ಉಡುಪಿ: ಶಾಲಾ ಕ್ರೀಡಾಕೂಟದಲ್ಲಿ ಆಜಾನ್'ಗೆ ನೃತ್ಯ ಮಾಡಿದ ವಿದ್ಯಾರ್ಥಿಗಳು, ವ್ಯಾಪಕ ಆಕ್ರೋಶ, ಪ್ರತಿಭಟನೆ

ಶಾಲಾ ಕ್ರೀಡಾಕೂಟದ ಸಮಯದಲ್ಲಿ ಮುಸ್ಲಿಮರ ಆಜಾನ್ (ಅಲ್ಲಾಹು ಅಕ್ಬರ್)ಗೆ ವಿದ್ಯಾರ್ಥಿಗಳು ನೃತ್ಯ ಮಾಡಿದ್ದು, ಈ ಬೆಳವಣಿಗೆಗೆ ಹಿಂದೂಪರ ಸಂಘಟನೆಗಳಿಂದ ತೀವ್ರ ಆಕ್ರೋಶಗಳು ವ್ಯಕ್ತವಾಗಿವೆ. ಹಿಂದೂಪರ ಸಂಘಟನೆಗಳಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಶಾಲಾ ಆಡಳಿತ ಮಂಡಳಿ ಇದೀಗ ಕ್ಷಮೆಯಾಚಿಸಿದೆ.
ಪ್ರತಿಭಟನಾನಿರತ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು.
ಪ್ರತಿಭಟನಾನಿರತ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು.

ಮಂಗಳೂರು: ಶಾಲಾ ಕ್ರೀಡಾಕೂಟದ ಸಮಯದಲ್ಲಿ ಮುಸ್ಲಿಮರ ಆಜಾನ್ (ಅಲ್ಲಾಹು ಅಕ್ಬರ್)ಗೆ ವಿದ್ಯಾರ್ಥಿಗಳು ನೃತ್ಯ ಮಾಡಿದ್ದು, ಈ ಬೆಳವಣಿಗೆಗೆ ಹಿಂದೂಪರ ಸಂಘಟನೆಗಳಿಂದ ತೀವ್ರ ಆಕ್ರೋಶಗಳು ವ್ಯಕ್ತವಾಗಿವೆ. ಹಿಂದೂಪರ ಸಂಘಟನೆಗಳಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಶಾಲಾ ಆಡಳಿತ ಮಂಡಳಿ ಇದೀಗ ಕ್ಷಮೆಯಾಚಿಸಿದೆ.

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಶಂಕರನಾರಾಯಣ ಪೇಟೆಯಲ್ಲಿರುವ ಮದರ್ ತೆರೇಸಾ ಮೆಮೋರಿಯಲ್ ಶಾಲೆಯಲ್ಲಿಕ್ರೀಡಾಕೂಟ ಆಯೋಜಿಸಲಾಗಿತ್ತು. ಇದಕ್ಕೂ ಮುನ್ನ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಸೋಮವಾರ ನಡೆದ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ನಮಾಜ್ ಮಾಡುವಂತೆ ಹೇಳಿ ಧ್ವನಿವರ್ಧಕದಲ್ಲಿ ‘ಅಜಾನ್’ ನುಡಿಸಲಾಯಿತು. ಈ ವೇಳೆ ವಿದ್ಯಾರ್ಥಿಗಳು ನೃತ್ಯ ಮಾಡಿದ್ದು, ಇದಕ್ಕೆ ಆಕ್ರೋಶ ವ್ಯಕ್ತವಾಗಿವೆ.

ಆಜಾನ್‌ಗೆ ವಿದ್ಯಾರ್ಥಿನಿಯರು ನೃತ್ಯ ಮಾಡಿದ ದೃಶ್ಯದ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ವಿಡಿಯೋ ವೈರಲ್ ಆಗಿದೆ.

ಇನ್ನು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆ ಸ್ಥಳೀಯ ಹಿಂದೂ ಪರ ಸಂಘಟನೆಗಳು ಆಕ್ರೋಶ ಹೊರ ಹಾಕಿದ್ದು, ಶಾಲಾ ಆಡಳಿತ ಮಂಡಳಿ ಕ್ಷಮೆ ಕೇಳಬೇಕೆಂದು ಪಟ್ಟು ಹಿಡಿದು ಪ್ರತಿಭಟನೆ ಎಚ್ಚರಿಕೆ ನೀಡಿದರು.

ವಿರೋಧ ಹೆಚ್ಚಾಗುತ್ತಿದ್ದಂತೆ ಶಾಲೆ ಆಡಳಿತ ಮಂಡಳಿ ಇದೀಗ ಕ್ಷಮೆಯಾಚಿಸಿದೆ. ಸ್ವಾಗತ ನೃತ್ಯದಲ್ಲಿ 30 ಸೆಕೆಂಡ್ ಆಜಾನ್ ಗೆ ವಿದ್ಯಾರ್ಥಿಗಳು ನೃತ್ಯ ಮಾಡಿದ್ದಾರೆ. ಯಾರ ಧಾರ್ಮಿಕ ಭಾವನೆಯನ್ನು ಘಾಸಿಗೊಳಿಸುವ ಉದ್ದೇಶ ನಮ್ಮದಾಗಿರಲಿಲ್ಲ. ಹಿಂದೂಗಳ ಭಾವನೆಗೆ ಧಕ್ಕೆ ಉಂಟಾಗಿದ್ದರೆ ಕ್ಷಮೆಯಾಚಿಸುತ್ತೇವೆ ಎಂದು ಶಾಲಾ ಆಡಳಿತ ಮಂಡಳಿಯ ಮುಖ್ಯಸ್ಥರು ಹೇಳಿದ್ದಾರೆ.

ಇನ್ನು ಕೆಲ ಪ್ರತಿಭಟನಾಕಾರರು ರಾಷ್ಟ್ರೀಯ ಏಕತೆಗೆ ರಾಷ್ಟ್ರಗೀತೆಗಿಂದ ಬೇರೆ ಹಾಡು ಇರಲು ಸಾಧ್ಯವಿಲ್ಲ. ರಾಷ್ಟ್ರಗೀತೆಯನ್ನೇ ನುಡಿಸಬೇಕಿತ್ತು ಎಂದು ಹೇಳಿದ್ದಾರೆ.

ಹಿಂದೂ ಜನಜಾಗೃತಿ ಸಮಿತಿಯ ವಕ್ತಾರ ಮೋಹನ್ ಗೌಡ ಮಾತನಾಡಿ, ‘ಹಿಂದೂ ವಿದ್ಯಾರ್ಥಿಗಳಿಗೆ ನಮಾಜ್ ಮಾಡುವಂತೆ ಒತ್ತಾಯಿಸಿದ ಶಾಲಾ ಆಡಳಿತ ಮಂಡಳಿ’ಯನ್ನು ಖಂಡಿಸಿದರು.

ಈ ಹಿಂದೆಯೂ ಶಾಲೆಯು ಹಿಂದೂ ವಿದ್ಯಾರ್ಥಿಗಳಿಗೆ ಹಣೆಗೆ ಬಿಂದಿ, ಬಳೆ, ಕಾಲ್ಗೆಜ್ಜೆ ಧರಿಸುವುದನ್ನು ನಿಷೇಧಿಸಿತ್ತು. ಇದು ಕರ್ನಾಟಕ ಶಿಕ್ಷಣ ಕಾಯ್ದೆಗೆ ವಿರುದ್ಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಈ ಕುರಿತು ರಾಷ್ಟ್ರೀಯ ಮಕ್ಕಳ ಹಕ್ಕು ಆಯೋಗ ಹಾಗೂ ರಾಜ್ಯ ಶಿಕ್ಷಣ ಇಲಾಖೆಗೆ ದೂರು ನೀಡುವುದಾಗಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com