ವನ್ಯಜೀವಿ ಮಂಡಳಿಗೆ ಸದಸ್ಯರಾಗಿ ನಟ ದರ್ಶನ್, ಸಚಿವ ಮಾಧುಸ್ವಾಮಿ ನೇಮಕ!
ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯಲ್ಲಿ ಖಾಲಿ ಇದ್ದ ಸದಸ್ಯ ಸ್ಥಾನಕ್ಕೆ ಚಿತ್ರನಟ ದರ್ಶನ್ ತೂಗುದೀಪ್ ಹಾಗೂ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ. ಮಾಧುಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ.
Published: 20th November 2022 10:16 AM | Last Updated: 20th November 2022 10:16 AM | A+A A-

ನಟ ದರ್ಶನ್-ಸಚಿವ ಮಾಧುಸ್ವಾಮಿ
ಬೆಂಗಳೂರು: ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯಲ್ಲಿ ಖಾಲಿ ಇದ್ದ ಸದಸ್ಯ ಸ್ಥಾನಕ್ಕೆ ಚಿತ್ರನಟ ದರ್ಶನ್ ತೂಗುದೀಪ್ ಹಾಗೂ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ. ಮಾಧುಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ.
ನಟ ದರ್ಶನ್ ಅವರು ವನ್ಯಜೀವಿ ಛಾಯಾಗ್ರಾಹಕ ಹಾಗೂ ಪ್ರಾಣಿಶಾಸ್ತ್ರ ಪ್ರಾಧಿಕಾರದ ಬ್ರಾಂಡ್ ಅಂಬಾಸಿಡರ್ ಆಗಿದ್ದು, ಈ ಹಿನ್ನೆಲೆಯಲ್ಲಿ ಅವರನ್ನು ನೇಮಕ ಮಾಡಲಾಗಿದೆ ಎಂದು ಅರಣ್ಯ ಇಲಾಖೆ ನವೆಂಬರ್ 15ರಂದು ಹೊರಡಿಸಿದ ಆದೇಶದಲ್ಲಿ ಉಲ್ಲೇಖಿಸಿದೆ.
.@dasadarshan & @JC_Madhuswamy now appointed as members of Karnataka state wildlife Board, on till October 15, 2023@NewIndianXpress @XpressBengaluru @KannadaPrabha @santwana99 @Cloudnirad @Amitsen_TNIE @aranya_kfd @KumarPushkarifs @nammabengaluru @NammaKarnataka_ @moefcc
— Bosky Khanna (@BoskyKhanna) November 19, 2022
ಅಂತೆಯೇ ಮಂಡಳಿಯ ಸದಸ್ಯರಾಗಿದ್ದ ವಿಧಾನಪರಿಷತ್ತಿನ ಬಿಜೆಪಿ ಸದಸ್ಯ ಶಾಂತರಾಮ ಸಿದ್ದಿ ಅವರ ಬದಲು ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ. ಮಾಧುಸ್ವಾಮಿ ಅವರನ್ನು ಸದಸ್ಯರಾಗಿ ನೇಮಕ ಮಾಡಲಾಗಿದೆ. ಇಬ್ಬರ ಸದಸ್ಯತ್ವದ ಅವಧಿ 2023 ರ ಅಕ್ಟೋಬರ್ 15ರವರೆಗೆ ಅಥವಾ ಮುಂದಿನ ಆದೇಶದವರೆಗೆ ಇರಲಿದೆ.