ಬೆಂಗಳೂರು: ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಎಕ್ಸ್ ಪ್ರೆಸ್, ಭಾರತ್ ಗೌರವ್ ಕಾಶಿ ದರ್ಶನ ರೈಲಿಗೆ ಪ್ರಧಾನಿ ಮೋದಿ ಚಾಲನೆ

ಬೆಂಗಳೂರಿನ ಕೆಎಸ್‌ಆರ್ ರೈಲು ನಿಲ್ದಾಣದಲ್ಲಿ(ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ) ಇಂದು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರು ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಚಾಲನೆಗೆ ಹಸಿರು ನಿಶಾನೆ ತೋರಿಸಿದರು.
ಎರಡು ರೈಲುಗಳ ಸಂಚಾರಕ್ಕೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ
ಎರಡು ರೈಲುಗಳ ಸಂಚಾರಕ್ಕೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ
Updated on

ಬೆಂಗಳೂರು: ಬೆಂಗಳೂರಿನ ಕೆಎಸ್‌ಆರ್ ರೈಲು ನಿಲ್ದಾಣದಲ್ಲಿ(ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ) ಇಂದು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರು ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಚಾಲನೆಗೆ ಹಸಿರು ನಿಶಾನೆ ತೋರಿಸಿದರು.

ಪ್ರಧಾನಿಯನ್ನು ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸ್ವಾಗತಿಸಿದರು. ಪ್ಲಾಟ್​ಫಾರಂ ಸಂಖ್ಯೆ 7ರಲ್ಲಿ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ಇದಕ್ಕೂ ಮೊದಲು ಕೆಲ ಸಮಯ ರೈಲಿನೊಳಗೆ ಪ್ರವೇಶಿಸಿ ಪರಿಶೀಲಿಸಿದರು.

ಬಳಿಕ ಇದೇ ರೈಲು ನಿಲ್ದಾಣದಲ್ಲಿ ಕಾಶಿ ವಿಶ್ವನಾಥನ ದರ್ಶನಕ್ಕೆ ಹೋಗುವವರಿಗೆ ಅನುಕೂಲವಾಗುವ ಭಾರತ್ ಗೌರವ್ ಕಾಶಿ ದರ್ಶನ ರೈಲಿಗೂ ಚಾಲನೆ ನೀಡಿದರು. 

ಗೌರವ್ ಕಾಶಿ ದರ್ಶನ ರೈಲು ಯಾತ್ರಿಗಳನ್ನು ಕಾಶಿ, ಅಯೋಧ್ಯೆ ಸೇರಿದಂತೆ ಹಲವು ಪ್ರಮುಖ ಯಾತ್ರಾ ಸ್ಥಳಗಳಿಗೆ ಕೊಂಡೊಯ್ಯಲಿದ್ದು, ಒಂದು ವಾರದಲ್ಲಿ ಮರಳಿ ಬರಲಿದೆ. ರೈಲಿಗೆ 20 ಸಾವಿರ ಶುಲ್ಕ ನಿಗದಿಪಡಿಸಲಾಗಿದ್ದು, ರಾಜ್ಯ ಸರ್ಕಾರವು 5 ಸಾವಿರ ಸಹಾಯನಧನ ಒದಗಿಸುತ್ತಿದೆ. ಹೀಗಾಗಿ ಯಾತ್ರಿಕರು 15 ಸಾವಿರ ಮೊತ್ತದಲ್ಲಿ ಕಾಶಿ ಯಾತ್ರೆ ಪೂರ್ಣಗೊಳಿಸಬಹುದಾಗಿದೆ. ಈ ಶುಲ್ಕವು ಯಾತ್ರೆಯ ಅವಧಿಯ ಊಟೋಪಚಾರವನ್ನೂ ಒಳಗೊಂಡಿರುತ್ತದೆ.

#WATCH | Prime Minister Narendra Modi flags off Vande Bharat Express at KSR railway station in Bengaluru, Karnataka

(Source: DD) pic.twitter.com/sOF45cOwAX

ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರು ರೈಲು ನಿಲ್ದಾಣಕ್ಕೆ ತೆರಳುವ ಮಾರ್ಗದಲ್ಲಿ ಕಾರಿನಿಂದ ಕೆಳಗೆ ಇಳಿದು ಕಾರ್ಯಕರ್ತರಿಗೆ ಕೈ ಮುಗಿದು, ಕೈ ಬೀಸಿದರು. ಮೋದಿ ಅವರನ್ನು ಸ್ವಾಗತಿಸಲೆಂದು ರಸ್ತೆಯ ಇಕ್ಕೆಲಗಳಲ್ಲಿ ಬಿಜೆಪಿ ಕಾರ್ಯಕರ್ತರು ಭಾರೀ ಸಂಖ್ಯೆಯಲ್ಲಿ ಸೇರಿದ್ದರು. 

ಬಸ್ಸು ಸಂಚಾರ ಸ್ಥಗಿತ: ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮ ಹಿನ್ನಲೆ ಬಿಎಂಟಿಸಿ ಮತ್ತು ಕೆಎಸ್​ಆರ್​ಟಿಸಿ ಬಸ್ ಸಂಚಾರ ಸ್ಥಗಿತಗೊಂಡಿದೆ. ರೈಲ್ವೆ ನಿಲ್ದಾಣದಲ್ಲಿ ಕಾರ್ಯಕ್ರಮ ಹಿನ್ನಲೆ ಬೆಳಗ್ಗೆ 10 ಗಂಟೆಯಿಂದ 12 ಗಂಟೆವರೆಗೂ ಬಸ್ ಸಂಚಾರ ಸ್ಥಗಿತಗೊಳ್ಳಲಿದೆ. ಹೀಗಾಗಿ ಮೆಜೆಸ್ಟಿಕ್ ಬರುವ ಪ್ರಯಾಣಿಕರನ್ನು ಹತ್ತಿರದ ಬಸ್ ನಿಲ್ದಾಣದಲ್ಲಿ ನಿಲುಗಡೆ ಮಾಡುವಂತೆ ಸೂಚನೆ ನೀಡಲಾಗಿದೆ. ಪ್ರಯಾಣಿಕರು ಸಹಕರಿಸುವಂತೆ ಸಾರಿಗೆ ಇಲಾಖೆ ಮನವಿ‌ಮಾಡಿಕೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com