ಬೆಂಗಳೂರಿನಲ್ಲಿ ಎರಡು ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ಪ್ರಧಾನಿ ನರೇಂದ್ರ ಮೋದಿ ಅವರಿಂದು ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಹಾಗೂ ಭಾರತ್ ಗೌರವ್ ಕಾಶಿ ದರ್ಶನ್ ರೈಲುಗಳಿಗೆ ಚಾಲನೆ ನೀಡಿದರು.
ವಂದೇ ಭಾರತ್ ರೈಲಿಗೆ ಪ್ರಧಾನಿ ಚಾಲನೆ
ವಂದೇ ಭಾರತ್ ರೈಲಿಗೆ ಪ್ರಧಾನಿ ಚಾಲನೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರಿಂದು ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಹಾಗೂ ಭಾರತ್ ಗೌರವ್ ಕಾಶಿ ದರ್ಶನ್ ರೈಲುಗಳಿಗೆ ಚಾಲನೆ ನೀಡಿದರು.

 ಚೆನ್ನೈ- ಮೈಸೂರು ವಂದೇ ಭಾರತ್ ಎಕ್ಸ್‌ಪ್ರೆಸ್ ಸಂಪರ್ಕತೆ ಮತ್ತು ವಾಣಿಜ್ಯ ಚಟುವಟಿಕೆಗಳನ್ನು ಹೆಚ್ಚಿಸುತ್ತದೆ. ಬೆಂಗಳೂರಿನಿಂದ ಇದಕ್ಕೆ ಚಾಲನೆ ನೀಡಿರುವುದಕ್ಕೆ ತುಂಬಾ ಸಂತೋಷವಾಗಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಬೆಳಗ್ಗೆ 7 ಗಂಟೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ, ಚೆನ್ನೈ-ಮೈಸೂರು ನಡುವಿನ ವಂದೇ ಭಾರತ್ ಎಕ್ಸ್ ಪ್ರೆಸ್ ಗೆ ಹಸಿರು ನಿಶಾನೆ ತೋರಿದರು. ಇದು ದೇಶದ ಐದನೇ ವಂದೇ ಭಾರತ್ ರೈಲು ಆಗಿದ್ದು, ಚೆನ್ನೈ-ಬೆಂಗಳೂರು-ಮೈಸೂರು ನಡುವಣ ಸಂಪರ್ಕತೆಯನ್ನು ಹೆಚ್ಚಿಸುವ ನಿರೀಕ್ಷೆಯಿದೆ. 

ಭಾರತ್ ಗೌರವ್ ಕಾಶಿ ಯಾತ್ರಾ ರೈಲು ಸಂಚಾರ ಸೌಲಭ್ಯವನ್ನು ಪಡೆದ ಮೊದಲ ರಾಜ್ಯವಾದ ಕರ್ನಾಟಕಕ್ಕೆ ಅಭಿನಂದನೆಗಳು. ಈ ರೈಲು ಕಾಶಿಯನ್ನು ಕರ್ನಾಟಕಕ್ಕೆ ಹತ್ತಿರವಾಗಿಸುತ್ತದೆ. ಯಾತ್ರಿಗಳು ಮತ್ತು ಪ್ರವಾಸಿಗರು ಕಾಶಿ, ಅಯೋಧ್ಯ ಹಾಗು  ಪ್ರಯಾಗ್ ರಾಜ್ ಗೆ ಭೇಟಿ ನೀಡುವುದು ಸುಲಭವಾಗುತ್ತದೆ ಎಂದು ಪ್ರಧಾನಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ. 

ಪ್ರಧಾನಿ ಈ ರೈಲುಗಳಿಗೆ ಚಾಲನೆ ನೀಡುತ್ತಿದ್ದರಿಂದ ಪ್ರಯಾಣಿಕರಲ್ಲಿ ಕುತೂಹಲ ಹೆಚ್ಚಾಗಿತ್ತು. ಇಡೀ ರೈಲಿನಲ್ಲಿ ಮೋದಿ ಮೋದಿ ಘೋಷಣೆ ಮುಗಿಲು ಮುಟ್ಟಿತ್ತು. ವಂದೇ ಭಾರತ್ ಮತ್ತು ಭಾರತ್ ಗೌರವ್ ಕಾಶಿ ದರ್ಶನ್ ರೈಲಿನಲ್ಲಿದ್ದ ಪ್ರಯಾಣಿಕರೊಂದಿಗೆ ಪ್ರಧಾನಿ ಸಂವಾದ ನಡೆಸಿದರು. ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com