

ಬೆಂಗಳೂರು: ಕಾಡಾನೆ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ನಾಲ್ಕು ಜಿಲ್ಲೆಗಳಲ್ಲಿ ಆನೆ ಟಾಸ್ಕ್ ಫೋರ್ಸ್ ರಚಿಸಲು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ನಿರ್ಧರಿಸಿ, ಸರ್ಕಾರಿ ಆದೇಶ ಹೊರಬಿದ್ದಿದೆ.
ಹಾಸನ, ಚಿಕ್ಕಮಗಳೂರು, ಮೈಸೂರು, ಮತ್ತು ಕೊಡಗು ಜಿಲ್ಲೆಗಳಲ್ಲಿ ಕಾಡಾನೆ ಹಾವಳಿ ಹೆಚ್ಚಳ ವಾಗಿರುವುದರಿಂದ ಇದನ್ನು ತಡೆಗಟ್ಟಲು ಪ್ರತಿ ಜಿಲ್ಲೆಗೊಂದರಂತೆ ಉಪಅರಣ್ಯ ಸಂರಕ್ಷಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಎಲಿಫಾಂಟ್ ಟಾಸ್ಕ್ ಫೋರ್ಸ್ ರಚಿಸಲಾಗುವುದು.
ಟಾಸ್ಕ್ ಫೋರ್ಸ್ ಗಳನ್ನು ತಕ್ಷಣ ದಿಂದಲೇ ರಚಿಸಿ ಕಾರ್ಯಪ್ರವೃತ್ತರಾಗಬೇಕಿದ್ದು, ಆಯಾ ಅರಣ್ಯ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ನಿರ್ದೇಶನದಲ್ಲಿ ಜಾರಿಗೆ ತರಬೇಕಿರುವ ಅಂಶಗಳು ಇಂತಿವೆ.