ಟ್ವಿಟರ್ ಖಾತೆ ನಿರ್ಬಂಧ: ವಿಚಾರಣೆ ಡಿಸೆಂಬರ್ 12ಕ್ಕೆ ಮುಂದೂಡಿದ ಹೈಕೋರ್ಟ್

ಕೆಲವು ಟ್ವಿಟರ್ ಖಾತೆಗಳನ್ನು ನಿರ್ಬಂಧಿಸುವಂತೆ ಕೇಂದ್ರ ಸರ್ಕಾರ ಹೊರಡಿಸಿರುವ ಆದೇಶದ ವಿರುದ್ಧ ಮೈಕ್ರೋಬ್ಲಾಗಿಂಗ್ ಸೈಟ್ ಟ್ವಿಟರ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಡಿಸೆಂಬರ್ 12ಕ್ಕೆ ಮುಂದೂಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಕೆಲವು ಟ್ವಿಟರ್ ಖಾತೆಗಳನ್ನು ನಿರ್ಬಂಧಿಸುವಂತೆ ಕೇಂದ್ರ ಸರ್ಕಾರ ಹೊರಡಿಸಿರುವ ಆದೇಶದ ವಿರುದ್ಧ ಮೈಕ್ರೋಬ್ಲಾಗಿಂಗ್ ಸೈಟ್ ಟ್ವಿಟರ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಡಿಸೆಂಬರ್ 12ಕ್ಕೆ ಮುಂದೂಡಿದೆ.

ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ, ಪ್ರಕರಣದಲ್ಲಿ ತನ್ನ ವಾದವನ್ನು ಮಂಡಿಸಲು ಸಮಯ ಕೋರಿದ ನಂತರ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರು ಪ್ರಕರಣವನ್ನು ಬುಧವಾರಕ್ಕೆ ಮುಂದೂಡಿದರು.

ಕೆಲವು ಟ್ವೀಟ್‌ಗಳು, ಖಾತೆಗಳು ಮತ್ತು ಯುಆರ್ ಎಲ್ ಗಳನ್ನು ತೆಗೆದುಹಾಕುವಂತೆ ಕೇಂದ್ರ ಸರ್ಕಾರ ಹೊರಡಿಸಿದ ಆದೇಶವನ್ನು ಪ್ರಶ್ನಿಸಿ ಟ್ವಿಟರ್ ಹೈಕೋರ್ಟ್‌ಗೆ ಮೊರೆ ಹೋಗಿದೆ.

ಸುಳ್ಳು ಸುದ್ದಿ ಹಾಗೂ ಉದ್ದೇಶಪೂರ್ವಕ ಅಸಂಬದ್ಧ ಮಾಹಿತಿ ಹಂಚಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಟ್ವಿಟರ್‌ನಂಥ ವೇದಿಕೆಗಳು ಪರಿಣಾಮಕಾರಿ ಕ್ರಮಕೈಗೊಳ್ಳುತ್ತಿಲ್ಲ. ದೇಶದ ಸಮಗ್ರತೆ ಮತ್ತು ಸಾರ್ವಭೌಮತೆ, ರಾಷ್ಟ್ರೀಯ ಹಿತಾಸಕ್ತಿ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಸಂಬಂಧಿಸಿದ ತಪ್ಪು ಮಾಹಿತಿಗಳು ಹೆಚ್ಚಾಗುತ್ತಿವೆ ಎಂದು ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com