ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮತದಾರರ ಮಾಹಿತಿ ಕಳವು ಪ್ರಕರಣ: ಮಾಹಿತಿ ಪಡೆಯಲು ಬಿಬಿಎಂಪಿ ಕಚೇರಿಗೆ ಇಸಿಐ ಉನ್ನತಾಧಿಕಾರಿಗಳ ಭೇಟಿ

ಗುರುವಾರ ಪಾಲಿಕೆ ಕೇಂದ್ರ ಕಚೇರಿಗೆ ಭೇಟಿ ನೀಡಲಿರುವ ಉಪ ಚುನಾವಣಾ ಆಯುಕ್ತರಿಗೆ (ಡಿವೈ ಇಸಿ) ಸಹಕರಿಸುವಂತೆ ಹಾಗೂ ಎಲ್ಲ ಮಾಹಿತಿಯನ್ನು ಸಿದ್ಧವಾಗಿಟ್ಟುಕೊಳ್ಳುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳಿಗೆ ಮುಖ್ಯ ಚುನಾವಣಾ ಆಯೋಗ ಬುಧವಾರ ಸೂಚಿಸಿದೆ.

ಬೆಂಗಳೂರು: ಗುರುವಾರ ಪಾಲಿಕೆ ಕೇಂದ್ರ ಕಚೇರಿಗೆ ಭೇಟಿ ನೀಡಲಿರುವ ಉಪ ಚುನಾವಣಾ ಆಯುಕ್ತರಿಗೆ (ಡಿವೈ ಇಸಿ) ಸಹಕರಿಸುವಂತೆ ಹಾಗೂ ಎಲ್ಲ ಮಾಹಿತಿಯನ್ನು ಸಿದ್ಧವಾಗಿಟ್ಟುಕೊಳ್ಳುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳಿಗೆ ಮುಖ್ಯ ಚುನಾವಣಾ ಆಯೋಗ ಬುಧವಾರ ಸೂಚಿಸಿದೆ.

ಮತದಾರರ ದತ್ತಾಂಶ ಕಳ್ಳತನ ಪ್ರಕರಣ, ಎನ್‌ಜಿಒ ಸೋಗು ಮತ್ತು ಕರಡು ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ವಿವರಗಳನ್ನು ಪಡೆಯಲು ಡಿವೈಸಿಇಸಿ ನಗರಕ್ಕೆ ಭೇಟಿ ನೀಡುತ್ತಿದ್ದಾರೆ ಎಂದು ಬಿಬಿಎಂಪಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದಷ್ಟೇ ಅಲ್ಲದೆ, 2023ರ ಏಪ್ರಿಲ್‌ನಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದ್ದು, ಈ ನಿಟ್ಟಿನಲ್ಲಿ ರಾಜ್ಯ ಚುನಾವಣಾ ಆಯೋಗ ಮತ್ತು ಬಿಬಿಎಂಪಿ ಕರಡು ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಕಂದಾಯ ಅಧಿಕಾರಿಗಳು, ಬೂತ್ ಮಟ್ಟದ ಅಧಿಕಾರಿಗಳು ಮತ್ತು ಮತದಾರರ ಎಣಿಕೆಗಾಗಿ ಬೂತ್ ಮಟ್ಟದ ಸಮಿತಿಯಿಂದ ಮನೆ-ಮನೆ ಸಮೀಕ್ಷೆಗೆ ಸಿದ್ಧತೆಗಳನ್ನು ಪರಿಶೀಲಿಸಲು ಭೇಟಿ ನೀಡುತ್ತಿದ್ದಾರೆಂದು ತಿಳಿಸಿದ್ದಾರೆ.

ಮತದಾರರ ದತ್ತಾಂಶ ಕಳವು ಆರೋಪ, ಎನ್‌ಜಿಒ ಸಿಬ್ಬಂದಿಗಳು ಬೂತ್ ಮಟ್ಟದ ಅಧಿಕಾರಿಗಳಂತೆ ನಟಿಸುವುದು, ಬೆಂಗಳೂರಿನಲ್ಲಿ ಬೂತ್ ಮಟ್ಟದ ಸಮಿತಿ, ಎನ್‌ಜಿಒ ಅಧಿಕಾರಿಗಳ ಬಂಧನ, ಎನ್‌ಜಿಒಗೆ ಗುರುತಿನ ಚೀಟಿ ಪಡೆಯಲು ಸಹಾಯ ಮಾಡಿದ ಆರೋಪದಲ್ಲಿ ಬಿಬಿಎಂಪಿ ಕಂದಾಯ ಅಧಿಕಾರಿಗಳ ಅಮಾನತು ಕುರಿತು ಸಿಇಸಿ ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಪಡೆಯಬಹುದು. ಹೀಗಾಗಿ ಈ ಸಂಬಂಧ ವರದಿಗಳನ್ನು ಸಿದ್ಧವಾಗಿಡಲು ನಮಗೆ ತಿಳಿಸಲಾಗಿದೆ ಎಂದು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಹಾಯಕ ಜಿಲ್ಲಾ ಚುನಾವಣಾಧಿಕಾರಿ ತಿಳಿಸಿದ್ದಾರೆ.

ಈ ನಡುವೆ ಹಲಸೂರು ಪೊಲೀಸರು ಚಿಲುಮೆ ನಿರ್ದೇಶಕರಾದ ಕೆಂಪೇಗೌಡ, ರವಿಕುಮಾರ್ ಹಾಗೂ ಸಿಬ್ಬಂದಿಗಳಾದ ಧರ್ಮೇಶ್, ರೇಣುಕಾಪ್ರಸಾದ್, ಲೋಕೇಶ್ ಅವರನ್ನು ಶನಿವಾರ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಎನ್‌ಜಿಒಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಬೆಂಗಳೂರು ಪೂರ್ವ ತಹಶೀಲ್ದಾರ್ ಆಗಿ ಸೇವೆ ಸಲ್ಲಿಸಿದ ಅಧಿಕಾರಿಗಳ ವಿರುದ್ಧವೂ ಬೆಂಗಳೂರು ಜಿಲ್ಲಾಧಿಕಾರಿ ತನಿಖೆಗೆ ಆದೇಶಿಸಲಾಗಿದೆ ಎಂದು ತಿಳಿದುಬಂದಿದೆ.

Related Stories

No stories found.

Advertisement

X
Kannada Prabha
www.kannadaprabha.com