ಚಿಕ್ಕಮಗಳೂರು: ವಿದ್ಯಾರ್ಥಿನಿಯರಿಗೆ ಖಾಸಗಿ ಅಂಗ ತೋರಿಸಿ ಕಿರುಕುಳ: ವ್ಯಕ್ತಿಯ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು, ಪೋಕ್ಸೋ ಪ್ರಕರಣ ದಾಖಲು

ವಿದ್ಯಾರ್ಥಿನಿಯರಿಗೆ ಖಾಸಗಿ ಅಂಗ ತೋರಿಸಿ ಕಿರುಕುಳ ನೀಡುತ್ತಿದ್ದ ಆರೋಪದ ಮೇರೆಗೆ ವ್ಯಕ್ತಿಯೋರ್ವನನ್ನು ಗ್ರಾಮಸ್ಥರು ಕಂಬಕ್ಕೆ ಕಟ್ಟಿ ಥಳಿಸಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಗ್ರಾಮಸ್ಥರಿಂದ ಥಳಿತಕ್ಕೊಳಗಾದ ಆರೋಪಿ ರಾಜಪ್ಪ
ಗ್ರಾಮಸ್ಥರಿಂದ ಥಳಿತಕ್ಕೊಳಗಾದ ಆರೋಪಿ ರಾಜಪ್ಪ

ಚಿಕ್ಕಮಗಳೂರು: ವಿದ್ಯಾರ್ಥಿನಿಯರಿಗೆ ಖಾಸಗಿ ಅಂಗ ತೋರಿಸಿ ಕಿರುಕುಳ ನೀಡುತ್ತಿದ್ದ ಆರೋಪದ ಮೇರೆಗೆ ವ್ಯಕ್ತಿಯೋರ್ವನನ್ನು ಗ್ರಾಮಸ್ಥರು ಕಂಬಕ್ಕೆ ಕಟ್ಟಿ ಥಳಿಸಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಚಿಕ್ಕಮಗಳೂರಿನ ಸಕ್ಕರಾಯಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಆರೋಪಿ ರಾಜಪ್ಪ ವಿರುದ್ಧ ಚಿಕ್ಕಮಗಳೂರಿನ ಸಕ್ಕರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಇತರ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಸ್ಥಳೀಯರ ಪ್ರಕಾರ ಶಾಲೆಯಿಂದ ಶಿಕ್ಷಕರನ್ನು ಕರೆದುಕೊಂಡು ಬರುತ್ತಿದ್ದ ರಾಜಪ್ಪ ಅದೇ ಶಾಲೆಯ ವಿದ್ಯಾರ್ಥಿನಿಯರಿಗೆ ಖಾಸಗಿ ಅಂಗ ತೋರಿಸಿ ಅವರೊಂದಿಗೆ ಅನುಚಿತವಾಗಿ ವರ್ತಿಸಿ ಅವರ ಖಾಸಗಿ ಅಂಗಗಳನ್ನು ಮುಟ್ಟಿ ವಿಕೃತ ಆನಂದ ಪಡೆಯುತ್ತಿದ್ದ ಎನ್ನಲಾಗಿದೆ. ಈ ಕುರಿತು ವಿದ್ಯಾರ್ಥಿನಿಯರು ಪೋಷಕರಿಗೆ ಮಾಹಿತಿ ನೀಡಿದ್ದು, ಪೋಷಕರು ಗ್ರಾಮದ ಹಿರಿಯರಿಗೆ ಮಾಹಿತಿ ನೀಡಿದ್ದಾರೆ.

ಈ ವೇಳೆ ಆಕ್ರೋಶಿತ ಗ್ರಾಮಸ್ಥರು ಆರೋಪಿ ರಾಜಪ್ಪನನ್ನು ಹಿಡಿದು ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಆರೋಪಿ ರಾಜಪ್ಪನನ್ನು ವಶಕ್ಕೆ ಪಡೆದು ಪೋಕ್ಟೋ ಮತ್ತು ಇತರೆ ಕಾಯ್ದೆಗಳಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com