ಕದ್ರಿ ದೇವಸ್ಥಾನ ನಮ್ಮ ಟಾರ್ಗೆಟ್ ಆಗಿತ್ತು: ಮಂಗಳೂರು ಸ್ಫೋಟದ ಹೊಣೆ ಹೊತ್ತುಕೊಂಡ 'ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್' ಸಂಘಟನೆ

ಮಂಗಳೂರಿನ ಆಟೋರಿಕ್ಷಾದಲ್ಲಿ ಸಂಭವಿಸಿದ ಸ್ಫೋಟ ಪ್ರಕರಣದ ಹೊಣೆಯನ್ನು ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ ಎಂಬ ಉಗ್ರ ಸಂಘಟನೆ ಹೊತ್ತುಕೊಂಡಿದ್ದು, ಕದ್ರಿ ದೇವಸ್ಥಾನ ನಮ್ಮ ಗುರಿಯಾಗಿತ್ತು ಎಂದು ಹೇಳಿದೆ.
ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್
ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್

ಮಂಗಳೂರು: ಮಂಗಳೂರಿನ ಆಟೋರಿಕ್ಷಾದಲ್ಲಿ ಸಂಭವಿಸಿದ ಸ್ಫೋಟ ಪ್ರಕರಣದ ಹೊಣೆಯನ್ನು ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ ಎಂಬ ಉಗ್ರ ಸಂಘಟನೆ ಹೊತ್ತುಕೊಂಡಿದ್ದು, ಕದ್ರಿ ದೇವಸ್ಥಾನ ನಮ್ಮ ಗುರಿಯಾಗಿತ್ತು ಎಂದು ಹೇಳಿದೆ.

ಈ ಕುರಿತು ಪೋಸ್ಟ್ ವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ವೈರಲ್ ಆಗಿದೆ. ಈ ನಡುವೆ ಕೆಲ ವಿಚಾರಗಳ ಕುರಿತಂತೆ ಉಗ್ರ ಸಂಘಟನೆ ಪೋಸ್ಟ್'ನಲ್ಲಿ ಹೇಳಿದ್ದು, ಈ ಬಗ್ಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

'ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್' ಉಗ್ರ ಸಂಘಟನೆ ಪೋಸ್ಟ್ ಹಂಚಿಕೊಂಡಿದ್ದು, ಮೂಲವಾಗಿ ಕದ್ರಿ ದೇವಸ್ಥಾನದ ಮೇಲೆ ದಾಳಿ ನಡೆಸಲು ಯೋಜನೆ ರೂಪಿಸಲಾಗಿತ್ತು. ಆದರೆ, ಉದ್ದೇಶಿತ ಗುರಿ ತಲುಪುವ ಮೊದಲೇ ಬಾಂಬ್ ಸ್ಫೋಟಗೊಂಡಿದೆ ಎಂದು ಸಂಘಟನೆ ಹೇಳಿರುವುದು ಪೋಸ್ಟ್ ನಲ್ಲಿ ಕಂಡು ಬಂದಿದೆ.

ನ.23ರಂದು ಪ್ರಕಟಿಸಲಾಗಿರುವ ಪೋಸ್ಟ್‌ ಜೊತೆ ಬಾಂಬ್‌ ದಾಳಿಯಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾರೀಕ್‌'ನ ಎರಡು ಫೋಟೋಗಳನ್ನೂ ಕೂಡ ಅಪ್ಲೋಡ್‌ ಮಾಡಲಾಗಿದೆ. ಅಲ್ಲದೇ, ಎಡಿಜಿಪಿ ಅಲೋಕ್‌ ಕುಮಾರ್‌ ಅವರಿಗೆ ಬೆದರಿಕೆ ಹಾಕಿರುವುದು ಕಂಡು ಬಂದಿದೆ.

ನಿಮ್ಮ ಸಂತೋಷವು ಅಲ್ಪಕಾಲಿಕವಾಗಿರುತ್ತದೆ ಮತ್ತು ನಿಮ್ಮ ದಬ್ಬಾಳಿಕೆಯ ಫಲವನ್ನು ನೀವು ಅನುಭವಿಸುತ್ತೀರಿ ಎಂದು ಹೇಳಿದೆ.

ರಾಜ್ಯದಲ್ಲಿ ಗುಂಪು ಹತ್ಯೆ, ದಬ್ಬಾಳಿಕೆಯ ಕಾನೂನುಗಳು ಮತ್ತು ಶಾಸನಗಳು ಮತ್ತು ಧರ್ಮದಲ್ಲಿ ಹಸ್ತಕ್ಷೇಪದ ನಡೆಯುವ ಮೂಲಕ ನಮ್ಮ ಮೇಲೆ ಯುದ್ಧ ಸಾರಲಾಗಿದೆ. ಈ ಯುದ್ಧಕ್ಕೆ ಪ್ರತಿಯಾಗಿ ದಾಳಿ ನಡೆಸಲಾಗುತ್ತಿದೆ ಎಂದು ಎಚ್ಚರಿಸಿದೆ.

ಕದ್ರಿಯಲ್ಲಿರುವ ಮಂಜುನಾಥ ದೇವಸ್ಥಾನ 10ನೇ ಶತಮಾನದಲ್ಲಿ ನಿರ್ಮಾಣವಾಗಿದ್ದು ಮಂಗಳೂರಿನ ಪ್ರಸಿದ್ಧ ದೇವಸ್ಥಾನವಾಗಿದೆ.

ಶಾರೀಕ್‌ ಪಂಪ್‌ವೆಲ್‌ ಬಳಿ ಬಾಂಬ್‌ ಸ್ಫೋಟ ನಡೆಸಲು ಪ್ಲ್ಯಾನ್‌ ನಡೆಸಿದ್ದ ಎಂಬ ಮಾಹಿತಿ ಆರಂಭದಲ್ಲಿ ಸಿಕ್ಕಿತ್ತು. ಆದರೆ, ಈಗ ಕದ್ರಿ ದೇವಸ್ಥಾನ ಟಾರ್ಗೆಟ್‌ ಆಗಿದ್ದರಿಂದ ಈ ಪ್ರಕರಣ ಈಗ ಮತ್ತೊಂದು ಮಹತ್ವದ ತಿರುವು ಪಡೆದುಕೊಂಡಿದೆ.

ನಾವು ಸಂಘಟನೆಯ ವಿಷಯಗಳ ಸತ್ಯಾಸತ್ಯತೆ ಮತ್ತು ನೈಜತೆಯನ್ನು ಪರಿಶೀಲಿಸುತ್ತಿದ್ದೇವೆ ಎಂದು ಎಡಿಜಿಪಿ, ಕಾನೂನು ಮತ್ತು ಸುವ್ಯವಸ್ಥೆ, ಅಲೋಕ್ ಕುಮಾರ್ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com