ಕೆಎಸ್ ಆರ್ ಟಿಸಿ ನೌಕರರಿಗೆ ಇದೇ ಮೊದಲ ಬಾರಿಗೆ 1 ಕೋಟಿ ರೂ. ಮೊತ್ತದ ಅಪಘಾತ ವಿಮೆ ಜಾರಿ

ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್​​ಆರ್​​ಟಿಸಿ) ತನ್ನ ನೌಕರರಿಗೆ ಸೋಮವಾರ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು, ದೇಶದ ರಸ್ತೆ ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ಸಿಬ್ಬಂದಿಗೆ 1 ಕೋಟಿ ರೂಪಾಯಿ ಮೊತ್ತದ...
ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ಕಂಪನಿ ಲಿ. ರವರೊಂದಿಗೆ ಒಡಂಬಡಿಕೆ
ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ಕಂಪನಿ ಲಿ. ರವರೊಂದಿಗೆ ಒಡಂಬಡಿಕೆ

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್​​ಆರ್​​ಟಿಸಿ) ತನ್ನ ನೌಕರರಿಗೆ ಸೋಮವಾರ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು, ದೇಶದ ರಸ್ತೆ ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ಸಿಬ್ಬಂದಿಗೆ 1 ಕೋಟಿ ರೂಪಾಯಿ ಮೊತ್ತದ ಅಪಘಾತ ವಿಮೆ ಯೋಜನೆ ಜಾರಿ ಮಾಡಿದೆ. 

ಈ ಹಿಂದೆ ಅಪಘಾತ ವಿಮಾ ಯೋಜನೆಗೆ ಸಂಬಂಧಿಸಿದಂತೆ ಎಸ್​ಬಿಐ​​ನೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದ ಕೆಎಸ್​​ಆರ್​​ಟಿಸಿ, ಸಿಬ್ಬಂದಿಗಳಿಗೆ 50 ಲಕ್ಷ ರೂ. ವಿಮೆ ನೀಡುವುದಾಗಿ ಘೋಷಿಸಿತ್ತು. ಇಂದು ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್​​ರವರಿಂದ ಮಾಡಿಕೊಂಡ ಒಡಂಬಡಿಕೆಯ 50 ಲಕ್ಷ ರೂ. ಸೇರಿ ಸಿಬ್ಬಂದಿಗೆ ಒಟ್ಟು ರೂ.1 ಕೋಟಿ ಅಪಘಾತ ವಿಮೆ ನೀಡುವುದಾಗಿ ಕೆಎಸ್ಆರ್​ಟಿಸಿ ಘೋಷಿಸಿದೆ.

ಇದುವರೆಗೂ ನಿಗಮದ ಸಿಬ್ಬಂದಿ ಅಪಘಾತದಲ್ಲಿ(ಕರ್ತವ್ಯದ ಮೇಲೆ ಅಥವಾ ಕರ್ತವ್ಯದಲ್ಲಿ ಇಲ್ಲದಿರುವಾಗಲೂ) ಮೃತಪಟ್ಟರೆ, ಶಾಶ್ವತ ಅಥವಾ ಭಾಗಶಃ ಅಂಗವೈಕಲ್ಯಕ್ಕೆ ತುತ್ತಾದರೆ ಯಾವುದೇ ದೊಡ್ಡ ಮೊತ್ತದ ಪರಿಹಾರದ ಹಣ ಅವರ ಅವಲಂಬಿತರಿಗಾಗಲಿ ಅಥವಾ ಅವರಿಗಾಗಲಿ ಲಭಿಸುತ್ತಿರಲಿಲ್ಲ. ಹೀಗಾಗಿ ಕೆಎಸ್ಆರ್ ಟಿಸಿ ಮೊದಲ ಬಾರಿಗೆ 50 ಲಕ್ಷ ರೂ. ಅಪಘಾತ ವಿಮೆ ಯೋಜನೆ ಜಾರಿ ಮಾಡಿತ್ತು. 

ಇದರ ಮುಂದುವರಿದ ಭಾಗವಾಗಿ, ಇಂದು ನಿಗಮವು ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ಕಂಪನಿ ಲಿ. ರವರೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದು, ಅದರಂತೆ ಸಿಬ್ಬಂದಿಗಳಿಗೆ ರೂ.50 ಲಕ್ಷದವರೆಗೆ ಅಪಘಾತ ಪರಿಹಾರ ವಿಮಾ ಯೋಜನೆ ಜಾರಿಗೆ ತಂದಿದ್ದು. ಈ ವಿಮಾ ಯೋಜನೆಗೆ ಸಿಬ್ಬಂದಿಗಳು ಮಾಹೆಯಾನ ರೂ.62.50 + ಜಿ.ಎಸ್.ಟಿ ಸೇರಿದಂತೆ (ವಾರ್ಷಿಕ ರೂ.885/- ಪ್ರೀಮಿಯಂ) ಪಾವತಿಸಬೇಕಾಗುತ್ತದೆ.

ಈ ಒಡಂಬಡಿಕೆಗೆ ಕೆಎಸ್ ಆರ್ ಟಿಸಿ ಅಧ್ಯಕ್ಷ ಎಂ.ಚಂದ್ರಪ್ಪ ಅವರ ಸಮ್ಮುಖದಲ್ಲಿ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ಹಾಗೂ ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ಕಂಪನಿಯ ಅಧಿಕಾರಿಗಳು ಸಹಿ ಹಾಕಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com