ಸರ್ಕಾರಿ ಆಸ್ಪತ್ರೆಗಳಲ್ಲಿ ಸಿ-ಸೆಕ್ಷನ್‌ ಹೆರಿಗೆಗೆ ಕಡಿವಾಣ, ಸಮಿತಿ ರಚನೆ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ 

ತುಮಕೂರು ಜಿಲ್ಲೆಯ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆಗಳಲ್ಲಿ ಸಿ-ಸೆಕ್ಷನ್‌ ಹೆರಿಗೆ ಕುರಿತು ನಿಗಾ ವಹಿಸಲು ಸಮಿತಿ ರಚಿಸಲಾಗುವುದು. ಸಿ-ಸೆಕ್ಷನ್‌ ಹೆರಿಗೆ ಹೆಚ್ಚಳಕ್ಕೆ ಕಡಿವಾಣ ಹಾಕಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು.
ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌
ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌

ತುಮಕೂರು: ತುಮಕೂರು ಜಿಲ್ಲೆಯ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆಗಳಲ್ಲಿ ಸಿ-ಸೆಕ್ಷನ್‌ ಹೆರಿಗೆ ಕುರಿತು ನಿಗಾ ವಹಿಸಲು ಸಮಿತಿ ರಚಿಸಲಾಗುವುದು. ಸಿ-ಸೆಕ್ಷನ್‌ ಹೆರಿಗೆ ಹೆಚ್ಚಳಕ್ಕೆ ಕಡಿವಾಣ ಹಾಕಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು.

ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಪರಿಶೀಲನೆ, ರೋಗಿಗಳೊಂದಿಗೆ ಸಮಾಲೋಚನೆ ಹಾಗೂ ಸಭೆ ನಡೆಸಿದ ಬಳಿಕ ಸಚಿವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ತುಮಕೂರಿನ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆಗಳಲ್ಲಿ ಸಿ ಸೆಕ್ಷನ್‌ ಹೆರಿಗೆ ಕುರಿತು ನಿಗಾ ವಹಿಸಲು ಸಮಿತಿ ರಚಿಸಲಾಗುವುದು. ಸಿ ಸೆಕ್ಷನ್‌ ಪ್ರಮಾಣ 20-40% ಒಳಗೆ ಇರಬೇಕಾಗುತ್ತದೆ.  ಇದರಲ್ಲಿ ಉದ್ದೇಶಪೂರ್ವಕ ಅಥವಾ ಭ್ರಷ್ಟಾಚಾರ ಇರಬಾರದು. ಇದಕ್ಕೆ ಕಡಿವಾಣ ಹಾಕಲಾಗುವುದು. ಜಿಲ್ಲಾ ಸರ್ಜನ್‌, ಎಲ್ಲಾ ವಿಭಾಗದ ಮುಖ್ಯಸ್ಥರೊಂದಿಗೆ ಪ್ರತಿ ಶುಕ್ರವಾರ ಸಭೆ ನಡೆಸಿ ಚರ್ಚಿಸಬೇಕು. ಲೋಪಗಳು ಕಂಡುಬಂದರೆ ಕೂಡಲೇ ಕ್ರಮ ವಹಿಸಬೇಕು. ಜಿಲ್ಲಾಧಿಕಾರಿಗಳು ಜಿಲ್ಲಾಸ್ಪತ್ರೆಯನ್ನು ಪರಿಶೀಲಿಸಬೇಕೆಂದು ಸೂಚಿಸಲಾಗಿದೆ ಎಂದರು.

ತುಮಕೂರು ಜಿಲ್ಲಾಸ್ಪತ್ರೆಯಲ್ಲಿ 44 ತಜ್ಞ ವೈದ್ಯರ ಹುದ್ದೆ ಮಂಜೂರಾಗಿದೆ. ಅದರಲ್ಲಿ 42 ತಜ್ಞರು ಕೆಲಸ ಮಾಡುತ್ತಿದ್ದಾರೆ. 2 ಹುದ್ದೆ ಮಾತ್ರ ಖಾಲಿ ಇದ್ದು, ವೈದ್ಯರ ಕೊರತೆ ಇಲ್ಲ. ಇಲ್ಲಿ 250 ಹಾಸಿಗೆ ಇದ್ದು, 2003 ರಲ್ಲಿ 400 ಕ್ಕೆ ಹೆಚ್ಚಿಸಲಾಗಿದೆ. ಇದಕ್ಕೆ ತಕ್ಕಂತೆ ಮಾನವ ಸಂಪನ್ಮೂಲ ಸೃಜಿಸಿಲ್ಲ. ಈ ಸಮಸ್ಯೆಯನ್ನು ಶೀಘ್ರದಲ್ಲಿ ಪರಿಹರಿಸಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com