ಒಂದಿಷ್ಟು ಜನಕ್ಕೆ ಬಣ್ಣದ ಅಲರ್ಜಿ ಇದೆ: ಶಾಲೆಗಳ ಗೋಡೆಗಳಿಗೆ ಕೇಸರಿ ಬಣ್ಣ ಹಚ್ಚಿಯೇ ತೀರುತ್ತೇನೆ: ಸಚಿವ ನಾಗೇಶ್

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ 8000 ಶಾಲಾ ಕೊಠಡಿಗಳಿಗೆ ವಿವೇಕ ಎಂದು ಹೆಸರಿಡಲಾಗುತ್ತಿದೆ.
ಬಿ ಸಿ ನಾಗೇಶ್
ಬಿ ಸಿ ನಾಗೇಶ್

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ 8000 ಶಾಲಾ ಕೊಠಡಿಗಳಿಗೆ ವಿವೇಕ ಎಂದು ಹೆಸರಿಡಲಾಗುತ್ತಿದೆ. ಅಂತಹ ಶಾಲೆಗಳ ಗೋಡೆಗಳಿಗೆ ಕೇಸರಿ ಬಣ್ಣ ಹಚ್ಚುವ ಆರ್ಕಿಟೆಕ್ಚರ್‌ ಏನಾದರೂ ಕೇಸರಿ ಬಣ್ಣ ಚೆನ್ನಾಗಿದೆ ಅಂತಾ ಹೇಳಿದರೆ ಕೇಸರಿ ಬಣ್ಣ ಹಚ್ಚಿಯೇ ತೀರುತ್ತೇನೆಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಸರಿ ಬಣ್ಣ ಹೌದೋ ಅಲ್ವೋ? ಕೇಸರಿ ಬಣ್ಣ ಚೆನ್ನಾಗಿದೆ ಅಂತಾ ಆರ್ಕಿಟೆಕ್ಟ್ ಹೇಳಿದರೆ ಕೇಸರಿ ಹಾಕುತ್ತೇನೆ. ವಿವೇಕ ಶಾಲೆಯ ಬಣ್ಣ, ಕಿಟಕಿ ಬಗ್ಗೆ ಸರ್ಕಾರ ನಿರ್ಧಾರ ತೆಗೆದುಕೊಳ್ಳಲ್ಲ. ಆರ್ಕಿಟೆಕ್ಚರ್‌ ಮೇಲೆ ಬಿಟ್ಟಿದ್ದೇವೆ. ಅವರು ಕೊಡುವ ಡಿಸೈನ್‌ ಮೇಲೆ ನಾವು ಡಿಸೈಡ್‌ ಮಾಡ್ತೀವಿ. ಒಂದಿಷ್ಟು ಜನಕ್ಕೆ ಬಣ್ಣದ ಅಲರ್ಜಿ ಇದೆ. ಅವರ ಧ್ವಜದಲ್ಲೂ ಕೇಸರಿ ಇದೆ. ಅದನ್ನು ಏಕೆ ಬಿಟ್ಕೊಂಡಿದಾರೆ. ಅದನ್ನು ಪೂರ್ತಿ ಹಸಿರು ಮಾಡ್ಕೊಂಡು ಬಿಡ್ತೀವಿ ಎಂದು ಹೇಳಿದ್ದಾರೆ.

ಕೇಸರಿ ಬಣ್ಣವೋ ಅಲ್ವೋ..? ಕೇಸರಿ ಬಣ್ಣ ಚೆನ್ನಾಗಿದೆ ಅಂತಾ ಆರ್ಕಿಟೆಕ್ಟ್ ಹೇಳಿದ್ರೆ ಕೇಸರಿ ಹಾಕ್ತೀನಿ. ಬಣ್ಣ, ಕಿಟಕಿ ಬಗ್ಗೆ ಸರ್ಕಾರ ನಿರ್ಧಾರ ತೆಗೆದುಕೊಳ್ಳಲ್ಲ ಆರ್ಕಿಟೆಕ್ಟ್ ಮೇಲೆ ಬಿಡ್ರೀವಿ ಅವರು ಕೊಡುವ ಡಿಸೈನ್ ಮೇಲೆ ನಾವು ಡಿಸೈಡ್ ಮಾಡ್ತೀವಿ ಎಂದರು.

ಒಂದಿಷ್ಟು ಜನಕ್ಕೆ ಬಣ್ಣದ ಅಲರ್ಜಿ ಇದೆ. ಅವರ ಧ್ವಜದಲ್ಲೂ ಕೇಸರಿ ಇದೆ. ಅದನ್ನು ಯಾಕೆ ಬಿಟ್ಕೊಂಡಿದಾರೆ. ಪೂರ್ತಿ ಹಸಿರು ಮಾಡ್ಕೊಂಬಿಡಿ ಎಂದು ಕಾಂಗ್ರೆಸ್ ಹೆಸರು ಹೇಳದೆ ಟಾಂಗ್ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com