ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿಯನ್ನು ಬಂಧಿಸಿದ ಎನ್ಐಎ

ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಶನಿವಾರ ಮತ್ತೊಬ್ಬ ಆರೋಪಿಯನ್ನು ಬಂಧಿಸಿದೆ ಎಂದು ವರದಿಯಾಗಿದೆ.
ಎನ್ಐಎ
ಎನ್ಐಎ

ಮಂಗಳೂರು: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಶನಿವಾರ ಮತ್ತೊಬ್ಬ ಆರೋಪಿಯನ್ನು ಬಂಧಿಸಿದೆ ಎಂದು ವರದಿಯಾಗಿದೆ.

ಸುಳ್ಯದ ಶಾಹಿದ್ ಬೆಳ್ಳಾರೆ ಬಂಧಿತ ಆರೋಪಿ ಎಂದು ಮೂಲಗಳು ತಿಳಿಸಿವೆ.

ಶಾಹಿದ್ ಇದೇ ಪ್ರಕರಣದಲ್ಲಿ ಈ ಹಿಂದೆ ಬಂಧಿತರಾದ ಎಸ್‌ಡಿಪಿಐ ಮುಖಂಡರಾದ ಶಾಫಿ ಬೆಳ್ಳಾರೆ ಮತ್ತು ಇಕ್ಬಾಲ್ ಬೆಳ್ಳಾರೆ ಅವರ ಸಂಬಂಧಿಯಾಗಿದ್ದು, ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ಬೆಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದರೊಂದಿಗೆ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.

ಈ ವರ್ಷ ಜುಲೈ 26 ರಂದು ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣ ಸಂಬಂಧ ದಕ್ಷಿಣ ಕನ್ನಡ ಪೊಲೀಸರು ಹಲವರನ್ನು ಬಂಧಿಸಿದ್ದರು. ನಂತರ ಪ್ರಕರಣವನ್ನು ಎನ್‌ಐಎಗೆ ಹಸ್ತಾಂತರಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com