ರಾಮನಗರ: ಬಾಣಂತಿ ಡಿಸ್ಚಾರ್ಜ್ ಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ವೈದ್ಯರಾದ ಶಶಿಕಲಾ, ಐಶ್ವರ್ಯ ಅಮಾನತು
ಬಾಣಂತಿಯನ್ನು ಡಿಸ್ಚಾರ್ಜ್ ಮಾಡಲು 6000 ಲಂಚ ಕೇಳಿದ್ದ ರಾಮನಗರ ಜಿಲ್ಲೆ ಬಿಡದಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಲ್ಲಿ ಒಬ್ಬರಾಗಿರುವ ಪ್ರಸೂತಿ ತಜ್ಞೆ ಡಾ. ಶಶಿಕಲಾ ಹಾಗೂ ಡಾ. ಐಶ್ವರ್ಯರನ್ನು ಅಮಾನತು ಮಾಡಲಾಗಿದೆ.
Published: 26th November 2022 08:49 PM | Last Updated: 26th November 2022 09:23 PM | A+A A-

ವೈದ್ಯರಾದ ಶಶಿಕಲಾ-ಐಶ್ವರ್ಯ
ರಾಮನಗರ: ಬಾಣಂತಿಯನ್ನು ಡಿಸ್ಚಾರ್ಜ್ ಮಾಡಲು 6000 ಲಂಚ ಕೇಳಿದ್ದ ರಾಮನಗರ ಜಿಲ್ಲೆ ಬಿಡದಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಲ್ಲಿ ಒಬ್ಬರಾಗಿರುವ ಪ್ರಸೂತಿ ತಜ್ಞೆ ಡಾ. ಶಶಿಕಲಾ ಹಾಗೂ ಡಾ. ಐಶ್ವರ್ಯರನ್ನು ಅಮಾನತು ಮಾಡಲಾಗಿದೆ.
ಬಾಣಂತಿ ರೂಪ ಎಂಬುವರ ಡಿಸ್ಚಾರ್ಚ್ ಮಾಡಲು ವೈದ್ಯರು ಲಂಚಕ್ಕೆ ಬೇಡಿಕೆ ಇಟ್ಟಿದ್ದ ವಿಡಿಯೋ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಇಬ್ಬರನ್ನು ಅಮಾನತು ಮಾಡಲಾಗಿದೆ. ಇನ್ನು ವಿಡಿಯೋದಲ್ಲಿ ಮತ್ತೋಬ್ಬ ವೈದ್ಯನ ಹೆಸರು ಉಲ್ಲೇಖವಾಗಿರುವುದರಿಂದ ಆ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ರಾಮನಗರ ಡಿಎಚ್ಒ ಕಾಂತರಾಜು ಹೇಳಿದ್ದಾರೆ.
ಬಿಡದಿಯ ನಿಂಗೇಗೌಡ ದೊಡ್ಡಿಯ ಮಂಜಪ್ಪ ಅವರು ತಮ್ಮ ಪತ್ನಿ ರೂಪ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ರೂಪ ವಾರದ ಹಿಂದೆ ಮಗುವಿಗೆ ಜನ್ಮ ನೀಡಿದ್ದರು. ಹೀಗಾಗಿ ಡಿಸ್ಚಾರ್ಜ್ ಮಾಡುವಂತೆ ವೈದ್ಯರ ಬಳಿ ಕೇಳಿದಾಗ ಶಶಿಕಲಾ ಅವರು 6 ಸಾವಿರ ರೂಪಾಯಿ ಕೊಡುವಂತೆ ಬೇಡಿಕೆ ಇಟ್ಟಿದ್ದರು.