
ಗೋಪಾಲಸ್ವಾಮಿ ಆನೆ
ಮೈಸೂರು: ಕಾಡಾನೆ ಜೊತೆ ಕಾದಾಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದಸರಾ ಆನೆ ಗೋಪಾಲಸ್ವಾಮಿ ಬುಧವಾರ ಮೃತಪಟ್ಟಿದೆ.
ನಾಗರಹೊಳೆ ಮತ್ತಿಗೋಡು ಆನೆ ಶಿಬಿರದಲ್ಲಿದ್ದ ಗೋಪಾಲಸ್ವಾಮಿ ಆನೆ ಮಂಗಳವಾರ ಕಾಡಿಗೆ ಮೇಯಲು ಹೋಗಿದ್ದಾಗ ಕಾಡಾನೆ ಜೊತೆಗೆ ಕಾದಾಟ ನಡೆಸಿ, ಗಂಭೀರವಾಗಿ ಗಾಯಗೊಂಡಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿರುವುದಾಗಿ ವರದಿಯಾಗಿದೆ.
ಈ ಬಾರಿಯ ದಸರಾದಲ್ಲಿ ಮರದ ಅಂಬಾರಿ ಹೊತ್ತಿದ್ದ ಗೋಪಾಲಸ್ವಾಮಿ 14 ಬಾರಿ ದಸರಾ ಮಹೋತ್ಸವದಲ್ಲಿ ಭಾಗಿಯಾಗಿತ್ತು. ಅಲ್ಲದೇ, ಹುಲಿ, ಕಾಡಾನೆ ಸೆರೆ ಕಾರ್ಯಾಚರಣೆಗೆ ಅರಣ್ಯ ಇಲಾಖೆ ಸಿಬ್ಬಂದಿ ಗೋಪಾಲಸ್ವಾಮಿ ಆನೆಯನ್ನು ಬಳಸುತ್ತಿದ್ದರು.
Gopalswamy, camp elephant in @nagaraholetr succumbs to injuries after infight with wild tusker on Wednesday@NewIndianXpress @XpressBengaluru @KannadaPrabha @Cloudnirad @Amitsen_TNIE @KumarPushkarifs @moefcc @TheWesternGhat @wildmysuru @ZP_Chamrajnagar @byadavbjp pic.twitter.com/tu3NWdR53E
— Bosky Khanna (@BoskyKhanna) November 23, 2022
ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯ ಮೆರವಣಿಗೆಯಲ್ಲಿ ಪಾಲ್ಗೊಳ್ಳುತ್ತಿದ್ದ ಆನೆ ಗೋಪಾಲಸ್ವಾಮಿ ಹುಣಸೂರಿನ ಮತ್ತಿಗೋಡು ಶಿಬಿರದಲ್ಲಿ ಕಾಡಾನೆ ಜೊತೆ ಕಾದಾಡಿ ಸಾವನ್ನಪ್ಪಿರುವ ಸುದ್ದಿ ತಿಳಿದು ಬೇಸರವಾಯಿತು. ಗಜರಾಜನ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ಓಂ ಶಾಂತಿಃ https://t.co/QufpUhvlk0
— Basavaraj S Bommai (@BSBommai) November 23, 2022