ಕೇಸರಿ ಕಂಡರೆ ಕಾಂಗ್ರೆಸ್‌ಗೇಕೆ ಅಲರ್ಜಿ?: 'ವಿವೇಕ ಯೋಜನೆ' ಸಮರ್ಥಿಸಿಕೊಂಡ ಸಿಎಂ ಬೊಮ್ಮಾಯಿ

ಶಾಲಾ ಕೊಠಡಿಗಳಿಗೆ ಕೇಸರಿ ಬಣ್ಣ ಹೊಡೆಯುವ ಸರ್ಕಾರದ ನಿರ್ಧಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಸಮರ್ಥಿಸಿಕೊಂಡಿದ್ದಾರೆ.
ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ

ಬೆಂಗಳೂರು: ಶಾಲಾ ಕೊಠಡಿಗಳಿಗೆ ಕೇಸರಿ ಬಣ್ಣ ಹೊಡೆಯುವ ಸರ್ಕಾರದ ನಿರ್ಧಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಸಮರ್ಥಿಸಿಕೊಂಡಿದ್ದಾರೆ.

ಭಾರತದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮದಿನದ ಅಂಗವಾಗಿ ವಿಧಾನ ಸೌಧದ ಮುಂಭಾಗದಲ್ಲಿರುವ ಅವರ ಪ್ರತಿಮೆಗೆ ಸಿಎಂ ಬೊಮ್ಮಾಯಿಯವರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಎಲ್ಲದರಲ್ಲೂ ರಾಜಕಾರಣ ಮಾಡುವುದು ಸರಿಯಲ್ಲ. ಇದು ಬಹಳ ಕೆಳಹಂತಕ್ಕೆ ಹೋಗುತ್ತಿದೆ. ಕೇಸರಿ ಬಣ್ಣ ನಮ್ಮ ಭಾರತದ ಬಾವುಟದಲ್ಲೇ ಇದೆ. ಕೇಸರಿ ಕಂಡರೆ ಅವರಿಗೆ ಯಾಕೆ ಅಷ್ಟೊಂದು ಅಲರ್ಜಿ? ಎಂದು ಪ್ರಶ್ನೆ ಮಾಡಿದರು.

ಈ ಯೋಜನೆಯನ್ನು ಸ್ವಾಮಿ ವಿವೇಕಾನಂದ ಅವರ ಹೆಸರಿನಲ್ಲಿ ಮಾಡುತ್ತಿದ್ದೇವೆ. ಸ್ವಾಮಿ ವಿವೇಕಾನಂದ ಒಬ್ಬ ಸನ್ಯಾಸಿ. ಅವರು ತೊಡುತ್ತಿದ್ದ ಎಲ್ಲಾ ವಸ್ತ್ರಗಳೂ ಕೇಸರಿ. ಹೀಗಾಗಿ ಅವರ ಹೆಸರಿನಲ್ಲಿ ಮಾಡುತ್ತಿರುವ ಯೋಜನೆಯಾದ್ದರಿಂದ ಶಾಲೆಗಳ ಕೊಠಡಿಗೆ ಕೇಸರಿ ಬಣ್ಣ ಹಚ್ಚಲಾಗುತ್ತಿದೆ. ಅದರಲ್ಲಿ ಬೇರೆ ಯಾವುದೇ ಅರ್ಥವಿಲ್ಲ. ವಿವೇಕ ಎಂದರೆ ಎಲ್ಲರಿಗೂ ಜ್ಞಾನ. ಇದರಲ್ಲೂ ರಾಜಕೀಯ ಮಾಡುವುದು ಸರಿಯಲ್ಲ ಎಂದು ಕಾಂಗ್ರೆಸ್‌ಗೆ ತಿರುಗೇಟು ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com