5 ಲಕ್ಷ ರೂ. ಲಂಚದ ಜೊತೆಗೆ ಲೋಕಾಯುಕ್ತಗೆ ಸಿಕ್ಕಿಬಿದ್ದ ಮಹಿಳಾ ಕೆಎಎಸ್ ಅಧಿಕಾರಿ!

ಖಾತೆ ಮಾಡಿಕೊಡಲು ಐದು ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಮಹಿಳಾ ಕೆಎಎಸ್ ಅಧಿಕಾರಿಯನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಖಾತೆ ಮಾಡಿಕೊಡಲು ಐದು ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಮಹಿಳಾ ಕೆಎಎಸ್ ಅಧಿಕಾರಿಯನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. 

ಬೆಂಗಳೂರು ನಗರ ಉತ್ತರ ವಿಭಾಗದ ವಿಶೇಷ ತಹಶೀಲ್ದಾರ್ ಆಗಿ ಕಂದಾಯ ಭವನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 2014ನೇ ಬ್ಯಾಚ್ ಅಧಿಕಾರಿಯಾಗಿರುವ ಕೆಎಎಸ್ ಅಧಿಕಾರಿ ವರ್ಷಾ ಒಡೆಯರ್ ರನ್ನು ಇಂದು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.

ಖಾತೆ ಮಾಡಿಕೊಡಲು ದೂರುರಾರರಿಂದ ಮಧ್ಯವರ್ತಿಗಳ ಮೂಲಕ 10 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ವರ್ಷಾ ಒಡೆಯರ್ ರನ್ನು ವಶಕ್ಕೆ ಪಡೆದಿರುವ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com