿಸುವುದರ ಜೊತೆಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಆರೋಗ್ಯ ಯೋಜನೆಗಳನ್ನು ಗಂಭೀರವಾಗಿ ಮತ್ತು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಕರೆ ನೀಡಿದರು.

ಜೈಲು ವ್ಯವಸ್ಥೆಯ ಭಾಗವಾಗಿರುವಾಗ ಉತ್ತಮ ಆರೋಗ್ಯ ಸೇವೆಯನ್ನು ಪಡೆಯಲು ಸಾಧ್ಯವಾಗುವಂತೆ ಕೈದಿಗಳಿಗೆ ಆರೋಗ್ಯ ಕಾರ್ಡ್‌ಗಳನ್ನು ವಿತರಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಕೈದಿಗಳು ಕಿದ್ವಾಯಿ, ನಿಮ್ಹಾನ್ಸ್ ಆಸ್ಪತ್ರೆಗಳಲ್ಲಿರುವ ಆಧುನಿಕ ಸೌಲಭ್ಯ ಕಲ್ಪಿಸುವ ಜೊತೆಗೆ ರಾಷ್ಟ್ರೀಯ ಆರೋಗ್ಯ ಅಭಿಯಾನ, ಮಾನಸಿಕ ಆರೋಗ್ಯ ರಕ್ಷಣೆ, ತಂಬಾಕು ನಿಯಂತ್ರಣ ಯೋಜನೆ ಜಾರಿ, ಆಯುಷ್ಯ್ಮಾನ್ ಭಾರತ ಪ್ರಧಾನ ಮಂತ್ರಿ ಜನ ಆರೋಗ್ಯ ಕರ್ನಾಟಕ ಕಾರ್ಡ್​ಗಳನ್ನು ವಿತರಿಸುವುದರ ಜೊತೆಗೆ ಔಷಧಗಳ ದಾಸ್ತಾನು ಹೆಚ್ಚಿಸಲು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸೂಚಿಸಲಾಗಿದೆ. ಕೈದಿಗಳನ್ನು ಚಿಕಿತ್ಸೆಗಾಗಿ ಹೊರಗೆ ಕರೆದೊಯ್ಯುವಾಗ ನಾವು ಸರಿಯಾದ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳುವ ಬಗ್ಗೆಯೂ ಪರಿಶೀಲಿಸುತ್ತೇವೆ" ಎಂದು ತಿಳಿಸಿದರು.

ಇದೇ ವೇಳೆ ಇಲಾಖೆಯಲ್ಲಿ ಆರೋಗ್ಯ ವ್ಯವಸ್ಥೆ ಸುಧಾರಣೆಗೆ ಕೈಗೊಂಡಿರುವ ಅಗತ್ಯ ಕ್ರಮಗಳ ಕುರಿತು ವರದಿ ಸಲ್ಲಿಸುವಂತೆ ಕಾರಾಗೃಹದ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.

ಕೈದಿಗಳ ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯವನ್ನು ಖಚಿತಪಡಿಸಿಕೊಳ್ಳಲು ಮತ್ತು ವ್ಯವಸ್ಥೆಯಲ್ಲಿ ಆರೋಗ್ಯ ಸಿಬ್ಬಂದಿಯ ಹೆಚ್ಚಳವನ್ನು ಖಚಿತಪಡಿಸಿಕೊಳ್ಳಲು ಆವರ್ತಕ ತಪಾಸಣೆಗಳಿವೆ. ಮದ್ಯವ್ಯಸನಿಗಳು ಮತ್ತು ಧೂಮಪಾನಿಗಳ ಚಿಕಿತ್ಸೆಗಾಗಿ ವ್ಯವಸ್ಥೆಯನ್ನೂ ಕೈಗೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com