ಮತದಾರರ ಮಾಹಿತಿ ಕಳವು ಪ್ರಕರಣ: ಚುನಾವಣಾ ಆಯೋಗಕ್ಕೆ ದೂರು ನೀಡಲು ಡಿಕೆ ಶಿವಕುಮಾರ್ ಮುಂದು

ಮತದಾರರ ಪಟ್ಟಿಯಿಂದ 27 ಲಕ್ಷ ಹೆಸರುಗಳನ್ನು ಅಳಿಸಿರುವ ಕುರಿತು ಪ್ರಶ್ನೆ ಎತ್ತಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು, ಈ ಕುರಿತು ಬುಧವಾರ ಚುನಾವಣಾ ಆಯೋಗವನ್ನು ಭೇಟಿ ಮಾಡಿ ಔಪಚಾರಿಕವಾಗಿ ದೂರು ಸಲ್ಲಿಸಲು ಮುಂದಾಗಿದ್ದಾರೆ.
ಡಿಕೆ.ಶಿವಕುಮಾರ್
ಡಿಕೆ.ಶಿವಕುಮಾರ್

ಬೆಂಗಳೂರು: ಮತದಾರರ ಪಟ್ಟಿಯಿಂದ 27 ಲಕ್ಷ ಹೆಸರುಗಳನ್ನು ಅಳಿಸಿರುವ ಕುರಿತು ಪ್ರಶ್ನೆ ಎತ್ತಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು, ಈ ಕುರಿತು ಬುಧವಾರ ಚುನಾವಣಾ ಆಯೋಗವನ್ನು ಭೇಟಿ ಮಾಡಿ ಔಪಚಾರಿಕವಾಗಿ ದೂರು ಸಲ್ಲಿಸಲು ಮುಂದಾಗಿದ್ದಾರೆ.

ಈ ಕುರಿತು ಮಾತನಾಡಿರುವ ಡಿಕೆ.ಶಿವಕುಮಾರ್ ಅವರು, "ಮತದಾರರ ಹೆಸರುಗಳನ್ನು ಸೇರಿಸಲು ಅಥವಾ ತೆಗೆದುಹಾಕಲು ಮತದಾರರ ಪಟ್ಟಿಯಿಂದ 'ಫಾರ್ಮ್ 7' ಕಡ್ಡಾಯವಾಗಿದ್ದರೂ, ಯಾವುದೇ ಕಡ್ಡಾಯ ಕಾರ್ಯವಿಧಾನವನ್ನು ಅನುಸರಿಸದೆ 27 ಲಕ್ಷ ಹೆಸರುಗಳನ್ನು ತೆಗೆದುಹಾಕಿರುವುದು ಹೇಗೆ? ಈ ಅರ್ಜಿಗಳಿಗೆ ಸಹಿ ಹಾಕಿ ಅಧಿಕಾರ ನೀಡಿದ ಅಧಿಕಾರಿ ಯಾರು?'' ಎಂದು ಪ್ರಶ್ನಿಸಿದ್ದಾರೆ.

ಈ ಸಂಬಂಧ ಔಪಚಾರಿಕ ದೂರು ದಾಖಲಿಸಲು ಚುನಾವಣಾ ಆಯೋಗದಿಂದ ಬುಧವಾರ ಸಮಯ ಕೋರಿದ್ದೇವೆ ಎಂದು ಕಾಂಗ್ರೆಸ್ ಹಿರಿಯ ನಾಯಕರು ಹೇಳಿದ್ದಾರೆ.

ಈ ವಿಚಾರದಲ್ಲಿ ಸಾಕಷ್ಟು ಕಾನೂನು ಅಂಶಗಳಿದ್ದು, ಅದನ್ನು ಪರಿಹರಿಸಬೇಕಾಗಿದೆ. ಎಲ್ಲಾ 28 ಕ್ಷೇತ್ರ ಚುನಾವಣಾಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಬೇಕಿದೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com