ಈದ್ಗಾ ಮೈದಾನದಲ್ಲಿ ಕನಕದಾಸ ಜಯಂತಿ ಆಚರಣೆ
ರಾಜ್ಯ
ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಶ್ರೀ ರಾಮ ಸೇನೆ ಕಾರ್ಯಕರ್ತರಿಂದ ಕನಕದಾಸ ಜಯಂತಿ ಆಚರಣೆ
ನಾಡಿನಾದ್ಯಂತ ಇಂದು ಸಡಗರ, ಸಂಭ್ರಮದಿಂದ ಕನಕದಾಸ ಜಯಂತಿಯನ್ನು ಆಚರಿಸಲಾಗುತ್ತಿದೆ. ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರಿಂದ ಕನಕದಾಸ ಜಯಂತಿ ಆಚರಿಸಲಾಯಿತು.
ಹುಬ್ಬಳ್ಳಿ: ನಾಡಿನಾದ್ಯಂತ ಇಂದು ಸಡಗರ, ಸಂಭ್ರಮದಿಂದ ಕನಕದಾಸ ಜಯಂತಿಯನ್ನು ಆಚರಿಸಲಾಗುತ್ತಿದೆ. ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರಿಂದ ಕನಕದಾಸ ಜಯಂತಿ ಆಚರಿಸಲಾಯಿತು.
ಶ್ರೀರಾಮ ಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರ ನೇತೃತ್ವದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮೂಲಕ ಗೌರವ ನಮನ ಸಲ್ಲಿಸಲಾಯಿತು.
ಈದ್ಗಾ ಮೈದಾನ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ದೊರೆತ ನಂತರ ಕನಕದಾಸ ಜಯಂತಿ ಆಚರಣೆಗೆ ಅನುಮತಿ ನೀಡಬೇಕೆಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಿಗೆ ಶ್ರೀರಾಮಸೇನಾ ಸಂಘಟನಾ ಕಾರ್ಯಕರ್ತರು ಮನವಿ ಮಾಡಿದ್ದರು. ಆದರಂತೆ ಆಚರಣೆಗೆ ಅನುಮತಿ ಸಿಕ್ಕಿದ್ದು, ಅದ್ಧೂರಿಯಾಗಿ ಕನಕದಾಸ ಜಯಂತಿ ಆಚರಿಸಲಾಗುತ್ತಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ