ಸದ್ಯದಲ್ಲಿಯೇ ಕೆಂಪೇಗೌಡ ಪ್ರತಿಮೆ ಸಾರ್ವಜನಿಕ ವೀಕ್ಷಣೆಗೆ ಲಭ್ಯ: ಸಚಿವ ಡಾ. ಸಿ ಎನ್ ಅಶ್ವಥ ನಾರಾಯಣ
ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ವೀಕ್ಷಿಸಲು ಆಸಕ್ತಿ ಹೊಂದಿರುವ ಪ್ರವಾಸಿಗರಿಗೆ ವಿಶೇಷ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಐಟಿ-ಬಿಟಿ ಸಚಿವ ಹಾಗೂ ಕೆಂಪೇಗೌಡ ಪರಂಪರೆ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷ ಡಾ.ಸಿ.ಎನ್.ಅಶ್ವಥ್ ನಾರಾಯಣ ಹೇಳಿದ್ದಾರೆ.
Published: 15th November 2022 09:06 AM | Last Updated: 15th November 2022 01:45 PM | A+A A-

ಕೆಂಪೇಗೌಡ ಪ್ರತಿಮೆ
ಬೆಂಗಳೂರು: ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ವೀಕ್ಷಿಸಲು ಆಸಕ್ತಿ ಹೊಂದಿರುವ ಪ್ರವಾಸಿಗರಿಗೆ ವಿಶೇಷ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಐಟಿ-ಬಿಟಿ ಸಚಿವ ಹಾಗೂ ಕೆಂಪೇಗೌಡ ಪರಂಪರೆ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷ ಡಾ.ಸಿ.ಎನ್.ಅಶ್ವಥ್ ನಾರಾಯಣ ಹೇಳಿದ್ದಾರೆ.
ಅವರು ನಿನ್ನೆ ಅಧಿಕಾರಿಗಳನ್ನು ಭೇಟಿ ಮಾಡಿ, ಪ್ರತಿಮೆ ನೋಡಲು ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿರುವ ಕಾರಣ ಮತ್ತು ಪ್ರವಾಸಿಗರಿಗೆ ಪ್ರವೇಶವಿಲ್ಲ ಎಂಬ ಸುದ್ದಿ ಹಿನ್ನೆಲೆಯಲ್ಲಿ ಈ ನಿಟ್ಟಿನಲ್ಲಿ ವಿಶೇಷ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಕೆಂಪೇಗೌಡ ಥೀಮ್ ಪಾರ್ಕ್‌ನ ಅಭಿವೃದ್ಧಿಗೆ ಸಂಬಂಧಿಸಿದ ಕೆಲಸಗಳು ಇನ್ನೂ ನಡೆಯುತ್ತಿರುವುದರಿಂದ, ಪ್ರವಾಸಿಗರಿಗೆ ಐಒಸಿ ಇಂಧನ ನಿಲ್ದಾಣದ ಕಡೆಯಿಂದ ಪ್ರತಿಮೆಯನ್ನು ತಲುಪಲು ಅನುಕೂಲ ಕಲ್ಪಿಸಲು ನಿರ್ಧರಿಸಲಾಗಿದೆ. ಇಂಧನ ಕೇಂದ್ರದ ಹಿಂದೆ ಗರಿಷ್ಠ 80 ವಾಹನಗಳಿಗೆ ಸಾರ್ವಜನಿಕರಿಗೆ ಪಾರ್ಕಿಂಗ್ ಸೌಲಭ್ಯಗಳನ್ನು ಒದಗಿಸಲಾಗುವುದು, ಇದು ಒಂದು ವಾರದಲ್ಲಿ ಲಭ್ಯವಾಗಲಿದೆ ಎಂದರು.
ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣದ ಕೆಂಪೇಗೌಡ ಪ್ರತಿಮೆ: ಸಾರ್ವಜನಿಕರಿಗೆ ನಿರ್ಬಂಧ? ರಾಜಕಾರಣಿಗಳಿಗೆ ಮಾತ್ರ ಮುಕ್ತ ಪ್ರವೇಶವೇ?
ಪ್ರತಿ ಸಂದರ್ಶಕರಿಗೆ 30 ನಿಮಿಷಗಳ ಕಾಲ ಸ್ಥಳದಲ್ಲಿ ಉಳಿಯಲು ಅವಕಾಶವಿದೆ. ಈ ಸಮಯದಲ್ಲಿ ಮಾಡಲಾಗುತ್ತಿರುವ ವ್ಯವಸ್ಥೆಗಳು ತಾತ್ಕಾಲಿಕವಾಗಿದ್ದು, ಥೀಮ್ ಪಾರ್ಕ್‌ನ ಕೆಲಸ ಪೂರ್ಣಗೊಂಡ ನಂತರ ಹೆಚ್ಚಿನ ಸೌಲಭ್ಯಗಳನ್ನು ಜಾರಿಗೆ ತರಲಾಗುವುದು ಎಂದರು,
ಪ್ರತಿಮೆಗೆ ಭೇಟಿ ನೀಡುವವರಿಂದ ಯಾವುದೇ ಶುಲ್ಕವನ್ನು ಸಂಗ್ರಹಿಸಲಾಗುವುದಿಲ್ಲ. ರಾತ್ರಿ ಸಮಯದಲ್ಲಿ ಅದನ್ನು ಹೆಚ್ಚು ಆಕರ್ಷಕವಾಗಿಸಲು ಸ್ಥಳದಲ್ಲಿ ಬೆಳಕಿನ ವ್ಯವಸ್ಥೆಯನ್ನು ಸಹ ಮಾಡಲಾಗುತ್ತಿದೆ ಎಂದು ಸಚಿವರು ಹೇಳಿದರು.
#StatueOfProsperity - ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ವೀಕ್ಷಿಸಲು ಆಗಮಿಸುವ ಪ್ರವಾಸಿಗರಿಗೆ ಸೂಕ್ತ ಸೌಲಭ್ಯ ಕಲ್ಪಿಸುವ ಸಂಬಂಧ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ವಾಹನ ನಿಲುಗಡೆ ವ್ಯವಸ್ಥೆ, ಪ್ರತಿಮೆಯ ಬಳಿ ತಲುಪುವ ಮಾರ್ಗದ ಕುರಿತು ಸಂಬಂಧಪಟ್ಟ ಅಧಿಕಾರಿಗಳ ಜತೆ ಚರ್ಚಿಸಿದೆ.
— Dr. Ashwathnarayan C. N. (@drashwathcn) November 14, 2022
1/2 pic.twitter.com/SWH6NN8zeR