ವೋಟರ್ ಐಡಿ ಹಗರಣ: ನಾಪತ್ತೆಯಾಗಿದ್ದ ಚಿಲುಮೆ ಆಡಳಿತಾಧಿಕಾರಿ ಲೋಕೇಶ್ ಬಂಧನ

ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ವೋಟರ್​ ಐಡಿ ಹಗರಣ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಚಿಲುಮೆ ಸಂಸ್ಥೆಯ ಆಡಳಿತಾಧಿಕಾರಿ ಕೆ.ಎಂ.ಲೋಕೇಶ್ ಅವರನ್ನು ಮಂಗಳವಾರ ಹಲಸೂರು...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ವೋಟರ್​ ಐಡಿ ಹಗರಣ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಚಿಲುಮೆ ಸಂಸ್ಥೆಯ ಆಡಳಿತಾಧಿಕಾರಿ ಕೆ.ಎಂ.ಲೋಕೇಶ್ ಅವರನ್ನು ಮಂಗಳವಾರ ಹಲಸೂರು ಗೇಟ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ಲೋಕೇಶ್ ನನ್ನು ಇಂದು ಸಂಜೆ ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಪಡೆಯಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸಗೌಡ ಅವರು ತಿಳಿಸಿದ್ದಾರೆ.

ಕಾಡುಗೋಡಿ ಮತ್ತು ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎರಡು ಎಫ್ಐಆರ್ ನಲ್ಲಿ ಲೋಕೇಶ್ ಹೆಸರು ಉಲ್ಲೇಖವಾಗಿತ್ತು. ಆತನನ್ನು ಬಂಧಿಸಿ ಒಂದು ರೌಂಡ್ ವಿಚಾರಣೆ ನಡೆಸಲಾಗಿದೆ. ಹೆಚ್ಚಿನ ವಿಚಾರಣೆ ಮಾಡಲಾಗುತ್ತಿದೆ ಎಂದು ಶ್ರೀನಿವಾಸಗೌಡ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ನಡೆದಿದ್ದು ಎಂದು ದೂರು ದಾಖಲಾಗುತ್ತಿದ್ದಂತೆಯೇ  ಲೋಕೇಶ್ ತಲೆಮರೆಸಿಕೊಂಡಿದ್ದ. ಆತನ ಬಂಧನಕ್ಕಾಗಿ ವಿಶೇಷ ತಂಡ ರಚಿಸಲಾಗಿತ್ತು. ಇದೀಗ ಪ್ರಕರಣದ ಪ್ರಮುಖ ಆರೋಪಿ, ಚಿಲುಮೆ ಮುಖ್ಯಸ್ಥ ರವಿಕುಮಾರ್ ಹಾಗೂ ಅದರ ಆಡಳಿತಾಧಿಕಾರಿ ಲೋಕೇಶ್ ​ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com