ಬೆಂಗಳೂರು: 2023 ಫೆಬ್ರವರಿ 13 ರಿಂದ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ

ಏರೋ ಇಂಡಿಯಾದ 14ನೇ ಅವೃತ್ತಿಯ ವೈಮಾನಿಕ ಪ್ರದರ್ಶನ ಯಲಹಂಕದ ವಾಯುನೆಲೆಯಲ್ಲಿ 2023ರ ಫೆಬ್ರುವರಿ 13ರಿಂದ 17ರವರೆಗೆ ನಡೆಯಲಿದೆ ಎಂದು ರಕ್ಷಣಾ ಸಚಿವಾಲಯ ಭಾನುವಾರ ತಿಳಿಸಿದೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ಬೆಂಗಳೂರು: ಏರೋ ಇಂಡಿಯಾದ 14ನೇ ಅವೃತ್ತಿಯ ವೈಮಾನಿಕ ಪ್ರದರ್ಶನ ಯಲಹಂಕದ ವಾಯುನೆಲೆಯಲ್ಲಿ 2023ರ ಫೆಬ್ರುವರಿ 13ರಿಂದ 17ರವರೆಗೆ ನಡೆಯಲಿದೆ ಎಂದು ರಕ್ಷಣಾ ಸಚಿವಾಲಯ ಭಾನುವಾರ ತಿಳಿಸಿದೆ.

ಕೋವಿಡ್ ಮತ್ತು ಹಲವಾರು ನಿರ್ಬಂಧಗಳಿಗಾಗಿ 13ನೇ ಆವೃತ್ತಿಯನ್ನು 2021 ರಲ್ಲಿ ಹೈಬ್ರಿಡ್ ಮಾದರಿಯಲ್ಲಿ ನಡೆಸಲಾಗಿತ್ತು. ಸಾಂಪ್ರದಾಯಿಕವಾಗಿ ಐದು ದಿನಗಳ ಕಾಲ ನಡೆಯುತ್ತಿದ್ದ ಏಷ್ಯಾದ ಪ್ರೀಮಿಯರ್ ಏರ್ ಶೋ ಅನ್ನು ಮೂರು ದಿನಕ್ಕೆ ಮೊಟಕುಗೊಳಿಸಲಾಯಿತು.

14ನೇ ಆವೃತ್ತಿ ಐದು ದಿನಗಳ ಕಾಲ ನಿಗದಿಯಾಗಿದ್ದು, ಸಾರ್ವಜನಿಕರಿಗೂ ಅವಕಾಶ ಕಲ್ಪಿಸಲಾಗಿದೆ.
ಬೆಂಗಳೂರು ಮೂಲದ ರಕ್ಷಣಾ ಪಿಎಸ್‌ಯು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್ಎಎಲ್) ಈ ಕಾರ್ಯಕ್ರಮವನ್ನು ಆಯೋಜಿಸಲಿದ್ದು, ವಿಶ್ವದಾದ್ಯಂತ ಪ್ರದರ್ಶಕರು ಭಾಗವಹಿಸುವ ನಿರೀಕ್ಷೆಯಿದೆ. ಹಿಂದಿನ ಆವೃತ್ತಿಯಲ್ಲಿ 35ಕ್ಕೂ ಹೆಚ್ಚು ದೇಶಗಳ 500ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿದ್ದವು.

ವೈಮಾನಿಕ ಪ್ರದರ್ಶನವನ್ನು ಬೆಂಗಳೂರಿನಿಂದ ಲಖನೌಗೆ ಸ್ಥಳಾಂತರಿಸಲಾಗುವುದು ಎಂಬ ಊಹಾಪೋಹಗಳು ಮತ್ತು ವರದಿಗಳ ನಡುವೆ, ಏರೋ ಇಂಡಿಯಾ 2021 ಅನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗಿತ್ತು ಮತ್ತು ವೈಮಾನಿಕ ಪ್ರದರ್ಶನವನ್ನು ಆಯೋಜಿಸಲು ಬೆಂಗಳೂರು ಅತ್ಯುತ್ತಮ ನಗರ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸ್ಪಷ್ಟಪಡಿಸಿದ್ದರು.

ಏರೋಸ್ಪೇಸ್‌ಗೆ ಸಂಬಂಧಿಸಿದ ಹೆಚ್ಚಿನ ಕೈಗಾರಿಕೆಗಳು ಬೆಂಗಳೂರು ಮತ್ತು ಕರ್ನಾಟಕದಲ್ಲಿವೆ. ಹೀಗಾಗಿ ಈ ನಗರವು ಏರ್ ಶೋ ನಡೆಸಲು ಅತ್ಯಂತ ಸೂಕ್ತವಾದ ಸ್ಥಳವಾಗಿದೆ ಎಂದು ಸಿಂಗ್ ಹೇಳಿದ್ದರು.

‘ಏಷ್ಯಾದ ಅತೀ ದೊಡ್ಡ ವೈಮಾನಿಕ ಪ್ರದರ್ಶನ ಇದಾಗಿದ್ದು, ದೇಶ–ವಿದೇಶದ ಕಂಪನಿಗಳ ವಿಮಾನಗಳು ಪ್ರದರ್ಶನದಲ್ಲಿ ಪಾಲ್ಗೊಳ್ಳಲಿವೆ’ ಎಂದು ರಕ್ಷಣಾ ಸಚಿವಾಲಯದ ರಕ್ಷಣಾ ಉತ್ಪನ್ನಗಳ ತಯಾರಿಕಾ ಇಲಾಖೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿದೆ.

1996ರಿಂದ ಪ್ರತಿ ಎರಡು ವರ್ಷಕ್ಕೊಮ್ಮೆ ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ಈ ಪ್ರದರ್ಶನ ನಡೆಸಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com