ನಕಲಿ ಡೆಲಿವರಿ ಆ್ಯಪ್‌ಗಳಲ್ಲಿ ಫುಡ್ ಆರ್ಡರ್ ಮಾಡಿ 2.4 ಲಕ್ಷ ರೂಪಾಯಿ ಕಳೆದುಕೊಂಡ ಇಬ್ಬರು

ನಕಲಿ ಫುಡ್ ಡೆಲಿವರಿ ಆ್ಯಪ್‌ಗಳನ್ನು ಸೃಷ್ಟಿಸಿ ಜನರಿಗೆ ₹2.4 ಲಕ್ಷ ವಂಚಿಸಿದ ಆರೋಪದ ಮೇಲೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಪೂರ್ವ ವಿಭಾಗದ ಸಿಇಎನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ಬೆಂಗಳೂರು: ನಕಲಿ ಫುಡ್ ಡೆಲಿವರಿ ಆ್ಯಪ್‌ಗಳನ್ನು ಸೃಷ್ಟಿಸಿ ಜನರಿಗೆ ₹2.4 ಲಕ್ಷ ವಂಚಿಸಿದ ಆರೋಪದ ಮೇಲೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಪೂರ್ವ ವಿಭಾಗದ ಸಿಇಎನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇಬ್ಬರು ಸಂತ್ರಸ್ತರು ನೀಡಿರುವ ದೂರಿನ ಆಧಾರದ ಮೇಲೆ ಆರೋಪಿಗಳ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದು, ಖಾಸಗಿ ಕಂಪನಿಯೊಂದರಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿರುವ ದೀಪಿಕಾ ಮತ್ತು ಉದ್ಯಮಿ ಇಮ್ರಾನ್ ಬೇಗ್ ಎಂಬುವವರು ಈ ಆ್ಯಪ್‌ಗಳಲ್ಲಿನ ಆಫರ್‌ಗಳ ತಿಳಿದ ನಂತರ ಸಾಮಾಜಿಕ ಮಾಧ್ಯಮಗಳ ಮೂಲಕ ಅಪ್ಲಿಕೇಶನ್‌ಗಳಲ್ಲಿ ಫುಡ್ ಆರ್ಡರ್ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಳಿಕ ಪಾವತಿ ಸಮಸ್ಯೆಗಳ ಬಗ್ಗೆ ಫೋನ್ ಮೂಲಕ ಮಾತನಾಡಿದ ವಂಚಕ, ಅವರ ಬಿಲ್‌ಗಳನ್ನು ಮರುಪಾವತಿಸಲು ಲಿಂಕ್‌ಗಳನ್ನು ಕಳುಹಿಸಿದ್ದಾನೆ. ಅವರಿಬ್ಬರು ಆ ಲಿಂಕ್ ಅನ್ನು ಕ್ಲಿಕ್ ಮಾಡಿ ಅವರ ಬ್ಯಾಂಕ್‌ ಖಾತೆಗಳು ಮತ್ತು ಕ್ರೆಡಿಟ್‌ ಕಾರ್ಡ್‌ಗಳಿಂದ 2.4 ಲಕ್ಷ ರೂಪಾಯಿಯನ್ನು ಕಳೆದುಕೊಂಡಿದ್ದಾರೆ.

ಇಬ್ಬರನ್ನು ಸಂಪರ್ಕಿಸಲು ಆರೋಪಿಯು ಒಂದೇ ಸಿಮ್ ಕಾರ್ಡ್‌ಅನ್ನು ಬಳಸಿದ್ದು, ಹಣ ಮಾತ್ರ ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆಯಾಗಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ. ನಕಲಿ ಅಪ್ಲಿಕೇಶನ್‌ಗಳನ್ನು ರಚಿಸಿ ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಇರಿಸಲಾಗಿದೆ ಮತ್ತು ಲಿಂಕ್‌ಗಳನ್ನು ಜನರಿಗೆ ಕಳುಹಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹೆಚ್ಚಿನ ಸಂದರ್ಭಗಳಲ್ಲಿ ವಹಿವಾಟುಗಳನ್ನು ಆನ್‌ಲೈನ್‌ನಲ್ಲಿ ಮಾಡಲಾಗುವುದರಿಂದ, ಇಂತಹ ಪ್ರಕರಣಗಳನ್ನು ತಡೆಯಲು ನಾವು ಆನ್‌ಲೈನ್ ವಂಚನೆಯ ಬಗ್ಗೆ ಜಾಗೃತಿ ಮೂಡಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com