ಕಲಬುರಗಿ: ಬಿಜೆಪಿ ಮುಖಂಡನ ಬರ್ಬರ ಹತ್ಯೆ

ಚಾಕು ಇರಿದು ಬಿಜೆಪಿ ಮುಖಂಡನ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಜಿಲ್ಲೆಯ ಸೇಡಂ ಪಟ್ಟಣದಲ್ಲಿ ಮಂಗಳವಾರ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕಲಬುರಗಿ: ಚಾಕು ಇರಿದು ಬಿಜೆಪಿ ಮುಖಂಡನ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಜಿಲ್ಲೆಯ ಸೇಡಂ ಪಟ್ಟಣದಲ್ಲಿ ಮಂಗಳವಾರ ನಡೆದಿದೆ.

ಮೃತ ಬಿಜೆಪಿ ಮುಖಂಡನನ್ನು ಮಲ್ಲಿಕಾರ್ಜುನ್ ಮುತ್ಯಾಲ (64) ಎಂದು ಗುರುತಿಸಲಾಗಿದೆ. ಬಿಜೆಪಿ ಮುಖಂಡರೂ ಆಗಿದ್ದ ಮಲ್ಲಿಕಾರ್ಜುನ್​ ಅವರು ಸೇಡಂ ಪಟ್ಟಣದಲ್ಲಿ ಎಲೆಕ್ಟ್ರಾನಿಕ್ ಅಂಗಡಿ ಮತ್ತು ಟಿವಿ ಶಾಪ್ ಇಟ್ಟುಕೊಂಡಿದ್ದರು.

ಎಲೆಕ್ಟ್ರಾನಿಕ್ ಅಂಗಡಿಯಲ್ಲೇ ಇಂದು(ಮಂಗಳವಾರ) ಮಲ್ಲಿಕಾರ್ಜುನ್​ ಅವರನ್ನ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಮರ್ಮಾಂಗಕ್ಕೆ ಚಾಕು ಇರಿದು, ಕತ್ತಿಗೆಗೆ ಹಗ್ಗ ಬಿಗಿದು ಕೊಲೆ ಮಾಡಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸೇಡಂ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com