ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 19 ರಿಂದ 29 ರವರೆಗೆ ಚಳಿಗಾಲದ ಅಧಿವೇಶನ
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 19 ರಿಂದ 29 ರವರೆಗೆ ಚಳಿಗಾಲದ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
Published: 17th November 2022 07:40 PM | Last Updated: 17th November 2022 07:58 PM | A+A A-

ಬೆಳಗಾವಿ ಸುವರ್ಣ ವಿಧಾನಸೌಧ
ಬೆಂಗಳೂರು: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 19 ರಿಂದ 29 ರವರೆಗೆ ಚಳಿಗಾಲದ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಈ ಮಾಹಿತಿ ನೀಡಿದ ಸಚಿವ ಸುಧಾಕರ್, ಈ ಬಾರಿ ಬೆಳಗಾವಿಯಲ್ಲೇ ಹತ್ತು ದಿನ ಚಳಿಗಾಲದ ಅಧಿವೇಶನ ನಡೆಸುವ ಬಗ್ಗೆ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ತಿಳಿಸಿದರು.
The Winter session of the Karnataka Legislative Assembly will be held from 19th to 29th December in Belagavi.
— ANI (@ANI) November 17, 2022
ಈ ಮಧ್ಯೆ ಯಾವುದೇ ರೀತಿಯ ಗೊಂದಲ ಉಂಟಾಗದಂತೆ ಉತ್ತಮ ರೀತಿಯಲ್ಲಿ ಅಧಿವೇಶನ ನಡೆಸಲಾಗುವುದು ಎಂದು ವಿಧಾಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಧಾರವಾಡದಲ್ಲಿ ಹೇಳಿದ್ದಾರೆ.