ಹಾಸನ: ಮಕ್ಕಳನ್ನು ಭೇಟಿಯಾಗಲು ನಿರಾಕರಿಸಿದ ಪತ್ನಿ, ಪೆಟ್ರೋಲ್ ಎರಚಿ ಮಧ್ಯರಾತ್ರಿ ಮನೆಗೆ ಬೆಂಕಿ ಹಚ್ಚಿದ ಪತಿ

ಆಘಾತಕಾರಿ ಘಟನೆಯೊಂದರಲ್ಲಿ ಶುಕ್ರವಾರ ಮಧ್ಯರಾತ್ರಿ ವ್ಯಕ್ತಿಯೊಬ್ಬ ತನ್ನ ಮಕ್ಕಳನ್ನು ಭೇಟಿಯಾಗಲು ಹೆಂಡತಿ ನಿರಾಕರಿಸಿದ್ದಕ್ಕೆ ಕೋಪಗೊಂಡು ಮನೆಗೆ ಬೆಂಕಿ ಹಚ್ಚಿದ್ದಾನೆ ಎನ್ನಲಾಗಿದೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ಹಾಸನ: ಆಘಾತಕಾರಿ ಘಟನೆಯೊಂದರಲ್ಲಿ ಶುಕ್ರವಾರ ಮಧ್ಯರಾತ್ರಿ ವ್ಯಕ್ತಿಯೊಬ್ಬ ತನ್ನ ಮಕ್ಕಳನ್ನು ಭೇಟಿಯಾಗಲು ಹೆಂಡತಿ ನಿರಾಕರಿಸಿದ್ದಕ್ಕೆ ಕೋಪಗೊಂಡು ಮನೆಗೆ ಬೆಂಕಿ ಹಚ್ಚಿದ್ದಾನೆ ಎನ್ನಲಾಗಿದೆ.

ಈ ಘಟನೆ ಹಾಸನ ಜಿಲ್ಲೆಯ ದೊಡ್ಡಬೀಕನಹಳ್ಳಿ ಗ್ರಾಮದಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಘಟನೆಯಲ್ಲಿ ಪತ್ನಿ ಗೀತಾ, ಅವರ ಮಕ್ಕಳಾದ ಏಳು ವರ್ಷದ ಚಿರಂತನ್ ಮತ್ತು ಐದು ವರ್ಷದ ನಂದನ್ ಅವರಿಗೆ ತೀವ್ರ ಸುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೊಲೀಸರ ಪ್ರಕಾರ, ರಂಗಸ್ವಾಮಿ ಮತ್ತು ಗೀತಾ ಎಂಬ ದಂಪತಿ ಆಸ್ತಿಗಾಗಿ ಜಗಳವಾಡುತ್ತಿದ್ದರು ಮತ್ತು ಈ ಸಂಬಂಧ ಗೊರೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪರಸ್ಪರ ದೂರುಗಳನ್ನು ಸಹ ದಾಖಲಿಸಿದ್ದಾರೆ.

ದಂಪತಿ ನಾಲ್ಕು ತಿಂಗಳಿನಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದು, ಗೀತಾ ಇಬ್ಬರು ಮಕ್ಕಳನ್ನು ತನ್ನ ಬಳಿಯೇ ಇಟ್ಟುಕೊಂಡಿದ್ದರು. ಪತಿ ರಂಗಸ್ವಾಮಿ ಮಕ್ಕಳನ್ನು ಭೇಟಿ ಮಾಡಿ ಅವರ ಜೊತೆ ಕಾಲ ಕಳೆಯುತ್ತಿದ್ದರು. ಆದರೆ, ಶುಕ್ರವಾರ ಗೀತಾ ತನ್ನ ಮಕ್ಕಳನ್ನು ಭೇಟಿಯಾಗಲು ರಂಗಸ್ವಾಮಿಗೆ ಅವಕಾಶ ನಿರಾಕರಿಸಿದ್ದರು.

ಹಲವು ಭಾರಿ ಪ್ರಯತ್ನಿಸಿದರೂ, ಗೀತಾ ತನ್ನ ಮಕ್ಕಳನ್ನು ಭೇಟಿಯಾಗಲು ಆತನಿಗೆ ಅವಕಾಶ ನಿರಾಕರಿಸಿದ್ದಾರೆ. ಇದರಿಂದ ಕೋಪಗೊಂಡ ರಂಗಸ್ವಾಮಿ ಮಧ್ಯರಾತ್ರಿ, ಪತ್ನಿ ತನ್ನ ಮಕ್ಕಳೊಂದಿಗೆ ಮನೆಯೊಳಗೆ ಮಲಗಿದ್ದಾಗ ಪೆಟ್ರೋಲ್ ಎರಚಿ ಮನೆಗೆ ಬೆಂಕಿ ಹಚ್ಚಿದ್ದಾನೆ.

ಮನೆ ಹೊತ್ತಿ ಉರಿಯುತ್ತಿರುವುದನ್ನು ಕಂಡ ಅಕ್ಕಪಕ್ಕದ ಮನೆಯವರು ಬಂದು ತಾಯಿ ಮತ್ತು ಮಕ್ಕಳಿಗೆ ಸಹಾಯ ಮಾಡಿದ್ದಾರೆ. ಅವರನ್ನು ಮನೆಯಿಂದ ಹೊರಕರೆಂತದಿದ್ದಾರೆ.

ಮನೆ ಸುಟ್ಟು ಕರಕಲಾಗಿದ್ದು, ಪೊಲೀಸರು ರಂಗಸ್ವಾಮಿಯನ್ನು ಬಂಧಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com