ರಾಜ್ಯ

ಬೆಳಗಾವಿ ಗಡಿ ವಿವಾದ: ಕಾನೂನು ತಜ್ಞರು, ಅಧಿಕಾರಿಗಳೊಂದಿಗೆ ಸಿಎಂ ಬೊಮ್ಮಾಯಿ ಸಭೆ

ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ಕಾನೂನು ತಜ್ಞರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಬೆಳಗಾವಿ ಗಡಿ ವಿವಾದ: ಕಾನೂನು ತಜ್ಞರು, ಅಧಿಕಾರಿಗಳೊಂದಿಗೆ ಸಿಎಂ ಬೊಮ್ಮಾಯಿ ಸಭೆ
ಕಾನೂನು ತಜ್ಞರು, ಅಧಿಕಾರಿಗಳೊಂದಿಗೆ ಸಿಎಂ ಬೊಮ್ಮಾಯಿ ಸಭೆ
Published On :

ಬೆಂಗಳೂರು: ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ಕಾನೂನು ತಜ್ಞರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಲ್ಲಿಸಿರುವ ಅರ್ಜಿ ಇದೇ 30 ರಂದು ಸರ್ವೋಚ್ಚ ನ್ಯಾಯಾಲಯದಲ್ಲಿ ವಿಚಾರಣೆಗೆ ಬರಲಿರುವ ಹಿನ್ನೆಲೆಯಲ್ಲಿ ಹಿರಿಯ ನ್ಯಾಯಮೂರ್ತಿಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ, ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಿದರು.

ಸಚಿವರಾದ ಗೋವಿಂದ ಕಾರಜೋಳ, ಆರಗ ಜ್ಞಾನೇಂದ್ರ, ರಾಜ್ಯ ಅಡ್ವೊಕೇಟ್  ಜನರಲ್ ಪ್ರಭುಲಿಂಗ ನಾವಡಗಿ, ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಹಾಗೂ ಕರ್ನಾಟಕ ಗಡಿ ಮತ್ತು ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷ  ಶಿವರಾಜ.ವಿ. ಪಾಟೀಲ್,  ಹಿರಿಯ ವಕೀಲರಾದ ಉದಯ ಹೊಳ್ಳ,ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ:ಸಿ.ಸೋಮಶೇಖರ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಮೊದಲಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.