ರಸ್ತೆಗುಂಡಿಗೆ ರಾಜ್ಯದಲ್ಲಿ ಮತ್ತೊಂದು ಬಲಿ: ನಿವೃತ್ತ ಯೋಧನ ಮೇಲೆ ಟ್ರಕ್ ಹರಿದು ಸಾವು!
ರಾಜ್ಯದಲ್ಲಿ ರಸ್ತೆ ಗುಂಡಿ ಸಾವಿನ ಸರಣಿ ಮುಂದುವರೆದಿದ್ದು, ಮಂಡ್ಯದಲ್ಲಿ ರಸ್ತೆಗೆ ಗುಂಡಿಗೆ ನಿವೃತ್ತ ಯೋಧನೋರ್ವ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.
Published: 14th November 2022 11:25 AM | Last Updated: 14th November 2022 07:13 PM | A+A A-

ರಸ್ತೆ ಗುಂಡಿಗೆ ನಿವೃತ್ತ ಯೋಧ ಬಲಿ
ಮಂಡ್ಯ: ರಾಜ್ಯದಲ್ಲಿ ರಸ್ತೆ ಗುಂಡಿ ಸಾವಿನ ಸರಣಿ ಮುಂದುವರೆದಿದ್ದು, ಮಂಡ್ಯದಲ್ಲಿ ರಸ್ತೆಗೆ ಗುಂಡಿಗೆ ನಿವೃತ್ತ ಯೋಧನೋರ್ವ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.
ಮಂಡ್ಯದ ಕಾರೆಮನೆ ಗೇಟ್ ಬಳಿ ಈ ಘಟನೆ ನಡೆದಿದ್ದು, ಎಸ್.ಎನ್ ಕುಮಾರ್ (39) ಮೃತ ನಿವೃತ್ತ ಯೋಧ. ತಂದೆ ಜೊತೆ ಬೈಕ್‍ನಲ್ಲಿ ತೆರಳುತ್ತಿದ್ದಾಗ ಕುಮಾರ್ ಈ ಘಟನೆ ಜರುಗಿದೆ. ಸಾತನೂರಿನಿಂದ ಮಂಡ್ಯಗೆ ಬರುತ್ತಿದ್ದ ವೇಳೆ ಕಾರೆಮನೆ ಗೇಟ್ ಬಳಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ.
ಇದನ್ನೂ ಓದಿ: ಬೆಂಗಳೂರಿನ ರಸ್ತೆಗುಂಡಿಗೆ ಮತ್ತೊಂದು ಅವಘಡ: ಬೈಕ್ ನಿಂದ ಬಿದ್ದು ತಲೆಗೆ ತೀವ್ರ ಪೆಟ್ಟು, ಕೋಮಾಕ್ಕೆ ಜಾರಿದ ಸಂದೀಪ್
ಗುಂಡಿಯನ್ನು ತಪ್ಪಿಸಲು ಹೋಗಿ ಎದುರಿನಿಂದ ಬಂದ ಬೈಕ್ ಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದ ಕುಮಾರ್ ಗೆ ಹಿಂದಿನಿಂದ ಬಂದ ಲಾರಿ ಹರಿದ ಪರಿಣಾಮ ಸ್ಥಳದಲ್ಲೇ ಸಾವವನ್ನಪ್ಪಿದ್ದಾರೆ. ತಂದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸೇನೆಯಲ್ಲಿ ಸೇವೆ ಸಲ್ಲಿಸಿ ಇತ್ತೀಚೆಗೆ ನಿವೃತ್ತರಾಗಿದ್ದ ಕುಮಾರ್, ನಿವೃತ್ತಿ ಬಳಿಕ ಪೊಲೀಸ್ ಪೇದೆಯಾಗಿ ತರಬೇತಿಗೆ ಹೋಗುತ್ತಿದ್ದರು. ನಿನ್ನೆ ಸ್ವಗ್ರಾಮ ಸಾತನೂರು ಗ್ರಾಮಕ್ಕೆ ಕುಮಾರ್ ಬಂದಿದ್ದ ವೇಳೆ ಈ ಘಟನೆ ಜರುಗಿದ್ದು, ಮಂಡ್ಯ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.